ಡಿಸೆಂಬರ್ 19ರಂದು ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆ ನಿಗದಿಯಾಗಿದ್ದು, ಅದಾದ ಎರಡೇ ದಿನದಲ್ಲಿ ದೆಹಲಿಯಲ್ಲಿನ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸಿಡಬ್ಲ್ಯುಸಿ ಸಭೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆದಿದ್ದಾರೆ.

ನವದೆಹಲಿ (ಡಿಸೆಂಬರ್ 18, 2023): ಇತ್ತೀಚಿನ ಪಂಚರಾಜ್ಯ ಚುನಾವಣೆಯಲ್ಲಿ ಅನಿರೀಕ್ಷಿತ ಸೋಲು ಕಂಡು ಹಿನ್ನಡೆಯಲ್ಲಿರುವ ಕಾಂಗ್ರೆಸ್‌, 2024ರ ಲೋಕಸಭಾ ಚುನಾವಣೆಗೆ ಸಜ್ಜಾಗುವ ನಿಟ್ಟಿನಲ್ಲಿ ಡಿಸೆಂಬರ್ 21ರಂದು ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ)ಯ ಸಭೆ ಕರೆದಿದೆ.

ಈ ಸಭೆಯಲ್ಲಿ ಇತ್ತೀಚಿನ ಪಂಚರಾಜ್ಯ ಚುನಾವಣೆಗಳ ಪೈಕಿ 4 ರಾಜ್ಯಗಳಲ್ಲಿ ಸೋಲು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಹಣಿಯಲು ರೂಪಿಸಬೇಕಾದ ಕಾರ್ಯತಂತ್ರ, ಲೋಕಸಭಾ ಚುನಾವಣೆಯ ಪ್ರಚಾರ ಅಭಿಯಾನ, ಇಂಡಿಯಾ ಮೈತ್ರಿಕೂಟದ ಪಕ್ಷಗಳ ಜೊತೆ ಸೀಟು ಹಂಚಿಕೆ ವಿಷಯ ಮತ್ತು ರಾಹುಲ್‌ ಗಾಂಧಿ ಪಾದಯಾತ್ರೆ ಕುರಿತು ಪ್ರಮುಖವಾಗಿ ಚರ್ಚಿಸಲಾಗುವುದು ಎನ್ನಲಾಗಿದೆ.

ಇದನ್ನು ಓದಿ: ಲೋಕಸಭೆ ಟಿಕೆಟ್‌ ಆಕಾಂಕ್ಷಿ ನಾನಲ್ಲ, ಹೈಕಮಾಂಡ್ ಸೂಚಿಸಿದರೆ ಸ್ಪರ್ಧೆ ಮಾಡುವೆ: ಜಗದೀಶ್‌ ಶೆಟ್ಟರ್

ಡಿಸೆಂಬರ್ 19ರಂದು ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆ ನಿಗದಿಯಾಗಿದ್ದು, ಅದಾದ ಎರಡೇ ದಿನದಲ್ಲಿ ದೆಹಲಿಯಲ್ಲಿನ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸಿಡಬ್ಲ್ಯುಸಿ ಸಭೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆದಿದ್ದಾರೆ.

ಭಾರತ್‌ ಜೋಡೋ 2.0:
ಈ ಹಿಂದೆ ದಕ್ಷಿಣ ಕನ್ಯಾಕುಮಾರಿಯಿಂದ ಉತ್ತರದ ಶ್ರೀನಗರದವರೆಗೆ ಭಾರತ್‌ ಜೋಡೋ ಪಾದಯಾತ್ರೆ ನಡೆಸಿದ್ದ ಕಾಂಗ್ರೆಸ್‌ ನಾಯಕ, ಜನವರಿ ತಿಂಗಳಲ್ಲಿ ದೇಶದ ಪೂರ್ವ ಭಾಗದಿಂದ ಪಶ್ಚಿಮಕ್ಕೆ ಹೈಬ್ರಿಡ್‌ ಮಾದರಿಯಲ್ಲಿ ಪಾದಯಾತ್ರೆ ನಡೆಸುವ ಸಾಧ್ಯತೆ ಇದೆ. ಬೆಲೆ ಏರಿಕೆ ಮತ್ತು ನಿರುದ್ಯೋಗ ಸಮಸ್ಯೆಯನ್ನು ಈ ಯಾತ್ರೆ ವೇಳೆ ಪ್ರಮುಖವಾಗಿ ಜನರ ಮುಂದಿಡಲು ಪಕ್ಷ ನಿರ್ಧರಿಸಿದೆ ಎನ್ನಲಾಗಿದೆ.

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಕ್ರೌಡ್‌ ಫಂಡಿಂಗ್; ಅಭಿಯಾನಕ್ಕೆ ನಾಳೆ ಚಾಲನೆ