ಬೋಪಾಲ್(ಅ.12): 45 ವರ್ಷದ ಮಹಿಳೆಯೊಬ್ಬಳು 16ನೇ ಮಗುವಿಗೆ ಜನ್ಮ ನೀಡುವ ವೇಳೆ ಅಸು ನೀಗಿರುವ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ನಡೆದಿದೆ. ದುರಾದೃಷ್ಟವಶಾತ್ ತಾಯಿ ಮೃತಪಟ್ಟ ಕೆಲವೇ ಕ್ಷಣಗಳಲ್ಲಿ ನವಜಾತ ಶಿಶು ಕೂಡಾ ಸಾವನ್ನಪ್ಪಿದೆ.

ಮೃತ ಮಹಿಳೆಯನ್ನು ದಾಮೋಹ್ ಜಿಲ್ಲೆಯ ಸುಖ್ರಾನಿ ಅಹಿರ್ವಾರ್ ಶನಿವಾರ ಪಡಾಝಿರ್‌ನಲ್ಲಿರುವ ತನ್ನ ಮನೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಆದರೆ ಹೆರಿಗೆ ಬಳಿಕ ತಾಯಿ ಹಾಗೂ ಮಗು ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತೆಂದು ಆಶಾ ಕಾರ್ಯಕರ್ತೆ ಕಲ್ಲೋ ಬಾಯ್ ವಿಶ್ವಕರ್ಮ ತಿಳಿಸಿದ್ದಾರೆ.

ಗಂಭೀರ ಸ್ಥಿತಿಯಲ್ಲಿದ್ದ ತಾಯಿ ಹಾಗೂ ಮಗುವನ್ನು ಕೂಡಲೇ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ದುರ್ದೈವವಶಾತ್‌ ತಾಯಿ ಮಗು ಇಬ್ಬರೂ ಸಾವನ್ನಪ್ಪಿದ್ದಾರೆ. 

ಇನ್ನು ಈ ಮಹಿಳೆ ಈ ಹಿಂದೆ 15 ಮಕ್ಕಳಿಗೆ ಜನ್ಮ ನೀಡಿದ್ದು, ಈ ಪೈಕಿ 7 ಮಕ್ಕಳು ಸಾವನ್ನಪ್ಪಿವೆ ಎಂದು ಕಲ್ಲೋ ಬಾಯ್ ತಿಳಿಸಿದ್ದಾರೆ,.