ರಾಯ್‌ಬರೇಲಿಯಿಂದ ಪ್ರಿಯಾಂಕಾ, ಅಮೆಥಿ-ವಯನಾಡಿನಿಂದ ರಾಹುಲ್ ಗಾಂಧಿ ಸ್ಪರ್ಧೆ ಸಾಧ್ಯತೆ!

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗಿದೆ. ಇದೀಗ ಸೀಟು ಹಂಚಿಕೆ ಜೊತೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡಿದೆ. ಇದೇ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಚುನಾವಣೆಗೆ ಸ್ಪರ್ಧಿಸಲು ರೆಡಿಯಾಗಿದ್ದಾರೆ.ಇತ್ತ ರಾಹುಲ್ ಗಾಂಧಿ 2 ಕ್ಷೇತ್ರದಿಂದ ಸ್ಪರ್ಧಿಸುವುದು ಬಹುತೇಕ ಖಚಿತಗೊಂಡಿದೆ.

Lok Sabha Election 2024 Priyanka Gandhi likely to contest from raebareli constituency ckm

ನವದೆಹಲಿ(ಮಾ.06) ಲೋಕಸಭಾ ಚುನಾವಣೆ ದಿನಾಂಕ ಘೋಷಣೆಗೆ ಕೆಲ ದಿನಗಳು ಮಾತ್ರ ಬಾಕಿ. ಈಗಾಗಲೇ ತಯಾರಿಗಳು ಭರ್ಜರಿಯಾಗಿ ನಡೆಯುತ್ತಿದೆ. ಇದೀಗ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುತ್ತಿದೆ. ಅಳೆದು ತೂಗಿ ಅಭ್ಯರ್ಥಿಗಳಿಗೆ ಟಿಕೆಟ್ ಫೈನಲ್ ಮಾಡುತ್ತಿದೆ. ಕೆಲ ಕ್ಷೇತ್ರಗಳ ಕುತೂಹಲ ಹೆಚ್ಚಾಗುತ್ತಲೇ ಇದೆ. ಆರೋಗ್ಯ ಹಾಗೂ ವಯಸ್ಸಿನ ಕಾರಣದಿಂದ ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದು ರಾಜ್ಯಸಭೆಗೆ ಆಯ್ಕೆಯಾಗಿರುವ ಸೋನಿಯಾ ಗಾಂಧಿ ಕ್ಷೇತ್ರ ಕುತೂಹಲ ಕೇಂದ್ರಬಿಂದು. ಈ ಬಾರಿ ರಾಯ್‌ಬರೇಲಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವು ಸಾಧ್ಯತೆ ದಟ್ಟವಾಗಿದೆ. ಪ್ರಿಯಾಂಕಾ ಇದೇ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಧುಮುಕಲಿದ್ದಾರೆ ಅನ್ನೋ ಮಾತುಗಳು ಬಲವಾಗುತ್ತಿದೆ.

ಗಾಂಧಿ ಕುಟುಂಬಕ್ಕೆ ರಾಯ್‌ಬರೇಲಿ ಸಂಜೀವಿನಿ ಕ್ಷೇತ್ರವಾಗಿದೆ. ಸೋನಿಯಾ ಗಾಂಧಿ 5 ಬಾರಿ ಇದೇ ಕ್ಷೇತ್ರದಿಂದ ಗೆದ್ದಿದ್ದಾರೆ. 2019ರ ಚುನಾವಣೆಯಲ್ಲಿ ಉತ್ತರ ಪ್ರದೇಶದ 80 ಸ್ಥಾನಗಳ ಪೈಕಿ ಕಾಂಗ್ರೆಸ್ ಗೆದ್ದಿದ್ದು ಕೇವಲ ಒಂದು ಸ್ಥಾನ ಮಾತ್ರ. ಅದು ರಾಯ್‌ಬರೇಲಿಯಿಂದ ಸ್ಪರ್ಧಿಸಿದ ಸೋನಿಯಾ ಗಾಂಧಿ. ಇದೀಗ ತೆರವಾಗಿರುವ ಈ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ.

ಸೋನಿಯಾ ಗಾಂಧಿ ರಾಜ್ಯಸಭೆಗೆ, ಅಮ್ಮನ ಕ್ಷೇತ್ರದಿಂದ ಮಗಳು ಪ್ರಿಯಾಂಕಾ ಲೋಕಸಭೆಗೆ ಸ್ಪರ್ಧೆ..?

ಪ್ರಿಯಾಂಕಾ ಗಾಂಧಿ ಚುನಾವಣಾ ರಾಜಕೀಯಕ್ಕೆ ಪ್ರವೇಶ ರಾಯ್‌ಬರೇಲಿಯಿಂದ ಆಗುವ ಸಾಧ್ಯತೆ ಇದೆ. ಈ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಮೂಲಕ ಅದೃಷ್ಠ ಪರೀಕ್ಷೆ ನಡೆಸಲಿದ್ದಾರೆ. ರಾಯ್‌ಬರೇಲಿ ಕಾಂಗ್ರೆಸ್ ಭದ್ರಕೋಟೆಯಾಗಿರುವ ಕಾರಣ ಗೆಲುವು ಕಷ್ಟವಲ್ಲ ಅನ್ನೋದು ಕಾಂಗ್ರೆಸ್ ಹಿರಿಯ ನಾಯಕರು ಅಭಿಪ್ರಾಯ.

ಇತ್ತ ರಾಹುಲ್ ಗಾಂಧಿ ಈ ಬಾರಿಯೂ ಎರಡು ಕ್ಷೇತ್ರದಿಂದ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಉತ್ತರ ಪ್ರದೇಶದ ಅಮೆಥಿ ಹಾಗೂ ಕೇರಳ ವಯನಾಡಿನಿಂದ ರಾಹುಲ್ ಗಾಂಧಿ ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ. 2019ರ ಚುನಾವಣೆಯಲ್ಲಿ ಈ ಎರಡೂ ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧಿಸಿದ್ದರು. ಆದರೆ ಅಮೆಥಿಯಲ್ಲಿ ಬಿಜೆಪಿ ನಾಯಕಿ ಸ್ಮೃತಿ ಇರಾನಿ ವಿರುದ್ಧ ಸೋಲು ಕಂಡಿದ್ದರು. ಆದರೆ ಮುಸ್ಲಿಮ್ ಪ್ರಾಬಲ್ಯದ ವಯನಾಡಿನಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ್ದರು.

ಲೋಕಸಭೆ ಚುನಾವಣೆ 2024: ಪ್ರಿಯಾಂಕಾ ಕೊಪ್ಪಳದಿಂದ ಸ್ಪರ್ಧೆ?

ಮಾರ್ಚ್7 ರಂದು ಕರೆದಿರುವ ಕಾಂಗ್ರೆಸ್ ಸಭೆಯಲ್ಲಿ ಈ ಕುರಿತು ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.
 

Latest Videos
Follow Us:
Download App:
  • android
  • ios