Asianet Suvarna News Asianet Suvarna News

ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಭಾವಚಿತ್ರ ಯಾಕೆ? ಕೇಂದ್ರಕ್ಕೆ ಕೇರಳ ಹೈಕೋರ್ಟ್ ನೋಟಿಸ್!

  • ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಭಾವಚಿತ್ರ ಚರ್ಚೆ ಮತ್ತ ಶುರು
  • ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನೋಟಿಸ್
  • ರಾಜಕೀಯ ನಾಯಕರ ಟೀಕೆ ಬಳಿಕ ಹೈಕೋರ್ಟ್‌ನಿಂದ ಪ್ರಶ್ನೆ
Kerala High Court sent notice to center over PM modi Photo on Covid 19 vaccination certificate ckm
Author
Bengaluru, First Published Oct 9, 2021, 8:05 PM IST
  • Facebook
  • Twitter
  • Whatsapp

ಕೇರಳ(ಅ.09): ಕೋವಿಡ್ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಯಾಕೆ? ಈ ಪ್ರಶ್ನೆಯನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ , ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ನಾಯಕರು ಪ್ರಶ್ನಿಸಿದ್ದಾರೆ. ಇದೀಗ ಕೇರಳ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಇದೇ ವಿಚಾರವಾಗಿ ನೋಟಿಸ್ ನೀಡಿದೆ. ಈ ಕುರಿತು ಎರಡು ವಾರದಲ್ಲಿ ಉತ್ತರಿಸುವಂತೆ ಸೂಚಿಸಿದೆ.

WhatsApp ಮೂಲಕ ಪಡೆಯಿರಿ ಕೋವಿಡ್ ಲಸಿಕೆ ಸರ್ಟಿಫಿಕೇಟ್; ಕೇಂದ್ರದಿಂದ ಸುಲಭ ವಿಧಾನ ಜಾರಿ!

ಕೇರಳದ ಕೋಟಾಯಂ ನಿವಾಸಿ ಎಂ ಪೀಟರ್ ಲಸಿಕೆ ಪ್ರಮಾಣ ಪತ್ರದಲ್ಲಿ ನರೇಂದ್ರ ಮೋದಿ ಫೋಟೋಗೆ ಆಕ್ಷೇಪ ವ್ಯಕ್ತಪಡಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮೋದಿ ಭಾವಚಿತ್ರ ಇಲ್ಲದ ಪ್ರಮಾಣ ಪತ್ರ ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಜಸ್ಟೀಸ್ ಪಿಬಿ ಸುರೇಶ್ ಕುಮಾರ್, ಕೇಂದ್ರ ಹಾಗೂ ರಾಜ್ಯ ಸರ್ಕಾರ 2 ವಾರದಲ್ಲಿ ಉತ್ತರಿಸುವಂತೆ ಹೇಳಿದೆ.

ಅರ್ಜಿದಾರ ಎಂ ಪೀಟರ್ ಇತರ ದೇಶದಲ್ಲಿ ಲಸಿಕೆ ಪ್ರಮಾಣ ಪತ್ರವನ್ನು ನ್ಯಾಯಾಲಕ್ಕೆ ಸಲ್ಲಿಸಿದ್ದಾರೆ. ಇಂಡೋನೇಷಿಯಾ, ಇಸ್ರೇಲ್, ಜರ್ಮನಿ ಸೇರಿದಂತೆ ಇತರ ದೇಶಗಳಲ್ಲಿ ಲಸಿಕೆ ಪ್ರಮಾಣ ಪತ್ರದಲ್ಲಿ ಮಹತ್ವದ ಮಾಹಿತಿಗಳು ಇದೆ. ಆದರೆ ಅಲ್ಲಿನ ನಾಯಕರ ಫೋಟೋ ಇಲ್ಲ. ಹೀಗಾಗಿ ಭಾರತದಿಂದ ವಿದೇಶಕ್ಕೆ ತೆರಳುವ ವೇಳೆ ಮೋದಿ ಫೋಟೋ ಇರುವ ಪ್ರಮಾಣ ಪತ್ರಕ್ಕಿಂತ ಯಾವುದೇ ಫೋಟೋ ಇಲ್ಲದ ಪ್ರಮಾಣ ಪತ್ರ ನೀಡುವಂತೆ ಎಂ ಪೀಟರ್ ಮನವಿ ಮಾಡಿದ್ದಾರೆ.

2 ಡೋಸ್‌ ಲಸಿಕೆ ಪಡೆದರಷ್ಟೇ ಮದ್ಯ ಖರೀದಿಗೆ ಅವಕಾಶ!

ಭಾರತದ ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಭಾವಚಿತ್ರ ಅಪ್ರಸ್ತುತ. ವಕೀಲ ಅಜಿತ್ ಜೊಯ್ ನೆರವಿನಲ್ಲಿ ಅರ್ಜಿ ಸಲ್ಲಿಸಿದ ಎಂ ಪೀಟರ್ ಕೇರಳದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದಾರೆ. ಕೊರೋನಾ ವಿರುದ್ಧದ ಹೋರಾಟವನ್ನು ಕೇಂದ್ರ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದೆ. ಲಸಿಕೆ ಪ್ರಮಾಣ ಪತ್ರ ಮೋದಿಯಿಂದ ಮಾತ್ರ ಎಲ್ಲವೂ ಸಾಧ್ಯವಾಗಿದೆ ಅನ್ನುವಂತಿದೆ. ಹೀಗಾಗಿ ದೇಶದ ಪ್ರಜೆಗಳಿಗೆ ಮೋದಿ ಭಾವಚಿತ್ರ ಇಲ್ಲದ ಲಸಿಕೆ ಪ್ರಮಾಣ ಪತ್ರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಹೈಕೋರ್ಟ್‌ನಲ್ಲಿ ಮನವಿ ಮಾಡಿದ್ದಾರೆ.

CoWin ನಿಂದಲೇ ಪಾಸ್‌ಪೋರ್ಟ್‌ಗೆ ವ್ಯಾಕ್ಸೀನ್ ಸರ್ಟಿಫೀಕೇಟ್ ಲಿಂಕ್ ಮಾಡೋದೇಗೆ ?

ಈ ಕುರಿತು ಮೇಲ್ಮನೆಯಲ್ಲಿ ಈಗಾಗಲೇ ಕೇಂದ್ರ ಸರ್ಕಾರ ಉತ್ತರ ನೀಡಿತ್ತು. ಕೋವಿಡ್ ವಿರುದ್ಧ ಜಾಗೃತಿ ಮೂಡಿಸಲು ಪ್ರಧಾನಿ ಮೋದಿ ಬಳಸಿಕೊಳ್ಳಲಾಗಿದೆ. ಕೋವಿಡ್ ವಿರುದ್ಧ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಕೇಂದ್ರ ಆರೋಗ್ಯ ರಾಜ್ಯ ಖಾತೆ ಸಚಿವ ಬಿಪಿ ಪವಾರ್ ಉತ್ತರಿಸಿದ್ದರು.

Follow Us:
Download App:
  • android
  • ios