Asianet Suvarna News Asianet Suvarna News

ಲೋಕ ಸಮರ ಫಲಿತಾಂಶ ಎಫೆಕ್ಟ್; ಮಹಾರಾಷ್ಟ್ರ ಬಿಜೆಪಿ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಈಗ ಬಂದಿರುವ ಫಲಿತಾಂಶದ ಹೊಣೆಯನ್ನು ನಾನೇ ತೆಗೆದುಕೊಳ್ಳುತ್ತೇನೆ. ಪಕ್ಷವನ್ನು ಮುನ್ನಡೆಸಬೇಕಾಗಿರುವದರಿಂದ ಸರ್ಕಾರದ ಜವಾಬ್ದಾರಿಯಿಂದ ನನ್ನನ್ನು ಮುಕ್ತಗೊಳಿಸುವಂತೆ ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡುತ್ತಿದ್ದೇನೆ

Maharashtra DCM Devendra Fadnavis offers to resign mrq
Author
First Published Jun 5, 2024, 3:41 PM IST | Last Updated Jun 5, 2024, 3:41 PM IST

ಮುಂಬೈ: ಮಹಾರಾಷ್ಟ್ರದಲ್ಲಿ (Maharashtra Politics) ಬಿಜೆಪಿ ಕಳಪೆ ಪ್ರದರ್ಶನ ತೋರಿದ ಹಿನ್ನೆಲೆ ಡಿಸಿಎಂ ಸ್ಥಾನದಿಂದ ನನ್ನನ್ನು ಮುಕ್ತಗೊಳಿಸಿ ಎಂದು ದೇವೇಂದ್ರ ಫಡ್ನವೀಸ್ (DCM Devendra Fadnvis) ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಂದ್ರ ಫಡ್ನವೀಸ್, ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ ಕಡಿಮೆ ಸ್ಥಾನ ಬಂದಿವೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಚುನಾವಣೆಯ ಜವಾಬ್ದಾರಿ ನನ್ನ ಮೇಲಿತ್ತು. ಹಾಗಾಗಿ ಸೋಲಿನಮ ಹೊಣೆಯನ್ನು ಸಹ ನಾನೇ ತೆಗೆದುಕೊಳ್ಳುತ್ತೇನೆ. ಎಲ್ಲಿ ನಮ್ಮಿಂದ ತಪ್ಪಾಯ್ತು ಅನ್ನೋದನ್ನು ತಿಳಿದುಕೊಂಡು ಅದನ್ನು ಸರಿಪಡಿಸುವ ಕೆಲಸವನ್ನು ಸಹ ಮಾಡುತ್ತೇನೆ. 

ನಾನು ಓಡಿ ಹೋಗುವಂತಹ ನಾಯಕನಲ್ಲ. ಮತ್ತೆ ಜನರ ಮಧ್ಯೆ ಹೋಗುತ್ತೇನೆ. ಹೊಸ ರಾಜಕೀಯ ಯೋಜನೆಗಳೊಂದಿಗೆ ಮಹಾರಾಷ್ಟ್ರದಲ್ಲಿ ಪಕ್ಷದ ಪರವಾಗಿ ಕೆಲಸ ಮಾಡುತ್ತೇನೆ. ಈ ಮೂಲಕ ಜನರ ವಿಶ್ವಾಸಗಳಿಸುವ ಕೆಲಸವನ್ನು ಒಗ್ಗಟ್ಟಿನಿಂದ ಮಾಡುತ್ತೇವೆ. ಮಹಾರಾಷ್ಟ್ರದಲ್ಲಿ ನಾನೇ ಬಿಜೆಪಿಯನ್ನ ಮುನ್ನಡೆಸುತ್ತಿದ್ದೆ. ಈಗ ಬಂದಿರುವ ಫಲಿತಾಂಶದ ಹೊಣೆಯನ್ನು ನಾನೇ ತೆಗೆದುಕೊಳ್ಳುತ್ತೇನೆ. ಪಕ್ಷವನ್ನು ಮುನ್ನಡೆಸಬೇಕಾಗಿರುವದರಿಂದ ಸರ್ಕಾರದ ಜವಾಬ್ದಾರಿಯಿಂದ ನನ್ನನ್ನು ಮುಕ್ತಗೊಳಿಸುವಂತೆ ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದರು. ಮುಂಬರುವ ಚುನಾವಣೆಯಲ್ಲಿ ನಾನು ಪಕ್ಷವನ್ನು ಮುನ್ನಡೆಸುವ ಕೆಲಸ ಮಾಡುತ್ತೇನೆ ಎಂದು ದೇವೇಂದ್ರ ಫಡ್ನವೀಸ್ ಹೇಳಿಕೊಂಡಿದ್ದಾರೆ.

ಲೋಕಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ ನಟ ಅನುಪಮ್​ ಖೇರ್​ ನಿಗೂಢ ಪೋಸ್ಟ್​!

ಮಹಾರಾಷ್ಟ್ರ ಚುನಾವಣಾ ಫಲಿತಾಂಶ 

ಮಹಾರಾಷ್ಟ್ರದ 48 ಸ್ಥಾನಗಳಲ್ಲಿ ಕಾಂಗ್ರೆಸ್ 13ರಲ್ಲಿ ಗೆಲುವು ದಾಖಲಿಸಿದೆ. ಉದ್ದವ್ ಠಾಕ್ರೆ ಬಣದ ಶಿವಸೇನಾ 9, ಶಿಂಧೆ ಬಣದ ಶಿವಸೇನಾ 9, ಶರದ್ ಪವಾರ್ ನೇತೃತ್ವದ ನ್ಯಾಷನಲ್ ಕಾಂಗ್ರೆಸ್ ಪಕ್ಷ 9, ಬಿಜೆಪಿ 9, ಎನ್‌ಸಿಪಿ ಮತ್ತು ಪಕ್ಷೇತರರು ತಲಾ ಒಂದು ಕ್ಷೇತ್ರದಲ್ಲಿ ಗೆಲುವು ದಾಖಲಿಸಿದೆ. 

Latest Videos
Follow Us:
Download App:
  • android
  • ios