ಮಹಾರಾಷ್ಟ್ರ ವಿಧಾನಸಭೆ ಮೆಟ್ಟಿಲುಗಳ ಮೇಲೆ ಜಮಾಯಿಸಿದ ಹಲವು ಬಿಜೆಪಿ ಶಾಸಕರು, ಪ್ರಿಯಾಂಕ್ ಖರ್ಗೆ ವಿರುದ್ಧ ಘೋಷಣೆ ಕೂಗಿದರು. ಪ್ರಿಯಾಂಕ್ ಹೇಳಿಕೆಗೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಪ್ರತಿಕ್ರಿಯೆ ನೀಡಬೇಕು ಎಂದು ಒತ್ತಾಯಿಸಿದರು.
ನಾಗಪುರ(ಡಿ.09): ಅನುಮತಿ ದೊರೆತರೆ ವಿ.ಡಿ.ಸಾವರ್ಕರ್ ಅವರ ಭಾವಚಿತ್ರವನ್ನು ಕರ್ನಾಟಕ ವಿಧಾನಸಭೆಯಿಂದ ತೆರವುಗೊಳಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ಹಾಗೂ ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ ಹೇಳಿಕೆಯನ್ನು ಖಂಡಿಸಿ ಮಹಾರಾಷ್ಟ್ರ ಬಿಜೆಪಿ ಶಾಸಕರು ರಾಜ್ಯ ವಿಧಾನಸಭೆಯ ಹೊರಗೆ ಶುಕ್ರವಾರ ಪ್ರತಿಭಟನೆ ನಡೆಸಿದರು.
ವಿಧಾನಸಭೆ ಮೆಟ್ಟಿಲುಗಳ ಮೇಲೆ ಜಮಾಯಿಸಿದ ಹಲವು ಬಿಜೆಪಿ ಶಾಸಕರು, ಪ್ರಿಯಾಂಕ್ ಖರ್ಗೆ ವಿರುದ್ಧ ಘೋಷಣೆ ಕೂಗಿದರು. ಪ್ರಿಯಾಂಕ್ ಹೇಳಿಕೆಗೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಪ್ರತಿಕ್ರಿಯೆ ನೀಡಬೇಕು ಎಂದು ಒತ್ತಾಯಿಸಿದರು.
ಸಾವರ್ಕರ್ ಫೋಟೋ ತೆಗೆಸುವ ಪ್ರಿಯಾಂಕ್ ಹೇಳಿಕೆಗೆ ಸ್ಪೀಕರ್ ಬೇಸರ
‘ನನ್ನ ವೈಯಕ್ತಿಕ ಅಭಿಪ್ರಾಯದ ಪ್ರಕಾರ ಸಾವರ್ಕರ್ ಭಾವಿಚಿತ್ರವನ್ನು ವಿಧಾನಸಭೆಯಿಂದ ತೆರವುಗೊಳಿಸುವುದು ಸೂಕ್ತವಾಗಿದೆ. ಅನುಮತಿ ನೀಡಿದರೆ ತೆರವುಗೊಳಿಸುತ್ತೇನೆ’ ಎಂದು ಪ್ರಿಯಾಂಕ್ ಖರ್ಗೆ ಗುರುವಾರ ಹೇಳಿದ್ದರು. ‘ಸಾವರ್ಕರ್ ಬಗೆಗಿನ ನನ್ನ ಪ್ರಶ್ನೆಗಳಿಗೆ ಉತ್ತರಿಸಿ ನಂತರ ಅವರ ಚಿತ್ರವನ್ನು ವಿಧಾನಸಭೆಯಲ್ಲಿ ಹಾಕಲಿ’ ಎಂದೂ ಅವರು ಬಿಜೆಪಿಗೆ ಸವಾಲೆಸೆದಿದ್ದರು.
