Asianet Suvarna News Asianet Suvarna News

ಕೊರೋನಾ ಸಾವಿನ ಪ್ರಮಾಣ ಪತ್ರದಲ್ಲಿ ಮೋದಿ ಫೋಟೋ ಯಾಕಿಲ್ಲ?ವ್ಯಂಗ್ಯವಾಡಿದ ಮಹಾ ಸಚಿವ!

ಕೊರೋನಾ ವೈರಸ್ ನಿರ್ವಹಣೆ, ನಿಯಂತ್ರಣ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಸರ್ಕಾರವನ್ನು ವಿರೋಧ ಪಕ್ಷಗಳು ಟೀಕಿಸುತ್ತಿದೆ. ಇದೀಗ ಮಹಾರಾಷ್ಟ್ರ ಸಚಿವ ಮೋದಿಯನ್ನು ವ್ಯಂಗ್ಯವಾಡಿದ್ದಾರೆ. ಇಷ್ಟೇ ಅಲ್ಲ ಕೊರೋನಾ ಸಾವಿನ ಹೊಣೆಯನ್ನು ಮೋದಿ ಹೊರಬೇಕು ಎಂದಿದ್ದಾರೆ. ಮಹಾರಾಷ್ಟ್ರ ಸಚಿವನ ಟೀಕೆ ಹಾಗೂ ಆರೋಪಗಳ ವಿವರ ಇಲ್ಲಿವೆ.

Maharastra Minister demand COVID death certificates should have Modi photo like vaccine ckm
Author
Bengaluru, First Published Apr 17, 2021, 7:57 PM IST

ಮುಂಬೈ(ಏ.17): ಕೊರೋನಾ ವೈರಸ್ ಪ್ರಕರಣ ಹೆಚ್ಚಾಗಲು ಹಾಗೂ ಸಾವಿನ ಸಂಖ್ಯೆಯಲ್ಲಿ ಏರಿಕೆಗೆ ಅಸಮರ್ಪಕ ನಿರ್ವಹಣೆ ಕಾರಣ ಎಂದು ಮಹಾರಾಷ್ಟ್ರ ಸಚಿವ , ಎನ್‌ಸಿಪಿ ನಾಯಕ ನವಾಬ್ ಮಲಿಕ್ ಆರೋಪಿಸಿದ್ದಾರೆ. ಇದೇ ವೇಳೆ ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಫೋಟೋ ಹಾಕಿ ಕ್ರೆಡಿಟ್ ಪಡೆಯುವ ಪ್ರಧಾನಿ, ಕೊರೋನಾದಿಂದ ಸಾವನ್ನಪ್ಪಿದವರ ಪ್ರಮಾಣ ಪತ್ರದಲ್ಲಿ ಮೋದಿ ಫೋಟೋ ಯಾಕಿಲ್ಲ ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಮನವಿ ಮೇರೆಗೆ ಕುಂಭಮೇಳಕ್ಕೆ ತೆರೆ!

ದೇಶದಲ್ಲಿ ಕೋಟಿ ಕೋಟಿ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಕ್ರೆಡಿಟ್ ತೆಗೆದುಕೊಳ್ಳುವ ಪ್ರಧಾನಿ ನರೇಂದ್ರ ಮೋದಿ, ಕೊರೋನಾ ಸಾವಿನ ವಿಚಾರದಲ್ಲಿ ಈ ಸಾಹಸ ಯಾಕೆ ಮಾಡುತ್ತಿಲ್ಲ ಎಂದು ನವಾಬ್ ಮಲಿಕ್ ಆರೋಪಿಸಿದ್ದಾರೆ.  ಭಾರತದ ಕೊರೋನಾ ಪರಿಸ್ಥಿತಿ ನಿಯಂತ್ರಿಸಲು ಮೋದಿ ಸರ್ಕಾರ ಯಾವ ಪ್ರಯತ್ನಗಳನ್ನೂ ಮಾಡುತ್ತಿಲ್ಲ ಎಂದು ನವಾಬ್ ಮಲಿಕ್ ಹೇಳಿದ್ದಾರೆ.

ಹೆಚ್ಚಾಯ್ತು ಕೊರೋನಾ ಆತಂಕ; ರಾತ್ರಿ 8 ಗಂಟೆಗೆ ಮಹತ್ವದ ಸಭೆ ಕರೆದ ಪ್ರಧಾನಿ ಮೋದಿ!

ಕೊರೋನಾದಿಂದ ಸಾವನ್ನಪ್ಪುತ್ತಿರುವ ಅಂತ್ಯ ಸಂಸ್ಕಾರ ನಡೆಸಲು ಸಾಧ್ಯವಾಗುತ್ತಿಲ್ಲ. ಶವಗಾರ, ಆ್ಯಂಬುಲೆನ್ಸ್, ಆಸ್ಪತ್ರೆಗಳಲ್ಲಿ ಶವಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅಂತ್ಯಸಂಸ್ಕಾರ ಕಾಯುತ್ತಿರುವ ಶವಗಳ ದೃಶ್ಯಗಳು ಮನಕಲುಕುತ್ತಿದೆ. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಪರಿಹಾಸ ಸೂಚಿಸಿಲ್ಲ ಎಂದು ನವಾಬ್ ಮಲಿಕ್ ಆರೋಪಿಸಿದ್ದಾರೆ.

ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 2.34 ಲಕ್ಷ  ಹೊಸ ಕೊರೋನಾ ಪ್ರಕರಣ ದಾಖಲಾಗಿದೆ. 1,300 ಮಂದಿ ಕೊರೋನಾಗೆ ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ ಇದೀಗ  1,75,649 ಕ್ಕೇ ಏರಿಕೆಯಾಗಿದೆ.

Follow Us:
Download App:
  • android
  • ios