ಕಾಶ್ಮೀರದಲ್ಲಿ ಉಗ್ರರ ಎನ್‌ಕೌಂಟರ್; ಕರ್ನಲ್, ಮೇಜರ್, ಪೊಲೀಸ್ ಅಧಿಕಾರಿ ಹುತಾತ್ಮ!
ಕಾಶ್ಮೀರದಲ್ಲಿ ಉಗ್ರರ ಜೊತೆಗಿನ ಭೀಕರ ದಾಳಿಯಲ್ಲಿ ಮೂವರು ಭದ್ರತಾ ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಇತ್ತ ಸೇನೆ ಹೆಲಿಕಾಪ್ಟರ್ ಸೇರಿದಂತೆ ಹೆಚ್ಚುವರಿ ಪಡೆಗಳೊಂದಿಗೆ ಕಾರ್ಯಾಚರಣೆ ಮುಂದುವರಿಸಿದೆ.
ಶ್ರೀನಗರ(ಸೆ.13) ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಹೆಚ್ಚಾಗತೊಡಗಿದೆ. ಇದೀಗ ಅನಂತನಾಗ್ ಜಿಲ್ಲೆಯ ಕೊಕರನಾಗ್ ದಟ್ಟ ಕಾಡಿನಲ್ಲಿನ ಅಡಗಿದ್ದ ಉಗ್ರರ ಮೇಲೆ ಭಾರತೀಯ ಸೇನೇ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಜಂಟಿ ಕಾರ್ಯಾಚರಣೆ ನಡೆಸಿದೆ. ಆದರೆ ಈ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಮೇಜರ್, ಕರ್ನಲ್ ಹಾಗೂ ಜಮ್ಮ ಕಾಶ್ಮೀರ ಪೊಲೀಸ್ ಇಲಾಖೆ ಡಿಎಸ್‌ಪಿ ಹುತಾತ್ಮರಾಗಿದ್ದಾರೆ.
ಉಗ್ರರ ಮೇಲೆ ಎನ್‌ಕೌಂಟ್ ನಡೆಸುತ್ತಿದ್ದ ವೇಳೆ ದಟ್ಟಕಾಡಿನಲ್ಲಿ ಅಡಗಿದ್ದ ಉಗ್ರರು ಏಕಾಏಕಿ ದಾಳಿ ನಡೆಸಿದ್ದಾರೆ. ಗುಂಡಿನ ಸುರಿಮಳೆಗೈದಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಅಶೀಶ್ ಧೋನ್ಚಕ್, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆ ಸೂಪರಿಡೆಂಟ್ ಆಫ್ ಪೊಲೀಸ್ ಹುಮಾಯುನ್ ಭಟ್ ಹುತಾತ್ಮರಾಗಿದ್ದಾರೆ. ಮನ್‌ಪ್ರೀತ್ ಸಿಂಗ್ 19 ರಾಷ್ಟ್ರೀಯ ರೈಫಲ್ಸ್‌ನ ಕಮಾಂಡಿಂಗ್ ಆಫೀಸರ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಅನಂತ್‌ನಾಗ್ ಎನ್‌ಕೌಂಟರ್, ಕರ್ನಲ್ ಮನ್‌ಪ್ರೀತ್ ಸಿಂಗ್ ವೀರಮರಣ
ಅರಣ್ಯದಲ್ಲಿ ಅಡಗಿರುವ ಉಗ್ರರು ಭಾರತೀಯ ಸೇನೆ ಮೇಲೆ ಪ್ರತಿದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ಮುಂದುವರಿದಿದೆ. ಇದೀಗ ಹೀರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದರೆ. ಹೆಲಿಕಾಪ್ಟರ್ ಸೇರಿದಂತೆ ಹೆಚ್ಚಿನ ಭದ್ರತಾ ಪಡೆಗಳನ್ನು ಬಳಸಿ ಕಾರ್ಯಾಚರಣೆ ಮುಂದುವರಿಸಲಾಗಿದೆ. ಕಳೆದ ರಾತ್ರಿಯಿಂದ ಕಾರ್ಯಾಚರಣೆ ಆರಂಭಿಸಲಾಗಿತ್ತು. ಇಂದು ಉಗ್ರರು ಪ್ರತಿದಾಳಿ ನಡೆಸಿದ್ದಾರೆ.
ಇದರ ಜೊತೆಗೆ ಮೂವರು ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಳೆದ 24 ಗಂಟೆಯಲ್ಲಿ ನಡೆದ ಎರಡನೇ ಎನ್‌ಕೌಂಟರ್ ಇದಾಗಿದೆ. ನಿನ್ನೆ ನಡೆದ ಉಗ್ರರ ವಿರುದ್ಧದ ಚಕಮಕಿಯಲ್ಲಿ ಓರ್ವ ಯೋಧ ಮೃತಪಟ್ಟಿದ್ದ.