Asianet Suvarna News Asianet Suvarna News

ಕೇರಳದಲ್ಲಿ ಡ್ರಗ್‌ ಮಾಫಿಯಾ ಬಯಲು ಮಾಡಿದ್ದ ಏಷ್ಯಾನೆಟ್ ಕಚೇರಿ ಮೇಲೆ ಎಸ್‌ಎಫ್‌ಐ ಗೂಂಡಾಗಳ ದಾಳಿ

ಡ್ರಗ್‌ ಮಾಫಿಯಾಕ್ಕೆ ಸಂಬಂಧಿಸಿ ಸುದ್ದಿ ಪ್ರಸಾರ ಮಾಡಿದ್ದಕ್ಕೆ ಮಲೆಯಾಳಂ ಏಷ್ಯಾನೆಟ್ ಸುದ್ದಿಸಂಸ್ಥೆಯ ಕಚೇರಿ ಮೇಲೆ ಎಸ್‌ಎಫ್‌ಐ ಕಾರ್ಯಕರ್ತರು ನುಗ್ಗಿ ಕಚೇರಿ ಸಿಬ್ಬಂದಿಯನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಮುಂದಾದ ಘಟನೆ ಕೇರಳದ ಕೊಚ್ಚಿಯಲ್ಲಿರುವ ಏಷ್ಯಾನೆಟ್ ನ್ಯೂಸ್ ಕಚೇರಿಯಲ್ಲಿ ನಡೆದಿದೆ.

Kochi Asianet office attacked by SFI goons for exposing drug mafia Press Club India condemns the incident akb
Author
First Published Mar 4, 2023, 7:25 AM IST

ತಿರುವನಂತರಪುರಂ:  ಡ್ರಗ್‌ ಮಾಫಿಯಾಕ್ಕೆ ಸಂಬಂಧಿಸಿ ಸುದ್ದಿ ಪ್ರಸಾರ ಮಾಡಿದ್ದಕ್ಕೆ ಮಲೆಯಾಳಂ ಏಷ್ಯಾನೆಟ್ ಸುದ್ದಿಸಂಸ್ಥೆಯ ಕಚೇರಿ ಮೇಲೆ ಎಸ್‌ಎಫ್‌ಐ ಕಾರ್ಯಕರ್ತರು ನುಗ್ಗಿ ಕಚೇರಿ ಸಿಬ್ಬಂದಿಯನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಮುಂದಾದ ಘಟನೆ ಕೇರಳದ ಕೊಚ್ಚಿಯಲ್ಲಿರುವ ಏಷ್ಯಾನೆಟ್ ನ್ಯೂಸ್ ಕಚೇರಿಯಲ್ಲಿ ನಡೆದಿದೆ. 

ಏಷಿಯಾನೆಟ್ ನ್ಯೂಸ್‌ನ ಕೊಚ್ಚಿ ಕಚೇರಿ ಮೇಲೆ ಶುಕ್ರವಾರ ಸಂಜೆ ಎಸ್‌ಎಫ್‌ಐ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಆಗಮಿಸಿ ದಾಳಿ ನಡೆಸಿದ್ದಾರೆ.  ಕಚೇರಿಗೆ ನುಗ್ಗಿದ ಎಸ್‌ಎಫ್‌ಐ ಕಾರ್ಯಕರ್ತರು, ಕಚೇರಿಯೊಳಗೆ ಘೋಷಣೆಗಳನ್ನು ಕೂಗಿ ಸಿಬ್ಬಂದಿಯನ್ನು ಬೆದರಿಸಿದ್ದಾರೆ. ಅಲ್ಲದೇ ಅವಮಾನಕರ ಸಂದೇಶಗಳಿರುವ ಬ್ಯಾನರ್‌ಗಳನ್ನು ಪ್ರದರ್ಶಿಸಿದ್ದಾರೆ. ಕೂಡಲೇ ಈ ವಿಚಾರ ತಿಳಿದ ಪಲರಿವಟ್ಟಂ ಪೊಲೀಸರು (Palarivattom police) ಏಷ್ಯಾನೆಟ್ ಕಚೇರಿಗೆ ಬಂದು ಕಾರ್ಯಕರ್ತರನ್ನು ಹೊರಗೆಳೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಕೇರಳದ ನರ್ಸಿಂಗ್ ವಿದ್ಯಾರ್ಥಿನಿಗೆ ಮದ್ಯ ಕುಡಿಸಿ ಸ್ನೇಹಿತರಿಂದಲೇ ಅತ್ಯಾಚಾರ

ಈ ಘಟನೆಯನ್ನು ಪ್ರೆಸ್ ಕ್ಲಬ್ ಆಫ್ ಇಂಡಿಯಾ (Press club of india) ಸೇರಿದಂತೆ ಪತ್ರಕರ್ತರ ಸಂಘಗಳು, ಕೇರಳ ವಿರೋಧ ಪಕ್ಷದ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಘಟನೆ ಖಂಡಿಸಿ ಕೆಯುಡಬ್ಲ್ಯುಜೆ ಇಂದು ತಿರುವನಂತಪುರದಲ್ಲಿ(trivandrum) ಸೆಕ್ರೆಟರಿಯೇಟ್‌ಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದೆ.

ಘಟನೆಗೆ ಸಂಬಂಧಿಸಿದಿದಂತೆ ಸಿಪಿಎಂನ ವಿದ್ಯಾರ್ಥಿ ಘಟಕವಾದ ಎಸ್‌ಎಫ್‌ಐನ 30 ಕಾರ‍್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶುಕ್ರವಾರ ಸಾಯಂಕಾಲ 8 ಗಂಟೆಯ ಸುಮಾರಿಗೆ ಕಚೇರಿಗೆ ಅಕ್ರಮವಾಗಿ ನುಗ್ಗಿದ ಎಸ್‌ಎಫ್‌ಐ ಕಾರ್ಯಕರ್ತರು, ಭದ್ರತಾ ಸಿಬ್ಬಂದಿ ಮತ್ತು ಸಿಬ್ಬಂದಿಯನ್ನು ತಳ್ಳಿ, ನ್ಯೂಸ್‌ ಚಾನಲ್‌ನ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಈ ವೇಳೆ ಸಿಬ್ಬಂದಿಗೆ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ಏಷ್ಯಾನೆಟ್‌ ನ್ಯೂಸ್‌ ತಿಳಿಸಿದೆ. ಅಕ್ರಮವಾಗಿ ನುಗ್ಗಿದವರ ವಿರುದ್ಧ ಐಪಿಸಿ ಸೆಕ್ಷನ್‌ 143 (ಕಾನೂನುಬಾಹಿರ ಗುಂಪುಗಾರಿಕೆ), 147 (ಗಲಭೆ) ಮತ್ತು 149ಗಳಡಿ ಪ್ರಕರಣ ದಾಖಲಿಸಲಾಗಿದೆ. ಯಾವ ಕಾರಣಕ್ಕಾಗಿ ಈ ಪ್ರತಿಭಟನೆ ನಡೆದಿದೆ ಎಂಬುದು ತಿಳಿದು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ವಿಧಿಯೇ ಎಷ್ಟು ಕ್ರೂರ..ಕಾಲಿಲ್ಲದವನ ಬಾಳಿಗೆ ಕಣ್ಣಾದಳು, ಕೈ ಬಿಟ್ಟು ಹೊರಟೇ ಹೋದ!

ಎಸ್‌ಎಫ್‌ಐ ಕಾರ‍್ಯಕರ್ತರು ನಡೆಸಿರುವ ಕೃತ್ಯವನ್ನು ಪ್ರೆಸ್‌ ಕ್ಲಬ್‌ ಆಫ್‌ ಇಂಡಿಯಾ ಖಂಡಿಸಿದ್ದು, ಈ ಕುರಿತಾಗಿ ಕೇರಳ ಸರ್ಕಾರ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದೆ.

 

Latest Videos
Follow Us:
Download App:
  • android
  • ios