ಒಂದೆಡೆ ಸುಪ್ರೀಂ ಕೋರ್ಟ್ ಮಧ್ಯಮಂತರ ಜಾಮೀನು ತೀರ್ಪು ಒದುತ್ತಿರುವಾಗಲೇ ಇತ್ತ ದೆಹಲಿ ಕೋರ್ಟ್ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಶಾಕ್ ನೀಡಿದೆ. ಮೇ.20ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿದೆ. 

ದೆಹಲಿ(ಮೇ.07) ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ದೆಹಲಿ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಬಿಡುಗಡೆ ನಿರೀಕ್ಷಿಸಿದ್ದ ಅರವಿಂದ್ ಕೇಜ್ರಿವಾಲ್‌ಗೆ ಮೇ.20ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ಒಂದೆಡೆ ಸುಪ್ರೀಂ ಕೋರ್ಟ್‌ನಲ್ಲಿ ಕೇಜ್ರಿವಾಲ್ ಮಧ್ಯಮಂತರ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ. ಕೆಲವೇ ಕ್ಷಣಗಳಲ್ಲಿ ತೀರ್ಪು ಹೊರಬೀಳಲಿದೆ. ಇತ್ತ ದೆಹಲಿ ಕೋರ್ಟ್ ಕೇಜ್ರಿವಾಲ್‌ಗೆ ಬಿಡುಗಡೆ ಭಾಗ್ಯ ನಿರಾಕರಿಸಿದೆ.

ಅಬಕಾರಿ ನೀತಿ ಹಗರಣದಲ್ಲಿನ ಅಕ್ರಮ ಹಣ ವರ್ಗಾವಣೆ ಆರೋಪದಡಿ ಜೈಲು ಪಾಲಾಗಿರುವ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯಗೊಳ್ಳುತ್ತಿದೆ. ಹೀಗಾಗಿ ದೆಹಲಿ ಕೋರ್ಟ್‌ಗೆ ಅರವಿಂದ್ ಕೇಜ್ರಿವಾಲ್ ಅವರನ್ನು ಹಾಜರುಪಡಿಸಲಾಯಿತು. ಈ ವೇಳೆ ಕೋರ್ಟ್ ಮೇ.20ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿದೆ. ಇದೀಗ ಆಪ್ ನಾಯಕರು ಹಾಗೂ ಕೇಜ್ರಿವಾಲ್ ಚಿತ್ತ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ತೀರ್ಪಿನ ಮೇಲೆ ನೆಟ್ಟಿದೆ. 

ಅರವಿಂದ್ ಕೇಜ್ರಿವಾಲ್‌ಗೆ ಮತ್ತೆ ನಿರಾಸೆ, ಮಧ್ಯಂತರ ಜಾಮೀನು ತೀರ್ಪು ಮಂದೂಡಿದ ಸುಪ್ರೀಂ!

ದೆಹಲಿ ರೋಸ್ ಅವೆನ್ಯೂ ಕೋರ್ಟ್ ಸ್ಪೆಷಲ್ ಜಡ್ಜ್ ಕಾವೇರಿ ಬವೆಜಾ ಕೇಜ್ರಿವಾಲ್ ಪ್ರಕರಣದ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನ ವಿಸ್ತರಿಸಿದ್ದಾರೆ. ಮಾರ್ಚ್ 21ರಂದು ಅಬಕಾರಿ ನೀತಿ ಹಗರಣದಡಿಯಲ್ಲಿ ಇಡಿ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ಬಂಧಿಸಿದ್ದರು. ಇಡಿ ಅಧಿಕಾರಿಗಳ ಸಮನ್ಸ್‌ಗೆ ಉತ್ತರಿಸದ ಕೋರ್ಟ್ ಮೆಟ್ಟಿಲೇರಿದ್ದ ಕೇಜ್ರಿವಾಲ್‌ಗೆ ಹಿನ್ನಡೆಯಾಗಿತ್ತು. ಇದರ ಬೆನ್ನಲ್ಲೇ ಇಡಿ ಅಧಿಕಾರಿಗಳ ತಂಡ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. 

ವಿಚಾರಣೆ ವಿಳಂಬವಾಗುತ್ತಿರುವ ಕಾರಣ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರಚಾರದಲ್ಲಿ ಪಾಲ್ಗೊಳ್ಳಲು ಮಧ್ಯಂತರ ಜಾಮೀನು ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯುತ್ತಿರವ ಬೆನ್ನಲ್ಲೇ ದೆಹಲಿ ಕೋರ್ಟ್ ನ್ಯಾಯಾಂಗ ಬಂಧನ ವಿಸ್ತರಣೆ ಆದೇಶ ನೀಡಿದೆ. ಇತ್ತ ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಮಧ್ಯಂತರ ಜಾಮೀನು ಆದೇಶವನ್ನು ಮೇ.9ಕ್ಕೆ ಮುಂದೂಡಿದೆ. 

ಅಬಕಾರಿ ಹಗರಣದಲ್ಲಿ ಹೈರಾಣದ ಆಪ್, ಸಿಸೋಡಿಯಾಗೆ ಜಾಮೀನು ನಿರಾಕರಿಸಿದ ಕೋರ್ಟ್!

ಲೋಕಸಭಾ ಚುನಾವಣೆ ಪ್ರಚಾರ ಹಿನ್ನಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣ ತನಿಖೆ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಕೇಜ್ರಿವಾಲ್ ಮಧ್ಯಮಂತರ ಜಾಮೀನು ಅರ್ಜಿಯನ್ನು ಪರಿಗಣಿಸಬಹುದು ಅನ್ನೋ ಅಭಿಪ್ರಾಯ ವ್ಯಕ್ತಪಡಿಸಿತ್ತು. ಆದರೆ ಇಡಿ ಅಧಿಕಾರಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಜನಸಾಮಾನ್ಯ ಹಾಗೂ ಮುಖ್ಯಮಂತ್ರಿ ಇಬ್ಬರು ಕಾನೂನಿನಲ್ಲಿ ಒಂದೇ ಎಂದು ವಾದ ಮಂಡಿಸಿತ್ತು.