ನೆರೆ ರಾಜ್ಯದಲ್ಲಿ 1ರಿಂದ 9, 11ನೇ ತರಗತಿಗೆ ಪರೀಕ್ಷೆ ಇಲ್ಲ!
ಮಹಾರಾಷ್ಟ್ರದಲ್ಲಿ ಪರೀಕ್ಷೆ ಇಲ್ಲದೆ ಪಾಸ್| 1ರಿಂದ 9, 11ನೇ ತರಗತಿಗೆ ಪರೀಕ್ಷೆ ಇಲ್ಲ| 10, 12ನೇ ತರಗತಿಗೆ ಆಫ್‌ಲೈನ್ ಪರೀಕ್ಷೆ
ಮುಂಬೈ(ಏ.08): ಮಹಾರಾಷ್ಟ್ರದಲ್ಲಿ ಕೊರೋನಾ 2ನೇ ಅಲೆ ಭಾರೀ ಅನಾಹುತ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣ ಮಾಡಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಬುಧವಾರ ಪ್ರಕಟಿಸಿದೆ.
ಆದರೆ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ನಲ್ಲೇ ಪರೀಕ್ಷೆ ನಡೆಸಲಾಗುವುದು. ಶೀಘ್ರವೇ ದಿನಾಂಕ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ವರ್ಷಾ ಗಾಯಕ್ವಾಡ್ ಮಾಹಿತಿ ನೀಡಿದ್ದಾರೆ.
ಕೊರೋನಾ ಸೋಂಕು ಹೆಚ್ಚಳಗೊಂಡ ಹಿನ್ನೆಲೆಯಲ್ಲಿ 1ರಿಂದ 8ನೆಯ ತರಗತಿವರೆಗಿನ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಉತ್ತೀರ್ಣ ಮಾಡುವುದಾಗಿ ಏ.3ರಂದೇ ರಾಜ್ಯ ಸರ್ಕಾರ ಪ್ರಕಟಿಸಿತ್ತು. ಮಹಾರಾಷ್ಟ್ರದಲ್ಲಿ ನಿತ್ಯ 50000ದ ಆಸುಪಾಸು ಹೊಸ ಕೊರೋನಾ ಪ್ರಕರಣಗಳು ದೃಢಪಡುತ್ತಿದ್ದು, ನಿತ್ಯ 200ರ ಆಸುಪಾಸಿನಲ್ಲಿ ಜನರು ಸೋಂಕಿಗೆ ಬಲಿಯಾಗುತ್ತಿದ್ದಾರೆ.