Asianet Suvarna News Asianet Suvarna News

ನಿದ್ದೆಗೆ ಜಾರಿದ ಚಾಲಕ: 13 ಜನ ಸಾಗುತ್ತಿದ್ದ ಆಟೋ ರಸ್ತೆಬದಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ: 7 ಮಂದಿ ಸಾವು

ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ಒಂದು ಪ್ರಯಾಣಿಕ ಆಟೋ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 7 ಭಕ್ತರು ಸಾವನ್ನಪ್ಪಿದ್ದಾರೆ ಮತ್ತು 6 ಮಂದಿ ಗಾಯಗೊಂಡಿದ್ದಾರೆ. ಚಾಲಕನಿಗೆ ನಿದ್ದೆ ಮಂಪರು ಬಂದ ಕಾರಣ ಈ ದುರ್ಘಟನೆ ಸಂಭವಿಸಿದೆ.

Madhya Pradesh auto carrying 13 people to Bageshwar Dham collided with a truck in in Chhatarpur 7 people died akb
Author
First Published Aug 20, 2024, 12:21 PM IST | Last Updated Aug 20, 2024, 12:25 PM IST

ಛತ್ತರ್‌ಪುರ: ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಂದು ಮುಂಜಾನೆ ಒಂದು ಪ್ರಯಾಣಿಕ ಆಟೋ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 7 ಜನರು ಸಾವನ್ನಪ್ಪಿ ಆರು ಜನ ಗಾಯಗೊಂಡಿದ್ದಾರೆ. ಮೃತರೆಲ್ಲರೂ ಆಟೋದಲ್ಲಿ ಆಟೋದಲ್ಲಿ ತೀರ್ಥಕ್ಷೇತ್ರ ಭಾಗೇಶ್ವರ ಧಾಮಕ್ಕೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.  ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ದುರಂತದಲ್ಲಿ ಮೃತರಾದವರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಗ್ವಾಲಿಯರ್ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಕಾರಣಕ್ಕಾಗಿ ಈ ಭೀಕರ ಅಪಘಾತ ಸಂಭವಿಸಿದೆ

ಛತ್ತರ್‌ಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-39 ರಲ್ಲಿ ಇಂದು ಬೆಳಿಗ್ಗೆ ಸುಮಾರು 5 ಗಂಟೆಗೆ  ಈ ದುರ್ಘಟನೆ ಸಂಭವಿಸಿದೆ. ಆಟೋದಲ್ಲಿದ್ದ 13 ಮಂದಿ ಖಜುರಾಹೋ-ಝಾನ್ಸಿ ಹೆದ್ದಾರಿಯ ಮೂಲಕ ಬಾಗೇಶ್ವರಕ್ಕೆ ತೆರಳುತ್ತಿದ್ದರು. ಈ ವೇಳೆ ತೀರ್ಥಯಾತ್ರಿಕರನ್ನು ಹೊತ್ತು ಸಾಗುತ್ತಿದ್ದ ಆಟೋ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಸ್ಥಳದಲ್ಲಿ ಭೀಕರ ವಾತಾವರಣ ನಿರ್ಮಾಣವಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ಚಾಲಕನಿಗೆ ನಿದ್ದೆ ಮತ್ತು ಬಂದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಲ್ಲದೆ, ಆಟೋದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಪ್ರಯಾಣಿಸುತ್ತಿದ್ದ ಕಾರಣ ಅದು ನಿಯಂತ್ರಣ ತಪ್ಪಿದೆ ಎಂದು ತಿಳಿದು ಬಂದಿದೆ.

20 ವರ್ಷದ ಯುವಕನ ಅತೀವೇಗದ ಚಾಲನೆಗೆ ಸೆಕ್ಯೂರಿಟಿ ಗಾರ್ಡ್ ಬಲಿ : ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬೆಂಗಳೂರು: ಗರ್ಭಿಣಿಗೆ ಲಾರಿ ಡಿಕ್ಕಿ, ಹೊಟ್ಟೆಯಿಂದ ಬಂದ ಮಗು ವಿಲವಿಲ ಒದ್ದಾಡಿ ಸಾವು..!

Latest Videos
Follow Us:
Download App:
  • android
  • ios