RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್: ಸುಪ್ರೀಂ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ
ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಮದ್ರಾಸ್ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವುದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಚೆನ್ನೈ: ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಮದ್ರಾಸ್ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವುದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಫೆಬ್ರವರಿ 10 ರಂದು ನೀಡಿದ ಆದೇಶದಲ್ಲಿ, ಮದ್ರಾಸ್ ಹೈಕೋರ್ಟ್‌ನ ವಿಭಾಗೀಯ ಪೀಠವು ಆರ್‌ಎಸ್‌ಎಸ್‌ಗೆ ಪಥಸಂಚಲನಕ್ಕೆ ಅನುಮತಿ ನೀಡುವಂತೆ ತಮಿಳುನಾಡು ಪೊಲೀಸರಿಗೆ ನಿರ್ದೇಶನ ನೀಡಿತ್ತು. ರಾಜ್ಯದಲ್ಲಿ ನಡೆಸಲು ಉದ್ದೇಶಿಸಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪಥಸಂಚಲನಕ್ಕೆ ಈ ಹಿಂದೆ ಸರ್ಕಾರ ವಿಧಿಸಿದ್ದ ಷರತ್ತುಗಳನ್ನು ತೆಗೆದು ಹಾಕಿರುವ ಮದ್ರಾಸ್ ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಇದಕ್ಕೂ ಮೊದಲು ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ 'ಆಜಾದಿ ಕಾ ಅಮೃತ್ ಮಹೋತ್ಸವ' ಮತ್ತು ಗಾಂಧಿ ಜಯಂತಿಯ ಅಂಗವಾಗಿ ನಗರದಲ್ಲಿ ಆರ್‌ಎಸ್‌ಎಸ್‌ಎಸ್ ಪಥಸಂಚಲನ ನಡೆಸಲು ಮುಂದಾಗಿತ್ತು. ಆದರೆ ಇದಕ್ಕೆ ತಮಿಳುನಾಡು ಸರ್ಕಾರವು ಆರ್‌ಎಸ್‌ಎಸ್‌ಗೆ ಅನುಮತಿ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್ ಮದ್ರಾಸ್ ಹೈಕೋರ್ಟ್‌ಗೆ ಮನವಿ ಸಲ್ಲಿಸಿತು.
PFI Ban: ಮತಾಂಧ ಸಂಘಟನೆ ಪಿಎಫ್‌ಐ ಬ್ಯಾನ್‌ಗೆ ಏಳು ಪ್ರಮುಖ ಕಾರಣಗಳು..!
ಇದಾದ ನಂತರ ಕಳೆದ ವರ್ಷ ನವಂಬರ್ 4 ರಂದು ಮದ್ರಾಸ್ ಹೈಕೋರ್ಟ್‌ನ (Madras High Court) ಏಕಸದಸ್ಯ ಪೀಠ ಕೆಲವು ಷರತ್ತುಗಳನ್ನು ವಿಧಿಸಿ ಆರ್‌ಎಸ್‌ಎಸ್‌ಗೆ ಮೆರವಣಿಗೆ ನಡೆಸಲು ಅವಕಾಶ ನೀಡಿತು. ನವೆಂಬರ್ 4 ರ ಹೈಕೋರ್ಟ್ ಆದೇಶದಲ್ಲಿ ಆರ್‌ಎಸ್‌ಎಸ್ ತನ್ನ ಪಥಸಂಚಲನವನ್ನು (RSS route march) ಒಳಾಂಗಣದಲ್ಲಿ ಅಥವಾ ಯಾವುದಾದರೂ ಸಂಬಂಧಿತ ಮೈದಾನದಲ್ಲಿ ನಡೆಸುವಂತೆ ಷರತ್ತು ವಿಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಆದೇಶವನ್ನು ಆರ್‌ಎಸ್‌ಎಸ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.
ಆರ್‌ಎಸ್‌ಎಸ್‌ನ ಈ ಅರ್ಜಿಯನ್ನು ಫೆಬ್ರವರಿ 10 ರಂದು ವಿಚಾರಣೆಗೆ ಕೈಗೆತ್ತಿಕೊಂಡ ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಆರ್ ಮಹದೇವನ್ (R Mahadevan) ಮತ್ತು ಮೊಹಮ್ಮದ್ ಶಫೀಕ್ (Mohammed Shaffiq) ಅವರ ವಿಭಾಗೀಯ ಪೀಠವು ಏಕಸದಸ್ಯ ಪೀಠದ ಆದೇಶವನ್ನು ರದ್ದುಪಡಿಸಿತು. ಅಲ್ಲದೇ ಕಳೆದ ವರ್ಷ ಸೆಪ್ಟೆಂಬರ್ 22ರಂದು ನೀಡಿದ್ದ ಹಿಂದಿನ ಆದೇಶವನ್ನು ಮರುಸ್ಥಾಪಿಸಿತ್ತು. ಅಲ್ಲದೇ ಈ ಪೀಠ ಆರ್‌ಎಸ್‌ಎಸ್ ಪ್ರಾತಿನಿಧ್ಯವನ್ನು ಪರಿಗಣಿಸುವ ಜೊತೆ ಅವರಿಗೆ ಪಥಸಂಚಲನಕ್ಕೆ ಅನುಮತಿ ನೀಡುವಂತೆ ಪೊಲೀಸರಿಗೆ ನಿರ್ದೇಶನ ನೀಡಿತ್ತು.
ದೆಹಲಿ ಮಸೀದಿಯ ಮುಖ್ಯ ಇಮಾಮ್ ಭೇಟಿ ಮಾಡಿದ ಆರೆಸ್ಸೆಸ್ ಸರಸಂಘಚಾಲಕ ಮೋಹನ್ ಭಾಗವತ್!
ಫೆಬ್ರವರಿ 10 ರ ಆದೇಶದಲ್ಲಿ, ರಾಜ್ಯದಲ್ಲಿ ಪಥಸಂಚಲನ ನಡೆಸಲು ತನ್ನ ಆಯ್ಕೆಯ ಯಾವುದಾದರೂ ಮೂರು ದಿನಾಂಕಗಳನ್ನು ತಮಿಳುನಾಡು ಪೊಲೀಸರಿಗೆ ನೀಡುವಂತೆ ಆರ್‌ಎಸ್‌ಎಸ್‌ಗೆ ನಿರ್ದೇಶಿಸಿದ ಹೈಕೋರ್ಟ್, ಅವುಗಳಲ್ಲಿ ಯಾವುದಾದರೂ ಒಂದು ದಿನ ಮೆರವಣಿಗೆ ನಡೆಸಲು ಪೊಲೀಸರು ಅನುಮತಿ ನೀಡಬೇಕು ಎಂದು ಕೋರ್ಟ್ ಹೇಳಿದೆ. ಅಲ್ಲದೇ ಈ ಕಾರ್ಯಕ್ರಮದ ಸಂದರ್ಭದಲ್ಲಿ ಕಟ್ಟುನಿಟ್ಟಾದ ಶಿಸ್ತನ್ನು ಅನುಸರಿಸುವಂತೆ ನ್ಯಾಯಾಲಯವು ಆರ್‌ಎಸ್‌ಎಸ್‌ಗೆ (RSS) ಆದೇಶಿಸಿದ್ದು, ಯಾವುದೇ ಪ್ರಚೋದನೆಗೆ ಒಳಗಾಗಬಾರದು ಎಂದು ಎಚ್ಚರಿಸಿದೆ. ಅಲ್ಲದೇ ಈ ಮೆರವಣಿಗೆಗೆ ಅಗತ್ಯ ಭದ್ರತೆ ಮತ್ತು ಸಂಚಾರ ವ್ಯವಸ್ಥೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ ಹೈಕೋರ್ಟ್‌ನ ಈ ಆದೇಶ ಪ್ರಶ್ನಿಸಿ ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ (DMK) ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ (Supreme Court) ಅರ್ಜಿ ಸಲ್ಲಿಸಿದೆ.
ಆರ್‌ಎಸ್‌ಎಸ್ ಚಡ್ಡಿಗೆ ಬೆಂಕಿ ಹಚ್ಚಿದ ಚಿತ್ರ ಪೋಸ್ಟ್ ಮಾಡಿದ ಕಾಂಗ್ರೆಸ್, ಇದು ಅವರ ಸಂಸ್ಕೃತಿ ಎಂದ ಬಿಜೆಪಿ!