ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಪುತ್ರ ಹಾಗೂ ರಾಜ್ಯ ಪ್ರವಾಸ ಮತ್ತು ಪರಿಸರ ಖಾತೆ ಸಚಿವ ಆದಿತ್ಯ ಠಾಕ್ರೆ| ಮಹಾ ಸಿಎಂ ಪುತ್ರ ಆದಿತ್ಯ ಠಾಕ್ರೆಗೆ ಕೊರೋನಾ!

ಮುಂಬೈ(ಮಾ.21): ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಪುತ್ರ ಹಾಗೂ ರಾಜ್ಯ ಪ್ರವಾಸ ಮತ್ತು ಪರಿಸರ ಖಾತೆ ಸಚಿವ ಆದಿತ್ಯ ಠಾಕ್ರೆ ಅವರಿಗೆ ಶನಿವಾರ ಕೊರೋನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಸ್ವತಃ ಟ್ವೀಟ್‌ ಮಾಡಿ ಮಾಹಿತಿ ನೀಡಿರುವ ಆದಿತ್ಯ ಠಾಕ್ರೆ, ‘ನನಗೆ ಕೊರೋನಾ ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಮನವಿ ಮಾಡಿದ್ದಾರೆ.

ಕಂಡಕಂಡವರಿಗೆ ಕೊರೋನಾ ಟೆಸ್ಟ್‌:

ಮಹಾರಾಷ್ಟ್ರದಲ್ಲಿ ಕೊರೋನಾ ಆತಂಕ ತೀವ್ರವಾಗಿರುವ ಹಿನ್ನೆಲೆಯಲ್ಲಿ ಜನದಟ್ಟಣೆಯ ಪ್ರದೇಶಗಳಲ್ಲಿ ಜನರ ಅನುಮತಿ ಪಡೆಯದೇ ರಾರ‍ಯಪಿಡ್‌ ಆ್ಯಂಟಿಜೆನ್‌ ಪರೀಕ್ಷೆ ನಡೆಸಲು ಬೃಹನ್ಮುಂಬೈ ಪಾಲಿಕೆ ತೀರ್ಮಾನಿಸಿದೆ.

ಮಾಲ್‌ಗಳು, ಬಸ್‌ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳಂತಹ ಪ್ರದೇಶಗಳಲ್ಲಿ ಪರೀಕ್ಷೆ ಕೈಗೊಳ್ಳಲಾಗುತ್ತದೆ. ಪರೀಕ್ಷೆಗೆ ಒಳಪಡಲು ನಿರಾಕರಿಸಿದವರ ವಿರುದ್ಧ ದೂರು ದಾಖಲಿಸಲಾಗುತ್ತದೆ ಎಂದು ಬೃಹನ್ಮುಂಬೈ ಪಾಲಿಕೆ ಆದೇಶಿಸಿದೆ.