Asianet Suvarna News Asianet Suvarna News

Covid cases ಭಾರತದಲ್ಲಿ ಕೋವಿಡ್ 4ನೇ ಅಲೆ ಭೀತಿ, ಒಂದೊಂದೆ ರಾಜ್ಯದಲ್ಲಿ ಕಠಿಣ ನಿರ್ಬಂಧ ಜಾರಿ!

  • ದೇಶದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚಳ
  • ಮಹಾರಾಷ್ಟ್ರದಲ್ಲಿ ಮಾಸ್ಕ್ ಕಡ್ಡಾಯ, ಹೊಸ ನಿಯಮ ಜಾರಿ
  • ಕೇಂದ್ರದಿಂದ 5 ರಾಜ್ಯಗಳಿಗೆ ಎಚ್ಚರಿಕೆ, ನಿಯಂತ್ರಣಕ್ಕೆ ಕಠಿಣ ಕ್ರಮ
Maharashtra Govt re implement covid 19 Guidelines Face Mask mandatory in Public venues and indore centers ckm
Author
Bengaluru, First Published Jun 4, 2022, 3:42 PM IST

ನವದೆಹಲಿ(ಜೂ.04): ದೇಶದಲ್ಲಿ ಕೋವಿಡ್ ಪ್ರಕರಣ ಸಂಖ್ಯ ಗಣನೀಯವಾಗಿ ಹೆಚ್ಚಳವಾಗಿದೆ. ಮೂರು ತಿಂಗಳ ಬಳಿಕ ಭಾರತದಲ್ಲಿ ಪ್ರತಿ ದಿನದ ಕೇಸ್ 4,000 ಗಡಿ ದಾಟಿದೆ. ಕರ್ನಾಟಕ, ಮಹಾರಾಷ್ಟ್ರ ಸೇರಿ 5 ರಾಜ್ಯಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇದೀಗ ಒಂದೊಂದೆ ರಾಜ್ಯದಲ್ಲಿ ಕಠಿಣ ನಿರ್ಬಂಧ ಜಾರಿಯಾಗಿದೆ. ಮಹಾರಾಷ್ಟ್ರದಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಯವಾಗಿದೆ.

ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಕಳೆದ ಕೊರೋನಾ ಅಲೆಗೆ ಕಾರಣವಾದಂತೆ ಈ ಬಾರಿಯೂ ಮಹಾರಾಷ್ಟ್ರ ಕೋವಿಡ್ ಹಾಟ್‌ಸ್ಫಾಟ್ ಆಗಿ ಪರಿಣಮಿಸಿದೆ. ಹೀಗಾಗಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳು, ರೈಲು, ಬಸ್, ಚಿತ್ರಮಂದಿರ, ಆಡಿಟೋರಿಯಂ, ಕಚೇರಿ, ಆಸ್ಪತ್ರೆ, ಶಾಲಾ-ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಈ ಕುರಿತು ಮಹಾರಾಷ್ಟ್ರ ಸರ್ಕಾರದ ಉಪ ಕಾರ್ಯದರ್ಶಿ ಪ್ರದೀಪ್ ವ್ಯಾಸ ಸುತ್ತೋಲೆ ಹೊರಡಿಸಿದ್ದಾರೆ.

ನಿಜವಾಗುತ್ತಾ ಐಐಟಿ ಕಾನ್ಪುರ ಭವಿಷ್ಯ?

ಮಹಾರಾಷ್ಟ್ರ ಆರೋಗ್ಯ ಸಚಿವಾಲಯ ಮಹತ್ವದ ಸೂಚನೆ ನೀಡಿದೆ. ಎಲ್ಲಾ ಕೇಂದ್ರಗಳಲ್ಲಿ ಕೊರೋನಾ ಪರೀಕ್ಷೆ ಹೆಚ್ಚಿಸಲು ಸೂಚಿಸಲಾಗಿದೆ. ಕೊರೋನಾ ಮೂಲದಲ್ಲೇ ಪತ್ತೆ ಮಾಡಿ ಸೂಕ್ತ ಚಿಕಿತ್ಸೆ, ಕ್ವಾರಂಟೈನ್ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಆರಂಭದಲ್ಲೇ ಕೋವಿಡ್ ಹರಡುವಿಕೆಯನ್ನು ತಡೆಯಲು ಮಹಾರಾಷ್ಟ್ರ ಮುಂದಾಗಿದೆ. ಈ ಮೂಲಕ 4ನೇ ಅಲೆ ಭೀತಿಯಿಂದ ಪಾರಾಗಲು ಮಹಾ ಸರ್ಕಾರ ಕ್ರಮ ಕೈಗೊಂಡಿದೆ.

ಮಹಾರಾಷ್ಟ್ರದಲ್ಲಿ ಪ್ರತಿ ದಿನ 1,000ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿದೆ. ಕಳೆದ ವಾರ ಓಮಿಕ್ರಾನ್ ವೇರಿಯೆಂಟ್ BA.4 ಮತ್ತು BA.5 ಕೇಸ್ ಕೂಡ ಪತ್ತೆಯಾಗಿತ್ತು. ಭಾರತದಲ್ಲಿ ಶುಕ್ರವಾರ 4 ಸಾವಿರಕ್ಕೂ ಹೆಚ್ಚು ಪ್ರಕರಣ ವರದಿಯಾಗಿದ್ದು, ಪಾಸಿಟಿವಿಟಿ ದರ ಶೇ.0.95ಕ್ಕೆ ಏರಿದೆ.

ಟೆಸ್ಟಿಂಗ್‌ ಹೆಚ್ಚಿಸಿ: ಕರ್ನಾಟಕ ಸೇರಿ 5 ರಾಜ್ಯಕ್ಕೆ ಕೇಂದ್ರ ಪತ್ರ
4ನೇ ಅಲೆ ಭೀತಿ ನಡುವೆಯೇ ಕರ್ನಾಟಕ ಸೇರಿದಂತೆ 5 ರಾಜ್ಯಗಳಲ್ಲಿ ಹೊಸ ಕೋವಿಡ್‌ ಕ್ಲಸ್ಟರ್‌ಗಳು ಉಗಮವಾಗಿ ಕೊರೋನಾ ಪ್ರಕರಣ ಮತ್ತು ಪಾಸಿಟಿವಿಟಿ ದರ ಹೆಚ್ಚುತ್ತಿರುವ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ. ಈ ರಾಜ್ಯಗಳಲ್ಲಿ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸೂಚಿಸಿದೆ.

ಮಾಸ್ಕ್ ಧರಿಸದೇ ಇದ್ದರೆ ವಿಮಾನದಿಂದ ಕೆಳಗಿಳಿಸಿ!

ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ ಹಾಗೂ ಮಹಾರಾಷ್ಟ್ರ ಸರ್ಕಾರಗಳಿಗೆ ಈ ಸಂಬಂಧ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ಶುಕ್ರವಾರ ಪತ್ರ ಬರೆದಿದ್ದಾರೆ. ಈ 5 ರಾಜ್ಯಗಳು ದೇಶದ ಒಟ್ಟಾರೆ ಕೋವಿಡ್‌ ಪ್ರಕರಣಗಳಲ್ಲಿ ಹೆಚ್ಚು ಪಾಲು ಹೊಂದಿವೆ. ಹೀಗಾಗಿ ಭೂಷಣ್‌ ಈ ರಾಜ್ಯಗಳಿಗೆ ಪತ್ರ ರವಾನಿಸಿದ್ದಾರೆ.

‘ನಿಮ್ಮ ರಾಜ್ಯಗಳಲ್ಲಿ ಕೋವಿಡ್‌ ನಿಗಾ ಕಾರ್ಯ ಚುರುಕುಗೊಳಿಸಬೇಕು. ಟೆಸ್ಟಿಂಗ್‌ ಹೆಚ್ಚಿಸಬೇಕು. ನಿಗದಿಪಡಿಸಿದ ಸ್ಯಾಂಪಲ್‌ಗಳ ಜೀನೋಮ್‌ ಸೀಕ್ವೆನ್ಸಿಂಗ್‌ ನಡೆಸಬೇಕು’ ಎಂದು ಭೂಷಣ್‌ ಸೂಚಿಸಿದ್ದಾರೆ.ಇದಲ್ಲದೆ, ‘ವಿಷಮಶೀತ ಜ್ವರ (ಐಎಲ್‌ಐ) ಹಾಗೂ ಉಸಿರಾಟದ ಸಮಸ್ಯೆ (ಸಾರಿ) ಪ್ರಕರಣಗಳ ಮೇಲೆ ನಿಗಾ ಇಡಬೇಕು. ಇದರಿಂದ ಆರಂಭದಲ್ಲೇ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬರುತ್ತದೆ’ ಎಂದು ಅವರು ಸಲಹೆ ನೀಡಿದ್ದಾರೆ.

ಕರ್ನಾಟಕದಲ್ಲಿ ಬೆಂಗಳೂರು ಕ್ಲಸ್ಟರ್‌:
ಕೇಂದ್ರ ಸರ್ಕಾರಕ್ಕೆ ರಾಜ್ಯಗಳು ಸೋಂಕು ಹೆಚ್ಚುತ್ತಿರುವ ಜಿಲ್ಲೆಗಳ ಮಾಹಿತಿ ನೀಡಿವೆ. ಇದರಲ್ಲಿ ಕೇರಳದ 11 ಜಿಲ್ಲೆಗಳು, ತಮಿಳುನಾಡಿನ 2 ಜಿಲ್ಲೆಗಳು, ಮಹಾರಾಷ್ಟ್ರದ 6 ಜಿಲ್ಲೆಗಳು, ತೆಲಂಗಾಣದ 1 ಜಿಲ್ಲೆ ಹಾಗೂ ಕರ್ನಾಟಕದ 1 ಜಿಲ್ಲೆ (ಬೆಂಗಳೂರು ನಗರ ಜಿಲ್ಲೆ) ಸೇರಿವೆ. ಈ ಜಿಲ್ಲೆಗಳಲ್ಲಿ ಕೋವಿಡ್‌ ಪ್ರಕರಣ ಹಾಗೂ ಪಾಸಿಟಿವಿಟಿ ದರ ಹೆಚ್ಚುತ್ತಿದ್ದು, ಹೊಸ ಕೋವಿಡ್‌ ಕ್ಲಸ್ಟರ್‌ಗಳಾಗಿ ಮಾರ್ಪಟ್ಟಿವೆ.

Follow Us:
Download App:
  • android
  • ios