ತುಮಕೂರು [ಜ.02]: ಕೃಷಿ ಸಮ್ಮಾನ್‌ ಯೋಜನೆಯಡಿ ಪ್ರಧಾನಿ ಮೋದಿ ಅವರು ರೈತರ ಖಾತೆಗೆ ಗುರುವಾರ 12 ಸಾವಿರ ಕೋಟಿ ರು. ವರ್ಗಾವಣೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ತಿಳಿಸಿದರು.

ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಪೂರ್ವ ಸಿದ್ಧತಾ ಕಾರ್ಯವನ್ನು ಪರಿಶೀಲಿಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿ, ಕೃಷಿ ಸಮ್ಮಾನ್‌ ಯೋಜನೆಯ ಲಾಭವನ್ನು ದೇಶದ 6 ಕೋಟಿ ರೈತ ಕುಟುಂಬಗಳು ಪಡೆಯಲಿದ್ದಾರೆ.

 ಕಾರ್ಯಕ್ರಮದಲ್ಲಿ ಪ್ರಧಾನಿ ಒಂದು ಗುಂಡಿ ಒತ್ತುವ ಮೂಲಕ ಏಕಕಾಲದಲ್ಲಿ ದೇಶದ ರೈತರ ಖಾತೆಗೆ ನೇರವಾಗಿ .12 ಸಾವಿರ ಕೋಟಿ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ ಎಂದರು.

ರಾಜ್ಯಗಳಿಗೆ ಸಡ್ಡು ಹೊಡೆಯಲು ಸಿಎಎ ಅಡಿ ಆನ್‌ಲೈನ್‌ ಪೌರತ್ವ...

ಬೆಂಗಳೂರು ಬದಲು ತುಮಕೂರು: ಮೊದಲು ಕೃಷಿ ಸಮ್ಮಾನ್‌ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಸಿದ್ಧಗಂಗಾ ಮಠದ ಗದ್ದುಗೆ ದರ್ಶನದೊಂದಿಗೆ ಕಾರ್ಯಕ್ರಮ ಆಯೋಜಿಸುವ ಉತ್ಸುಕತೆಯನ್ನು ಮೋದೀಜಿ ತೋರಿದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ತುಮಕೂರಲ್ಲಿ ಆಯೋಜಿಸಲು ನಿರ್ಧರಿಸಲಾಯಿತು ಎಂದು ಮಾಹಿತಿ ನೀಡಿದರು.