Car fire after tire burst: ಮಹಾರಾಷ್ಟ್ರದ ಜಲಗಾಂವ್-ಛತ್ರಪತಿ ಸಂಭಾಜಿ ನಗರ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನಲ್ಲಿ ಮಹಿಳೆಯೊಬ್ಬರು ಸಜೀವ ದಹನಗೊಂಡ ಘಟನೆ ನಡೆದಿದೆ.
ಕಾರು ಸ್ಫೋಟಗೊಂಡ ಬಳಿಕ ಬೆಂಕಿ: ಮಹಿಳೆ ಸಜೀವ ದಹನ
ಮಹಾರಾಷ್ಟ್ರದಲ್ಲಿ ಭೀಕರ ಘಟನೆಯೊಂದು ನಡೆದಿದೆ. ರಸ್ತೆಯಲ್ಲಿ ಕಾರೊಂದು ಚಲಿಸುತ್ತಿದ್ದಾಗಲೇ ಟೈರ್ ಸ್ಫೋಟಗೊಂಡು ಕಾರಿಗೆ ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ಮಹಿಳೆ ಸಜೀವ ಸಹನಗೊಂಡಿದ್ದಾರೆ. ಸೋಮವಾರ ಜಲಗಾಂವ್‌ನಿಂದ ಛತ್ರಪತಿ ಸಂಭಾಜಿ ನಗರಕ್ಕೆ ಹೋಗುವ ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಮಾರ್ಗಮಧ್ಯೆ ಕಾರಿನ ಟೈರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿತು. ಈ ದುರಂತದಲ್ಲಿ ಕಾರಿನಲ್ಲಿದ್ದ ಮಹಿಳಾ ಪ್ರಯಾಣಿಕರೊಬ್ಬರು ಸಜೀವ ದಹನಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
ಟೈರ್ ಸ್ಫೋಟಗೊಂಉ ಕಾರಿಗೆ ಬೆಂಕಿ ಹೊತ್ತಿಕೊಂಡ ತಕ್ಷಣ, ಹತ್ತಿರದಲ್ಲಿದ್ದ ಜನರು ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ. ಕಾರಿನ ಒಳಗಿದ್ದವರ ರಕ್ಷಣೆಗಾಗಿ ಕಾರಿನ ಕಿಟಕಿಗಳನ್ನು ಒಡೆದು ಒಳಗೆ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಆದರೆ ದುರದೃಷ್ಟವಶಾತ್, ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿಯೇ ಬೆಂಕಿ ಇದ್ದಕ್ಕಿದ್ದಂತೆ ಹೆಚ್ಚಾಗಿದೆ.. ಆ ಸಮಯದಲ್ಲಿ, ಕಾರಿನಲ್ಲಿದ್ದ ಮಹಿಳಾ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ.. ಹೆದ್ದಾರಿಯ ಜಂಕ್ಷನ್ ಬಳಿ ಕಾರು ಹೊತ್ತಿ ಉರಿಯುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾರಿನ ಸುತ್ತಲೂ ಅನೇಕರ ಜನರು ಇರುವುದನ್ನು ವೀಡಿಯೋದಲ್ಲಿ ಕಾಣಬಹುದು.
ಮಹಾರಾಷ್ಟ್ರದ ಜಲಗಾಂವ್-ಛತ್ರಪತಿ ಸಂಭಾಜಿ ನಗರ ಹೆದ್ದಾರಿಯಲ್ಲಿ ದುರಂತ
ಈ ಕಾರಿಗೆ ಬೆಂಕಿ ಬಿದ್ದ ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತಲುಪಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಅಷ್ಟರಲ್ಲಿ ಒಳಗಿದ್ದ ಮಹಿಳೆ ಸಜೀವ ದಹನಗೊಂಡಿದ್ದಾರೆ. ಕಾರಿನಲ್ಲಿ ಬೇರೆ ಪ್ರಯಾಣಿಕರು ಇದ್ದರೆ ಇಲ್ಲವೇ ಎಂಬ ಬಗ್ಗೆ ಇನ್ನೂ ಯಾವುದೇ ಮಾಹಿತಿ ಸಿಕ್ಕಿಲ್ಲ. ಅಪಘಾತದ ಕಾರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಹಾರಾಷ್ಟ್ರದ ಜಲಗಾಂವ್-ಛತ್ರಪತಿ ಸಂಭಾಜಿ ನಗರ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ.
ಇದನ್ನೂ ಓದಿ: ವೇಗವಾಗಿ ಸಾಗುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದ ಹದ್ದು: ಗಾಜು ಒಡೆದು ಲೋಕೋ ಪೈಲಟ್‌ಗೆ ಗಾಯ
ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಿದ ಗುಂಪು: ವೀಡಿಯೋ ವೈರಲ್
