*  ಕಾನೂನು ಪಾಲನೆ ಮಾಡದೆ ಉದ್ಧಟತನೆ ಮೆರೆದ ಉತ್ತರ ಪ್ರದೇಶ ಸರ್ಕಾರ*  ಯೋಗಿ ಸರ್ಕಾರದ ವಿರುದ್ಧ ಹರಿಹಾಯ್ದ ಮನ್ಸೂಲ್‌ ಅಲಿ ಖಾನ್‌*  ರಾಹುಲ್‌ ಗಾಂಧಿ  ಇಡಿ ವಿಚಾರಣೆಯನ್ನೂ ಬಲವಾಗಿ ಖಂಡಿಸಿದ ಖಾನ್‌ 

ಬೆಂಗಳೂರು(ಜೂ.15): ಉಚ್ಚಾಟಿತ ಬಿಜೆಪಿ ನಾಯಕಿ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಳಿಕ ದೇಶಾದ್ಯಂತ ಹಿಂಸಾಚಾರ ನಡೆಯುತ್ತಿರುವುದರ ಬಗ್ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನ್ಸೂರ್‌ ಅಲಿ ಖಾನ್‌ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಉತ್ತರ ಪ್ರದೇಶ ಪ್ರಯಾಗ್ರಾಜ್‌ನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಲಾದ ಜಾವೇದ್‌ ಮೊಹಮ್ಮದ್‌ ಅವರಿಗೆ ಸೇರಿದ ಎರಡು ಕಟ್ಟಡಗಳನ್ನ ತೆರವುಗೊಳಿಸಿರುವುದು ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಇಡಿ ವಿಚಾರಣೆಯನ್ನೂ ಅವರು ಬಲವಾಗಿ ಖಂಡಿಸಿದ್ದಾರೆ.

Prophet Comments Row : ಕಲ್ಲು ತೂರಿದವರ ಮೇಲೆ ಮುಗಿಬಿದ್ದ ಬುಲ್ಡೋಜರ್, ರಾಂಚಿಯಲ್ಲಿ ಇಬ್ಬರ ಸಾವು!

ಕಟ್ಟಡದ ನಕ್ಷೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಪ್ರಯಾಗ್ರಾಜ್‌ ಅಭಿವೃದ್ಧಿ ಪ್ರಾಧಿಕಾರ ಅನುಮತಿ ಇರಲಿಲ್ಲ ಎಂಬ ಕಾರಣಕ್ಕೆ ಕಟ್ಟಡಗಳನ್ನ ಕೆಡವಲಾಗಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಮನ್ಸೂಲ್‌ ಅಲಿ ಖಾನ್‌ ಅವರು, ಕಟ್ಟಡ ಮಾಲೀಕರಿಗೆ ಯಾವುದೇ ಮುನ್ಸೂಚನೆ ನೀಡದೆ ಕಟ್ಟಡಗಳನ್ನ ತೆರವುಗೊಳಿರುವುದು ಸರಿಯಾದ ನಿರ್ಧಾರವಲ್ಲ ಅಂತ ಉತ್ತರ ಪ್ರದೇಶದ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. 

ಈ ಮೂಲಕ ಉತ್ತರ ಪ್ರದೇಶ ಕಾನೂನು ಪಾಲನೆ ಮಾಡದೆ ಉದ್ಧಟತನೆ ಮೆರೆದಿದೆ ಅಂತ ಮನ್ಸೂಲ್‌ ಅಲಿ ಖಾನ್‌ ಅವರು ಯೋಗಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. 

ಉ.ಪ್ರ. ಗಲಭೆ ರೂವಾರಿ ಮನೆಗೆ ನುಗ್ಗಿ ಬುಲ್ಡೋಜರ್‌ ಶಿಕ್ಷೆ!

ಪ್ರವಾದಿ ಮೊಹಮ್ಮದರಿಗೆ ಬಿಜೆಪಿ ಮಾಜಿ ವಕ್ತಾರೆ ನೂಪುರ್‌ ಶರ್ಮಾ ಮಾಡಿದ ಅವಹೇಳನ ಖಂಡಿಸಿ ಉತ್ತರ ಪ್ರದೇಶದಲ್ಲಿ ಹಿಂಸಾಚಾರ ನಡೆಸಿದವರ ಆಸ್ತಿಪಾಸ್ತಿಗಳ ಮೇಲೆ ಸತತ 2ನೇ ದಿನವೂ ಬುಲ್ಡೋಜರ್‌ಗಳು ಗರ್ಜಿಸಿವೆ. ಪ್ರಯಾಗ್‌ರಾಜ್‌ನಲ್ಲಿ ಹಿಂಸೆಯ ‘ಮಾಸ್ಟರ್‌ಮೈಂಡ್‌’ ಎಂದು ಹೇಳಲಾದ ಜಾವೇದ್‌ ಅಹ್ಮದ್‌ ಅಲಿಯಾಸ್‌ ‘ಪಂಪ್‌’ ಎಂಬಾತನ ‘ಅಕ್ರಮ ಮನೆ’ಯನ್ನು ಜೆಸಿಬಿ ಬಳಸಿ ಧ್ವಂಸಗೊಳಿಸಲಾಗಿತ್ತು. 

ಶನಿವಾರ ಕಾನ್ಪುರ ಹಾಗೂ ಸಹಾರನ್‌ಪುರದಲ್ಲಿ ಗಲಭೆಕೋರರ ಕೆಲವು ಅಕ್ರಮ ಆಸ್ತಿಪಾಸ್ತಿಗಳನ್ನು ಬುಲ್ಡೋಜರ್‌ ಬಳಸಿ ಧ್ವಂಸ ಮಾಡಲಾಗಿತ್ತು. ಅದರ ಮರುದಿನವೇ ಪ್ರಯಾಗ್‌ರಾಜ್‌ನಲ್ಲಿ ಕಾರ್ಯಾಚರಣೆ ನಡೆದಿದೆ. ಹಿಂಸೆಯ ಮುಖ್ಯ ಸೂತ್ರಧಾರ ಎಂದು ಹೇಳಲಾದ ಜಾವೇದ್‌ ಅಹ್ಮದ್‌ನ ‘ಜೆಕೆ ಆಶಿಯಾನಾ’ ಹೆಸರಿನ ಕರೇಲಿ ಪ್ರದೇಶದಲ್ಲಿನ ಮನೆಯನ್ನು ಮಧ್ಯಾಹ್ನ 1 ಗಂಟೆ ಸುಮಾರಿಗೆ ಬುಲ್ಡೋಜರ್‌ ಬಳಸಿ ಧ್ವಂಸಗೊಳಿಸಲಾಗಿತ್ತು. 
‘ಧ್ವಂಸದ ವೇಳೆ ಅಕ್ರಮ ಶಸ್ತ್ರಾಸ್ತ್ರಗಳು ಜಾವೇದ್‌ ಮನೆಯಲ್ಲಿ ಪತ್ತೆಯಾಗಿವೆ’ ಎಂದು ಪೊಲೀಸರು ಹೇಳಿದ್ದರು. 

ಪ್ರವಾದಿಗೆ ಅವಮಾನ, ದೇಶಾದ್ಯಂತ ಭುಗಿಲೆದ್ದ ಹಿಂಸಾಚಾರ, ಪ್ರತಿಭಟನೆ!

ಆದರೆ, ಇದು ರಾಜಕೀಯ ಸೇಡಿಗೆ ನಡೆದ ಕಾರಾರ‍ಯಚರಣೆ ಎಂಬ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಪ್ರಯಾಗ್‌ರಾಜ್‌ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು, ‘ಪ್ರಾಧಿಕಾರದ ನಕ್ಷೆಗೆ ಅನುಗುಣವಾಗಿ ಮನೆ ನಿರ್ಮಾಣ ಆಗಿರಲಿಲ್ಲ. ಮೇ 10ರಂದೇ ಅಕ್ರಮ ನಿರ್ಮಾಣ ಎಂಬ ನೋಟಿಸ್‌ ನೀಡಲಾಗಿತ್ತು. ಮೇ 24ರಂದು ಸ್ಪಷ್ಟನೆ ನೀಡಬೇಕು ಎಂದೂ ಸೂಚಿಸಲಾಗಿತ್ತು. ಆದರೆ ಅಂದು ಜಾವೇದ್‌ ಆಗಲಿ ಅಥವಾ ಅವರ ವಕೀಲರಾಗಲಿ ಸ್ಪಷ್ಟನೆ ನೀಡಲು ಹಾಜರಾಗಲಿಲ್ಲ. ಹೀಗಾಗಿ ಮೇ 25ರಂದೇ ಧ್ವಂಸ ಕಾರಾರ‍ಯಚರಣೆಗೆ ಆದೇಶ ನೀಡಲಾಗಿತ್ತು. ಆ ಪ್ರಕಾರ ಈಗ ಜೆಸಿಬಿ ಬಳಸಿ ಮನೆ ಧ್ವಂಸಗೊಳಿಸಲಾಗಿದೆ’ ಎಂದಿದ್ದರು. 

ಈ ನಡುವೆ ಸುದ್ದಿಸಂಸ್ಥೆ ಜತೆ ಮಾತನಾಡಿದ ಎಸ್‌ಪಿ ದಿನೇಶ್‌ ಕುಮಾರ್‌ ಸಿಂಗ್‌, ‘ಬೆಳಗ್ಗೆಯೇ ಜಾವೇದ್‌ ಮನೆಯವರು ತಮ್ಮೆಲ್ಲ ಸರಕುಗಳನ್ನು ಮನೆಯಿಂದ ಒಯ್ದರು. ಈಗ ಮನೆಯಲ್ಲಿ ಯಾರೂ ಇಲ್ಲ’ ಎಂದರು. ಧ್ವಂಸದ ಕಾರಣ ಭಾರೀ ಭದ್ರತೆಯನ್ನು ಸ್ಥಳದಲ್ಲಿ ಏರ್ಪಡಿಸಲಾಗಿತ್ತು. ಜಾವೇದ್‌ ಅಹ್ಮದ್‌ನನ್ನು ಈಗಾಗಲೇ ಬಂಧಿಸಲಾಗಿತ್ತು.