Asianet Suvarna News Asianet Suvarna News

ಕಲಾಮಂಡಲಂ ವಿವಿ ಕುಲಾಧಿಪತಿ ಹುದ್ದೆಯಿಂದ ಕೇರಳ ರಾಜ್ಯಪಾಲರ ವಜಾ

ವಿವಿಗಳ ಮೇಲಿನ ರಾಜ್ಯಪಾಲರ ಅಧಿಕಾರ ಕತ್ತರಿಗೆ ಸುಗ್ರೀವಾಜ್ಞೆ ಜಾರಿಗೆ ತರಲು ಬುಧವಾರ ಕೇರಳದ ಎಲ್‌ಡಿಎಫ್‌ ಸರ್ಕಾರ ನಿರ್ಧರಿಸಿತ್ತು. ಇದರ ಬೆನ್ನಲ್ಲೇ ಸರ್ಕಾರವು ಕಲಾಮಂಡಲಂ ಡೀಮ್ಡ್ ವಿಶ್ವವಿದ್ಯಾಲಯದ ನಿಯಮಾವಳಿಗಳಲ್ಲಿ ತಿದ್ದುಪಡಿ ತಂದಿದ್ದು, ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ರನ್ನು ಗುರುವಾರ ವಜಾಗೊಳಿಸಿದೆ.

Kerala Governor sacked from the post of Chancellor of Kalamandalam University akb
Author
First Published Nov 11, 2022, 10:09 AM IST

ತಿರುವನಂತಪುರ: ವಿವಿಗಳ ಮೇಲಿನ ರಾಜ್ಯಪಾಲರ ಅಧಿಕಾರ ಕತ್ತರಿಗೆ ಸುಗ್ರೀವಾಜ್ಞೆ ಜಾರಿಗೆ ತರಲು ಬುಧವಾರ ಕೇರಳದ ಎಲ್‌ಡಿಎಫ್‌ ಸರ್ಕಾರ ನಿರ್ಧರಿಸಿತ್ತು. ಇದರ ಬೆನ್ನಲ್ಲೇ ಸರ್ಕಾರವು ಕಲಾಮಂಡಲಂ ಡೀಮ್ಡ್ ವಿಶ್ವವಿದ್ಯಾಲಯದ ನಿಯಮಾವಳಿಗಳಲ್ಲಿ ತಿದ್ದುಪಡಿ ತಂದಿದ್ದು, ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ರನ್ನು ಗುರುವಾರ ವಜಾಗೊಳಿಸಿದೆ. ಅವರ ಸ್ಥಾನಕ್ಕೆ ಕಲೆ ಹಾಗೂ ಸಂಸ್ಕೃತಿ ಕ್ಷೇತ್ರದ ತಜ್ಞರನ್ನು ನೇಮಿಸಿಕೊಳ್ಳಲಾಗುವುದು ಎಂದು ತಿಳಿಸಿದೆ. ಹೀಗಾಗಿ ಇನ್ನು ಕಲಾಮಂಡಲಂ ವಿವಿಯ ಉಪ ಕುಲಪತಿ ಸೇರಿದಂತೆ ಮಹತ್ವದ ನೇಮಕಾತಿ ವಿಚಾರದಲ್ಲಿ ರಾಜ್ಯಪಾಲರಿಗೆ ಯಾವುದೇ ಅಧಿಕಾರ ಇರುವುದಿಲ್ಲ. ಆಡಳಿತ ಹಾಗೂ ನಿರ್ವಹಣಾ ವ್ಯವಸ್ಥೆಯು ರಾಜ್ಯ ಸರ್ಕಾರದಿಂದ ನಿರ್ವಹಿಸಲ್ಪಡುತ್ತದೆ ಎಂದು ಹೊಸ ತಿದ್ದುಪಡಿ ನಿಯಮಗಳಲ್ಲಿ ತಿಳಿಸಲಾಗಿದೆ. ಈ ಮೂಲಕ ರಾಜ್ಯಪಾಲರು ಹಾಗೂ ಸರ್ಕಾರದ ನಡುವಿನ ಕಿತ್ತಾಟ ಮತ್ತೊಂದು ಮಜಲು ಮುಟ್ಟಿದಂತಾಗಿದೆ.

ತಮಿಳುನಾಡು ಕೇರಳದಲ್ಲಿ ಸರ್ಕಾರ, ರಾಜ್ಯಪಾಲರ ಮಧ್ಯೆ ಜಟಾಪಟಿ ತೀವ್ರ

Hijab Row:ಹಿಜಾಬ್‌ ಅಡಿ ಮುಸ್ಲಿಂ ಮಹಿಳೆಯರ ಸಮಾಧಿ: ಕೇರಳ ಗವರ್ನರ್‌

Tamil Nadu Politics: ರಾಜ್ಯಪಾಲರನ್ನು ವಜಾ ಮಾಡಿ ಎಂದು ರಾಷ್ಟ್ರಪತಿಗಳಿಗೆ ಪತ್ರ ಬರೆದ ಡಿಎಂಕೆ

Follow Us:
Download App:
  • android
  • ios