ನವದೆಹಲಿ (ಅ.23): ಬಿಹಾರದಲ್ಲಿ ಅಧಿಕಾರಕ್ಕೆ ಬಂದರೆ ಉಚಿತವಾಗಿ ಕೊರೋನಾ ಲಸಿಕೆ ವಿತರಿಸುವುದಾಗಿ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ ಬೆನ್ನಲ್ಲೇ, ತಮಿಳುನಾಡು ಹಾಗೂ ಮಧ್ಯಪ್ರದೇಶ ಸರ್ಕಾರಗಳು ತಾವು ಕೂಡ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಣೆ ಮಾಡಿವೆ. 

ಕೊರೋನಾಕ್ಕೆ ಲಸಿಕೆ ಲಭ್ಯ ಆಗುತ್ತಿದ್ದಂತೆ ರಾಜ್ಯದ ಜನರಿಗೆ ಲಸಿಕೆಯನ್ನು ಉಚಿತವಾಗಿ ವಿತರಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಗುರುವಾರ ಹೇಳಿದ್ದಾರೆ. ದೇಶದಲ್ಲಿ ಕೊರೋನಾಕ್ಕೆ ಲಸಿಕೆ ಲಭ್ಯ ಆಗುತ್ತಿದ್ದಂತೆ ತಮಿಳುನಾಡಿನಲ್ಲೂ ಉಚಿತವಾಗಿ ವಿತರಿಸಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. 

ಕೊರೋನಾ ಸೋಂಕಿತ ಶವ ಪರೀಕ್ಷೆ : ಹೊರಬಿತ್ತು ಆತಂಕಕಾರಿ ಸಂಗತಿ

ಕಳೆದ ವಾರ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌, 2021ರ ಆರಂಭದಲ್ಲೇ ಕೊರೋನಾಕ್ಕೆ ಲಸಿಕೆ ಲಭ್ಯವಾಗಲಿದೆ ಎಂದು ಹೇಳಿದ್ದರು. ಈ ನಡುವೆ, ಮಧ್ಯಪ್ರದೇಶ ಮುಖ್ಯಮಂತ್ರಿ ಕೂಡ ಲಸಿಕೆ ದೊರೆಯುತ್ತಿದ್ದಂತೆ ಮಧ್ಯಪ್ರದೇಶ ಜನರಿಗೆ ಉಚಿತವಾಗಿ ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ.