ಚುನಾವಣೆ ಹೊಸ್ತಿಲಲ್ಲಿರುವ ಮಧ್ಯಪ್ರದೇಶದಲ್ಲಿ ಆಡಳಿತದಲ್ಲಿರುವ ಬಿಜೆಪಿ ಮಹಿಳೆಯರಿಗಾಗಿ ಮತ್ತೊಂದು ಯೋಜನೆಯನ್ನು ಘೊಷಿಸಿದ್ದು, ಬಡ ಕುಟುಂಬಗಳ ಗೃಹಿಣಿಯರು ಮಾಸಿಕ 10 ಸಾವಿರ ರು. ಗಳಿಕೆ ಮಾಡಲು ಸರ್ಕಾರ ನೆರವು ನೀಡಲಿದೆ ಎಂದು ಹೇಳಿದ್ದಾರೆ.

ಇಂದೋರ್‌: ಚುನಾವಣೆ ಹೊಸ್ತಿಲಲ್ಲಿರುವ ಮಧ್ಯಪ್ರದೇಶದಲ್ಲಿ ಆಡಳಿತದಲ್ಲಿರುವ ಬಿಜೆಪಿ ಮಹಿಳೆಯರಿಗಾಗಿ ಮತ್ತೊಂದು ಯೋಜನೆಯನ್ನು ಘೊಷಿಸಿದ್ದು, ಬಡ ಕುಟುಂಬಗಳ ಗೃಹಿಣಿಯರು ಮಾಸಿಕ 10 ಸಾವಿರ ರು. ಗಳಿಕೆ ಮಾಡಲು ಸರ್ಕಾರ ನೆರವು ನೀಡಲಿದೆ ಎಂದು ಹೇಳಿದ್ದಾರೆ. ‘ನಮ್ಮ ಗುರಿಯೆಂದರೆ ಪ್ರತಿಯೊಂದು ಬಡ ಕುಟುಂಬದ ಗೃಹಿಣಿ ತಿಂಗಳಿಗೆ ಕನಿಷ್ಠ 10 ಸಾವಿರ ರು.ಗಳನ್ನು ಗಳಿಸುವಂತಾಗಬೇಕು. ಇದಕ್ಕಾಗಿ ಸಣ್ಣ ಸ್ವ ಸಹಾಯ ಸಂಘಗಳು ಅಥವಾ ಗೃಹಪಯೋಗಿ ವಸ್ತುಗಳ ಉತ್ಪಾದನೆಯಿಂದ ಗಳಿಸಿಕೊಳ್ಳಬಹುದು. ಇದಕ್ಕಾಗಿ ಸರ್ಕಾರದ ಗ್ಯಾರಂಟಿಯಲ್ಲಿ ಶೇ.2ರಷ್ಟು ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುತ್ತದೆ’ ಎಂದು ಚೌಹಾಣ್‌ ಹೇಳಿದ್ದಾರೆ. ಇದಕ್ಕೂ ಮೊದಲು ಲಾಡ್ಲಿ ಬೆಹನಾ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಮಾಸಿಕ 1 ಸಾವಿರ ರು. ಸಹಾಯಧನ ನೀಡುವ ಯೋಜನೆಯನ್ನು ಅವರು ಘೋಷಿಸಿದ್ದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಯೋಜನೆ: ಸಚಿವ ಪರಮೇಶ್ವರ್‌

ಮಹಿಳಾ ಸಬಲೀಕರಣ, ಆರೋಗ್ಯದಲ್ಲಿ ಸುಧಾರಣೆ, ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ಬಿಲ್ ಗೇಟ್ಸ್ ಮೆಚ್ಚುಗೆ!