ಲೋಕಸಭೆಯಲ್ಲಿ ಪ್ರಸ್ತಾಪವಾದ ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ
ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಶುಕ್ರವಾರವೂ ಲೋಕಸಭೆಯಲ್ಲಿ ಪ್ರಸ್ತಾಪವಾಯಿತು. ಮಹಾರಾಷ್ಟ್ರ ಸಂಸದ ಧರೀಯಶೀಲ್ ಮಾನೆ ಅವರು ಶೂನ್ಯ ಅವಧಿಯಲ್ಲಿ ಗಡಿ ವಿವಾದ ಪ್ರಸ್ತಾಪಿಸಿ, ದೇಶದಲ್ಲಿ ಸರ್ವರು ಒಂದೇ ಅಂತಾ ಭಾವಿಸಲಾಗಿದೆ. ಆದ್ರೆ, ಗಡಿ ಭಾಗಗಳಲ್ಲಿ ಶಾಂತಿ ಕದಡುವ ಸ್ಥಿತಿ ಉದ್ಭವವಾಗಿದೆ. ಗಡಿ ಭಾಗಗಳಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದರು.
ನವದೆಹಲಿ, (ಡಿ.9): ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಶುಕ್ರವಾರವೂ ಲೋಕಸಭೆಯಲ್ಲಿ ಪ್ರಸ್ತಾಪವಾಯಿತು. ಮಹಾರಾಷ್ಟ್ರ ಸಂಸದ ಧರೀಯಶೀಲ್ ಮಾನೆ ಅವರು ಶೂನ್ಯ ಅವಧಿಯಲ್ಲಿ ಗಡಿ ವಿವಾದ ಪ್ರಸ್ತಾಪಿಸಿ, ದೇಶದಲ್ಲಿ ಸರ್ವರು ಒಂದೇ ಅಂತಾ ಭಾವಿಸಲಾಗಿದೆ. ಆದ್ರೆ, ಗಡಿ ಭಾಗಗಳಲ್ಲಿ ಶಾಂತಿ ಕದಡುವ ಸ್ಥಿತಿ ಉದ್ಭವವಾಗಿದೆ. ಗಡಿ ಭಾಗಗಳಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದರು.
ಅಲ್ಲದೇ, ಕನ್ನಡ ಸಂಘಟನೆಗಳು ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡ್ತಿವೆ. ಮರಾಠಿಗರು ಆತಂಕದಿಂದ ಜೀವನ ನಡೆಸುವ ಸ್ಥಿತಿ ಈಗ ಉಂಟಾಗಿದೆ. ಕರ್ನಾಟಕದ ಮುಖ್ಯಮಂತ್ರಿಗಳು ಪ್ರಚೋದನಾಕಾರಿ ಹೇಳಿಕೆ ಕೊಡುತ್ತಾರೆ ಅಂಥ ಆರೋಪಿಸಿದರು.
Maharashtra Karnataka Border Row: ಬಸ್, ಬ್ಯಾಂಕಿಗೆ ಮಸಿ: ಮಹಾ ಪುಂಡಾಟಿಕೆ!
ಹಾಗಾಗಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು. ಆಗ ಮಾತ್ರ ಅಲ್ಲಿನ ಪರಿಸ್ಥಿತಿ ತಿಳಿಗೊಳಿಸಲು ಸಾಧ್ಯ. ಎರಡು ರಾಜ್ಯಗಳ ಸಿಎಂಗಳನ್ನು ಒಟ್ಟುಗೂಡಿಸಿ ಸಮಸ್ಯೆ ಬಗೆಹರಿಸಬೇಕು ಅಂಥ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸಂಸದ ಮಾನೆ ಮನವಿ ಮಾಡಿದರು.
Vijayapura: ರಾಜ್ಯದ ಬಸ್‌ಗೆ ಮಸಿ ಬಳಿದಿದ್ದಕ್ಕೆ ಕರವೇ ಆಕ್ರೋಶ
ಮಹಾ ಸಂಸದರಿಂದ ಶಾ ಭೇಟಿ: ಇದೇ ವೇಳೆ ಮಹಾರಾಷ್ಟ್ರ ವಿಕಾಸ ಅಘಾಡಿ ಸಂಸದರು (ಕಾಂಗ್ರೆಸ್, ಎನ್ ಸಿ ಪಿ ಹಾಗು ಠಾಕ್ರೆ ಬಣದ ಸಂಸದರು) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಸತ್ ನಲ್ಲಿ ಭೇಟಿಯಾಗಿ ಮಧ್ಯಸ್ಥಿಕೆ ವಹಿಸುವಂತೆ ಆಗ್ರಹಿಸಿದರು. ಎನ್ ಸಿ ಪಿ ಸಂಸದೆ ಸುಪ್ರಿಯಾ ಸುಳೆ ನೇತೃತ್ವದ ನಿಯೋಗ ಭೇಟಿಯಾಗಿತ್ತು.