* ಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಪಂಡಿತರ ಹತ್ಯೆ* ಮತ್ತೆ ಕಣಿವೆ ನಾಡಿನಲ್ಲಿ ಭೀತಿಯ ವಾತಾವರಣ* ಕಾಶ್ಮೀರಿ ಪಂಡಿತರು ಪ್ರತಿಭಟಿಸುತ್ತಿದ್ದರೆ, ಬಿಜೆಪಿ ಸಂಭ್ರಮಾಚರಣೆಯಲ್ಲಿ ವ್ಯಸ್ತ* ಬಿಜೆಪಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟಾಂಗ್
ಶ್ರೀನಗರ(ಜೂ. 01): ಸರ್ಕಾರವು ಕಾಶ್ಮೀರಿ ಪಂಡಿತರು ಕಣಿವೆಯಲ್ಲಿ ಮರು ನೆಲೆಸಬೇಕೆಂದು ಬಯಸುತ್ತದೆ, ಆದರೆ ಹಿಂದೂ ಅಲ್ಪಸಂಖ್ಯಾತರು ಒಂದಾದ ಬಳಿಕ ಮತ್ತೊಂದರಂತೆ ನಡೆಯುತ್ತಿರುವ ಹತ್ಯೆಗಳಿಗೆ ಹೆದರುತ್ತಾರೆ. ಹೀಗಿರುವಾಗ ಅಲ್ಲಿ ಸರ್ಕಾರಿ ಕೆಲಸ ಮಾಡುತ್ತಿರುವ ಹಿಂದೂಗಳು ವರ್ಗಾವಣೆಗೆ ಆಗ್ರಹಿಸಿದ್ದಾರೆ. ಮೇ ತಿಂಗಳಲ್ಲಿ ಪ್ರಧಾನಿ ಪ್ಯಾಕೇಜ್ ಅಡಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಉದ್ಯೋಗಿಗಳನ್ನು ಭಯೋತ್ಪಾದಕರು ಕೊಂದಿದ್ದರು. ನಿನ್ನೆ ಕಾಶ್ಮೀರದಲ್ಲಿ ನಡೆದ ಹಿಂದೂ ಶಿಕ್ಷಕನ ಹತ್ಯೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿದ್ದಾರೆ. ಕಾಶ್ಮೀರಿ ಪಂಡಿತರು ಧರಣಿಯಲ್ಲಿದ್ದಾರೆ, ಆದರೆ ಸರ್ಕಾರ ತನ್ನ ಎಂಟು ವರ್ಷಗಳ ಸಂಭ್ರಮಾಚರಣೆಯಲ್ಲಿ ನಿರತವಾಗಿದೆ ಎಂದು ಅವರು ಲೇವಡಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಶ್ಮೀರದಲ್ಲಿ ಕಳೆದ 5 ತಿಂಗಳಲ್ಲಿ 15 ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, 18 ನಾಗರಿಕರು ಸಾವನ್ನಪ್ಪಿದ್ದಾರೆ. ನಿನ್ನೆಯೂ ಶಿಕ್ಷಕಿಯೊಬ್ಬರ ಕೊಲೆಯಾಗಿತ್ತು ಎಂದಿದ್ದಾರೆ.
ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, "ಕಾಶ್ಮೀರಿ ಪಂಡಿತರು 18 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ ಆದರೆ ಬಿಜೆಪಿ ತನ್ನ ಎಂಟು ವರ್ಷಗಳ ಅಧಿಕಾರದ ಸಂಭ್ರಮಾಚರಣೆಯಲ್ಲಿ ನಿರತವಾಗಿದೆ" ಎಂದು ಹೇಳಿದರು. ಪ್ರಧಾನಿಯವರೇ, ಇದು ಸಿನಿಮಾವಲ್ಲ, ಇದು ಇಂದಿನ ಕಾಶ್ಮೀರದ ವಾಸ್ತವ. ಕಾಶ್ಮೀರ ಕಣಿವೆಯ ಕುಲ್ಗಾಮ್ ಜಿಲ್ಲೆಯಲ್ಲಿ ಹಿಂದೂ ಶಿಕ್ಷಕಿಯ ಹತ್ಯೆಯನ್ನು ವಿರೋಧಿಸಿ ಮಂಗಳವಾರ ಜಮ್ಮು ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ನಡೆದವು. ಪ್ರತಿಭಟನಾಕಾರರು ಆಡಳಿತದ ಪ್ರತಿಕೃತಿ ದಹಿಸಿ ಪಾಕಿಸ್ತಾನದ ವಿರುದ್ಧ ಘೋಷಣೆಗಳನ್ನು ಕೂಗಿದರು ಎಂದೆಂದಿದ್ದಾರೆ.
ಪೊಲೀಸರ ಪ್ರಕಾರ, 36 ವರ್ಷದ ರಜನಿಬಾಲಾ ಮಂಗಳವಾರ ಭಯೋತ್ಪಾದಕರ ಗುಂಡಿಗೆ ಬಲಿಯಾಗಿದ್ದರು. ಆಕೆ ಸಾಂಬಾ ಜಿಲ್ಲೆಯ ನಿವಾಸಿಯಾಗಿದ್ದಳು. ಅವರ ಹೆಸರು ಕೇಳಿ ಉಗ್ರರು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಈ ದೃಶ್ಯ ಎಷ್ಟು ಭಯಾನಕವಾಗಿತ್ತು ಎಂದರೆ ತರಗತಿಯಲ್ಲಿದ್ದ ಮಕ್ಕಳು ಬೆಚ್ಚಿಬಿದಿದ್ದಾರೆ, ಕೆಲವು ವಿದ್ಯಾರ್ಥಿಗಳು ಮೂರ್ಛೆ ಹೋಗಿದ್ದರು.
