ಕೊರೋನಾ ನಿಯಂತ್ರಣಕ್ಕೆ ವೀಕೆಂಡ್ ಲಾಕ್‌ಡೌನ್ ಘೋಷಿಸಿದ ಮಹಾರಾಷ್ಟ್ರ ಸಿಎಂ!
ದೇಶದಲ್ಲಿ 93,249 ಹೊಸ ಕೊರೋನಾ ಪ್ರಕರಣಗಳು ದಾಖಲಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ ನಡೆಸಿದ್ದಾರೆ. ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಳ್ಳಲು ಆಯಾ ರಾಜ್ಯ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ. ಈ ಸಬೆ ಬಳಿಕ ಇದೀಗ ಮಹಾರಾಷ್ಟ್ರ ಸರ್ಕಾರ ವೀಕೆಂಡ್ ಲಾಕ್‌ಡೌನ್ ಘೋಷಿಸಿದೆ.
ಮುಂಬೈಎ.04): ಕಳೆದ ಸೆಪ್ಟೆಂಬರ್ ತಿಂಗಳಿನಿಂದ ಇಳಿಕೆಯಾಗತೊಡಗಿದ್ದ ಕೊರೋನಾ ವೈರಸ್ ಇದೀಗ ಭಾರತದಲ್ಲಿ ಮತ್ತೆ ಅಟ್ಟಹಾಸ ಮುಂದುವರಿಸಿದೆ. ಒಂದೇ ದಿನ 90 ಸಾವಿರ ಕೇಸ್ ಪತ್ತೆಯಾಗೋ ಮೂಲಕ ಮತ್ತೆ ಲಾಕ್‌ಡೌನ್ ಆತಂಕವನ್ನು ತಂದಿಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ ಬಳಿಕ, ಅತೀ ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವ ಮಹಾರಾಷ್ಟ್ರ ಸಭೆ ನಡೆಸಿತ್ತು. ಈ ವೇಳೆ ವೀಕೆಂಡ್ ಲಾಕ್‌ಡೌನ್‌ಗೆ ನಿರ್ಧರಿಸಲಾಗಿದೆ.
ಒಂದೇ ದಿನ 93 ಸಾವಿರ ಕೇಸ್..! ಕೊರೋನಾ ಸಂಬಂಧ ಮೋದಿ ಮಹತ್ವದ ಸಭೆ
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಉನ್ನತ ಮಟ್ಟದ ಸಭೆ ನಡೆಸಿ ಮಹತ್ವದ ನಿರ್ಧಾರ ಕೈಗೊಂಡಿದೆ. ತಜ್ಞರು ಮತ್ತೆ ಲಾಕ್‌ಡೌನ್ ಘೋಷಿಸಲು ಸೂಚನೆ ನೀಡಿತ್ತು. ಆದರೆ ಈ ಸಲಹೆ ನಿರಾಕರಿಸಿದ ಉದ್ಧವ್ ಠಾಕ್ರೆ, ವಾರಾಂತ್ಯ ಸಂಪೂರ್ಣ ಲಾಕ್‌ಡೌನ್ ನಿರ್ಧಾರ ತೆಗೆದುಕೊಂಡಿದೆ.
ಹೊಸ ಮಾರ್ಗಸೂಚಿಯಿಂದ ಪ್ರತಿ ವಾರ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮಾವರ ಬೆಳಗ್ಗೆ 7 ಗಂಟೆ ವರೆಗೆ ಸಂಪೂರ್ಣ ಲಾಕ್‌ಡೌನ್ ಹೇರಲಾಗುತ್ತಿದೆ. ವಾರಾಂತ್ಯದಲ್ಲಿ ಮಹಾರಾಷ್ಟ್ರ ಸಂಪೂರ್ಣ ಸ್ಥಬ್ಧವಾಗಲಿದೆ. ಇದರ ಜೊತೆಗೆ ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಇದರ ಜೊತೆಗೆ ಪ್ರತಿ ದಿನ ನೈಟ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 8 ಗಂಟೆಯಿಂದ ಬೆಳಗ್ಗೆ 7ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.
ಫೋನ್‌ನಲ್ಲಿ ಮಾತನಾಡುತ್ತಾ ಒಂದೇ ಬಾರಿಗೆ 2 ಡೋಸ್ ಲಸಿಕೆ ನೀಡಿದ ನರ್ಸ್!.
ಸಭೆ ಸಮಾರಂಭ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲಾಗಿದೆ. ಮಾಸ್ಕ್, ಸಾಮಾಜಿಕ ಅಂತರ ಮಾರ್ಗಸೂಚಿ ಉಲ್ಲಂಘಿಸಿದರೆ ದುಬಾರಿ ದಂಡ ಹಾಕಲಾಗುತ್ತಿದೆ. ಮಿತಿ ಮೀರಿದ ಕೊರೋನಾ ಕಾರಣ ಈ ನಿರ್ಧಾರಗಳು ಅನಿವಾರ್ಯವಾಗಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.