ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ, ನಿಮ್ಮ ಕ್ಷೇತ್ರದ ಅಭ್ಯರ್ಥಿ ಇವರೇ!
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. 36 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಈ ಪೈಕಿ ಕರ್ನಾಟಕ 6 ಕ್ಷೇತ್ರಗಳಿಗೂ ಟಿಕೆಟ್ ಫೈನಲ್ ಆಗಿದೆ. ವಯನಾಡ್‌ನಿಂದ ರಾಹುಲ್ ಗಾಂಧಿಗೆ ಮತ್ತೆ ಟಿಕೆಟ್ ನೀಡಲಾಗಿದೆ. ಇತ್ತ ಕರ್ನಾಟದಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಗೀತಾ ಶಿವರಾಜ್ ಕುಮಾರ್ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.
ನವದೆಹಲಿ(ಮಾ.08) ಲೋಕಸಭಾ ಚುನಾವಣೆಗೆ ಪಕ್ಷಗಳ ತಯಾರಿ ಜೋರಾಗಿ ನಡೆಯುತ್ತಿದೆ. ಎಲ್ಲಾ ಪಕ್ಷಗಳು ಟಿಕೆಟ್ ಫೈನಲ್ ಮಾಡುತ್ತಿದೆ. ಇದೀಗ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿ ಫೈನಲ್ ಆಗಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಕರ್ನಾಟಕ, ಕೇರಳ, ಚತ್ತೀಸಘಡ, ತೆಲಂಗಾಣ, ಮೆಘಾಲಯ, ನಾಗಾಲ್ಯಾಂಡ್ ಹಾಗೂ ಸಿಕ್ಕಿಂನ ಕೆಲ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ರಾಹುಲ್ ಗಾಂಧಿ ಕೇರಳದ ವಯಾನಾಡಿನಿಂದ ಈ ಬಾರಿಯೂ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ತಿರುವನಂತಪುರಂ ಕ್ಷೇತ್ರದಿಂದ ಶಶಿ ತರೂರ್‌ಗೆ ಟಿಕೆಟ್ ನೀಡಲಾಗಿದೆ. ಕರ್ನಾಟಕದ 6 ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡಲಾಗಿದೆ. ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್‌ಗೆ ಟಿಕೆಟ ಫೈನಲ್ ನೀಡಲಾಗಿದೆ. ಮಂಡ್ಯದಿಂದ ವೆಂಕಟರಮಣೇಗೌಡಗೆ ಟಿಕೆಟ್ ನೀಡಲಾಗಿದೆ.
ಕರ್ನಾಟಕದ 28 ಕ್ಷೇತ್ರಗಳ ಪೈಕಿ 6 ಕ್ಷೇತ್ರಕ್ಕೆ ಟಿಕೆಟ್ ಫೈನಲ್
1. ತುಮಕೂರು - ಮುದ್ದಹನುಮೇಗೌಡ - ಒಕ್ಕಲಿಗ
2. ಶಿವಮೊಗ್ಗ - ಗೀತಾ ಶಿವರಾಜ್ ಕುಮಾರ್ - ಈಡಿಗ
3. ಹಾಸನ - ಶ್ರೇಯಸ್ ಪಟೇಲ್ - ಒಕ್ಕಲಿಗ
4. ವಿಜಯಪುರ - ರಾಜು ಆಲಗೂರು - ಎಸ್.ಸಿ
5. ಮಂಡ್ಯ - ವೆಂಕಟರಮಣೇಗೌಡ (ಸ್ಟಾರ್ ಚಂದ್ರು) - ಒಕ್ಕಲಿಗ
6. ಬೆಂಗಳೂರು ಗ್ರಾಮಾಂತರ - ಡಿಕೆ ಸುರೇಶ್ - ಒಕ್ಕಲಿಗ
ಕಾಂಗ್ರೆಸ್ ಪಕ್ಷಕ್ಕೆ ಜನರ ಸಾಥ್ ಗ್ಯಾರಂಟಿ: ಸಚಿವ ಈಶ್ವರ್ ಖಂಡ್ರೆ
ತಾತ್ಕಾಲಿಕ ತಡೆ ಹಿಡಿಯಲಾದ ಕರ್ನಾಟಕ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು
1. ಉಡುಪಿ-ಚಿಕ್ಕಮಗಳೂರು - ಜಯಪ್ರಕಾಶ್ ಹೆಗ್ಡೆ - ಬಂಟ್ಸ್
2. ಚಿತ್ರದುರ್ಗ - ಬಿ.ಎನ್ ಚಂದ್ರಪ್ಪ - ಎಸ್.ಸಿ
ಕೇರಳ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ
ವಯನಾಡ್ (ಕೇರಳ): ರಾಹುಲ್ ಗಾಂಧಿ
ಕಾಸರಗೋಡು (ಕೇರಳ): ರಾಜಮೋಹನ್ ಉಣ್ಣಿತ್ತಾನ್
ಕಣ್ಣೂರು (ಕೇರಳ): ಕೆ ಸುಧಾಕರನ್
ವಡಕರ (ಕೇರಳ): ಶಫಿ ಪರಂಬಿಲ್
ಕೋಝಿಕ್ಕೋಡ್ (ಕೇರಳ): ಎಂಕೆ ರಾಘವನ್
ಪಾಲಕ್ಕಾಡ್ (ಕೇರಳ): ವಿಕೆ ಶ್ರೀಕಂಠನ್
ಅಲತೂರ್(ಎಸ್‌ಸಿ) (ಕೇರಳ): ರೆಮ್ಯಾ ಹರಿದಾಸ್
ತ್ರಿಶೂರ್ (ಕೇರಳ): ಕೆ ಮರಳೀಧರನ್
ಚಾಲಕ್ಕುಡಿ (ಕೇರಳ): ಬೆನ್ನಿ ಬಹನ್ನಾನ್
ಎರ್ನಾಕುಲಂ(ಕೇರಳ): ಹಿಬಿ ಇಡೆನ್
ಇಡುಕ್ಕಿ(ಕೇರಳ): ಡೀನ್ ಕುರಿಯಾಕೋಸ್
ಮಾವೇಲಿಕರ(ಎಸ್‌ಸಿ)(ಕೇರಳ): ಕೋಡಿಕುನ್ನಿಲ್ ಸುರೇಶ್
ಪಟ್ಟಣಂತಿಟ್ಟ(ಕೇರಳ): ಆ್ಯಂಟೋ ಆ್ಯಂಟೋನಿ
ಅತ್ತಿಂಗಲ್(ಕೇರಳ): ಅಡೂರ್ ಪ್ರಕಾಶ್
ಖಜಾನೆ ಖಾಲಿ ಆಗಿಲ್ಲ, ರಾಜ್ಯ ದಿವಾಳಿಯು ಸಹ ಆಗಿಲ್ಲ: ಯತೀಂದ್ರ ಸಿದ್ದರಾಮಯ್ಯ
ಚತ್ತೀಸಘಡದ 6 ಕ್ಷೇತ್ರ, ತೆಲಂಗಾಣದ 4 ಕ್ಷೇತ್ರ, ಮೆಘಾಲಯದ 2 ಕ್ಷೇತ್ರ, ಸಿಕ್ಕಿಂ ಒಂದು, ನಾಗಾಲ್ಯಾಂಡ್ ಹಾಗೂ ತ್ರಿಪುರಾದ ಒಂದೊಂದು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗಿದೆ. ಶೀಘ್ರದಲ್ಲೇ ಕಾಂಗ್ರೆಸ್ ಅಧಿಕೃತ ಘೋಷಣೆ ಮಾಡಲಿದೆ.