Asianet Suvarna News Asianet Suvarna News

ಕಾರಣ ನೀಡದೆ 4 ಮಸೂದೆಗಳಿಗೆ ಅಂಕಿತ ಬಾಕಿ: ರಾಷ್ಟ್ರಪತಿ ಮುರ್ಮು ವಿರುದ್ಧವೇ ಕೇರಳ ಸರ್ಕಾರ ಸುಪ್ರೀಂಗೆ ಅರ್ಜಿ!

ಅಸಾಮಾನ್ಯ ಕ್ರಮವೊಂದರಲ್ಲಿ ಕೇರಳ ಸರ್ಕಾರವು, ‘ರಾಜ್ಯ ವಿಧಾನಸಭೆ ಅಂಗೀಕರಿಸಿದ 4 ವಿಧೇಯಕಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡದೇ ತಡೆ ಹಿಡಿದಿದ್ದಾರೆ’ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

Kerala Government moves Supreme Court as President Murmu withholds assent for Bills gvd
Author
First Published Mar 24, 2024, 8:52 AM IST

ನವದೆಹಲಿ (ಮಾ.24): ಅಸಾಮಾನ್ಯ ಕ್ರಮವೊಂದರಲ್ಲಿ ಕೇರಳ ಸರ್ಕಾರವು, ‘ರಾಜ್ಯ ವಿಧಾನಸಭೆ ಅಂಗೀಕರಿಸಿದ 4 ವಿಧೇಯಕಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡದೇ ತಡೆ ಹಿಡಿದಿದ್ದಾರೆ’ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ವಿಶ್ವವಿದ್ಯಾಲಯ ಕಾನೂನುಗಳು (ತಿದ್ದುಪಡಿ) ಮಸೂದೆ- 2021, ಕೇರಳ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ- 2022, ವಿಶ್ವವಿದ್ಯಾಲಯ ಕಾನೂನುಗಳು (ತಿದ್ದುಪಡಿ) ಮಸೂದೆ-2022 ಮತ್ತು ವಿಶ್ವವಿದ್ಯಾನಿಲಯ ಕಾನೂನುಗಳು (ತಿದ್ದುಪಡಿ) ಮಸೂದೆ-2022,- ಇವುಗಳನ್ನು ಯಾವುದೇ ಕಾರಣವಿಲ್ಲದೇ ರಾಷ್ಟ್ರಪತಿ ತಡೆ ಹಿಡಿದಿದ್ದಾರೆ. 

ಇದು ಅಸಂವಿಧಾನಿಕ ಎಂದು ಕೇರಳ ಸರ್ಕಾರ ಹೇಳಿದೆ. ಇದಲ್ಲದೆ, ರಾಷ್ಟ್ರಪತಿಗಳ ಒಪ್ಪಿಗೆ ಬಾಕಿ ಇರುವ 4 ವಿಧೇಯಕ ಸೇರಿ 7 ಮಸೂದೆಗಳನ್ನು ರಾಜ್ಯಪಾಲರು ಅನಿರ್ದಿಷ್ಟ ಅವಧಿಗೆ ಬಾಕಿ ಇರಿಸಿಕೊಂಡಿದ್ದನ್ನು ಕಾನೂನುಬಾಹಿರ ಎಂದು ಪರಿಗಣಿಸುವಂತೆಯೂ ಅರ್ಜಿಯಲ್ಲಿ ಸರ್ಕಾರ ಕೋರಿದೆ.

ಕೈಗಾರಿಕೆ ರೀತಿ ಉಗ್ರವಾದಕ್ಕೆ ಪಾಕ್‌ನಿಂದ ಪ್ರೋತ್ಸಾಹ ಇನ್ನು ಇದನ್ನು ಸಹಿಸೋಲ್ಲ: ಜೈಶಂಕರ್

ಅರ್ಜಿಯಲ್ಲಿ ಸಿಪಿಎಂ ನೇತೃತ್ವದ ಎಡರಂಗ ಸರ್ಕಾರವು, ಪ್ರಕರಣದಲ್ಲಿ ಕೇಂದ್ರ ಸರ್ಕಾರ, ಭಾರತದ ರಾಷ್ಟ್ರಪತಿಗಳ ಕಾರ್ಯದರ್ಶಿ, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಅವರ ಹೆಚ್ಚುವರಿ ಕಾರ್ಯದರ್ಶಿಯನ್ನು ಕಕ್ಷಿದಾರರನ್ನಾಗಿ ಮಾಡಿದೆ. ಈ ಹಿಂದೆಯೂ, ವಿಧಾನಸಭೆಯಿಂದ ಅಂಗೀಕರಿಸಲ್ಪಟ್ಟ ಹಲವಾರು ಮಸೂದೆಗಳಿಗೆ ರಾಜ್ಯಪಾಲರು ಒಪ್ಪಿಗೆ ನೀಡಿಲ್ಲ ಎಂದು ಆರೋಪಿಸಿ ಕೇರಳ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು. ಆಗ ರಾಜ್ಯಪಾಲರ ಧೋರಣೆಗೆ ಸುಪ್ರೀಂ ಕೋರ್ಟ್‌ ಕಿಡಿಕಾರಿತ್ತು.

Follow Us:
Download App:
  • android
  • ios