ಭಾರತದಲ್ಲಿ ಮತ್ತೆ ಕೋವಿಡ್ ಪ್ರಕರಣ ಸಂಖ್ಯೆ ಹೆಚ್ಚಳ ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಉಪತಳಿ ಪತ್ತೆ ಒಟ್ಟು 7 ಪ್ರಕರಣ ಪತ್ತೆ,ಹೈಅಲರ್ಟ್ ಸೂಚನೆ  

ಪುಣೆ(ಮೇ.28): ಭಾರತದ ಕಳೆದೆರಡು ವಾರದಿಂದ ಕೋವಿಡ್ 19 ಪ್ರಕರಣಗಳು ಹೆಚ್ಚಾಗುತ್ತಿದೆ. ಇದೀಗ ಮಹಾರಾಷ್ಟ್ರದಲ್ಲಿ ಮೊದಲ ಓಮಿಕ್ರಾನ್ ಉಪತಳಿ BA.4 ಹಾಗೂ BA.5 ಪತ್ತೆಯಾಗಿದೆ. ಪುಣೆಯಲ್ಲಿ ಪತ್ತೆಯಾದ 7 ಪ್ರಕರಣಗಳಲ್ಲಿ ಮೂರು ಪ್ರಕರಣ BA.4 ಹಾಗೂ ಇನ್ನುಳಿದ 4 ಪ್ರಕರಣ BA.5 ಉಪತಳಿಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಹಾರಾಷ್ಟ್ರ ರಾಜ್ಯ ಆರೋಗ್ಯ ಇಲಾಖೆ ಓಮಿಕ್ರಾನ್ ಉಪತಳಿ ಪತ್ತೆಯನ್ನು ಖಚಿತಪಡಿಸಿದೆ. ಒಂದೇ ಬಾರಿಗೆ ಒಟ್ಟು 7 ಪ್ರಕರಣಗಳು ಪತ್ತೆಯಾಗಿರುವುದು ಮಹಾರಾಷ್ಟ್ರದ ಆತಂಕ ಹೆಚ್ಚಿಸಿದೆ. ಪುಣೆಯಲ್ಲಿ ನಡೆಸಿದ ಜೆನೋಮ್ ಸೀಕ್ವೆನ್ಸ್ ಪರೀಕ್ಷೆಯಲ್ಲಿ ಓಮಿಕ್ರಾನ್ ಉಪತಳಿ ಪತ್ತೆಯಾಗಿದೆ. ಇದೀಗ ಮುಂಬೈನಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಜಿನೋಮ್ ಸೀಕ್ವೆನ್ಸ್ ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ.

Covid Crisis: ಬೆಂಗ್ಳೂರಲ್ಲಿ ಕೊರೋನಾ ಸಂಖ್ಯೆಯಲ್ಲಿ ಭಾರೀ ಏರಿಕೆ: ಹೆಚ್ಚಿದ ಆತಂಕ

ದೇಶದಲ್ಲಿ ಮೊದಲ BA.4 ಉಪತಳಿ ಹೈದರಾಬಾದ್‌ನಲ್ಲಿ ಪತ್ತೆಯಾಗಿತ್ತು. ಬಳಿಕ ತೆಲಂಗಾಣ, ತಮಿಳುನಾಡಿನಲ್ಲೂ ಉಪತಳಿ ಪತ್ತೆಯಾಗಿತ್ತು. ಇದೀಗ ಮತ್ತೆ ಓಮಿಕ್ರಾನ್ ಉಪತಳಿ ಹಾವಳಿ ಹೆಚ್ಚಾಗುತ್ತಿದೆ. BA.4 ಹಾಗೂ BA.5 ಅತ್ಯಂತ ವೇಗವಾಗಿ ಹರಡಬಲ್ಲ ಉಪತಳಿಯಾಗಿದೆ. 

2685 ಹೊಸ ಕೇಸು, 33 ಸಾವು: ಸಕ್ರಿಯ ಕೇಸು 16308ಕ್ಕೆ ಏರಿಕೆ
ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು, ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಒಟ್ಟು 2,685 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆಯಲ್ಲಿ 33 ಸೋಂಕಿತರು ಸಾವಿಗೀಡಾಗಿದ್ದಾರೆ. ಆದರೆ ಕೇವಲ 2100 ಸೋಂಕಿತರು ಗುಣವಾದ ಕಾರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯು 16,308ಕ್ಕೆ ಏರಿಕೆಯಾಗಿದೆ. ದೈನಂದಿನ ಪಾಸಿಟಿವಿಟಿ ದರವು ಶೇ. 0.60ರಷ್ಟಿದ್ದು, ವಾರದ ಪಾಸಿಟಿವಿಟಿ ದರವು ಶೇ. 0.54ರಷ್ಟಿದೆ. ಕೋವಿಡ್‌ ಚೇತರಿಕೆ ದರವು ಶೇ. 98.75ರಷ್ಟಿದೆ. ದೇಶದಲ್ಲಿ ಈವರೆಗೆ ಒಟ್ಟು 193.13 ಕೋಟಿ ಡೋಸು ಕೋವಿಡ್‌ ಲಸಿಕೆಯನ್ನು ವಿತರಿಸಲಾಗಿದೆ.

ಕೋವಿಡ್ ಲಸಿಕೆ ಸರ್ಟಿಫಿಕೇಟ್‌ನಿಂದ ಬಯಲಾಯ್ತು 2ನೇ ಹೆಂಡತಿ ರಹಸ್ಯ!

142 ಮಂದಿಗೆ ಸೋಕು, 166 ಮಂದಿ ಚೇತರಿಕೆ
ಬೆಂಗಳೂರು ನಗರದಲ್ಲಿ ಗುರುವಾರ 142 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.1.14ಕ್ಕೆ ಹೆಚ್ಚಾಗಿದೆ. 166 ಮಂದಿ ಚೇತರಿಸಿಕೊಂಡಿದ್ದಾರೆ. ಕೋವಿಡ್‌ ಸಾವು ದಾಖಲಾಗಿಲ್ಲ. ಸದ್ಯ ನಗರದಲ್ಲಿ ಒಟ್ಟು 1,706 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ ಇಬ್ಬರು ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆ ಆರೈಕೆಯಲ್ಲಿದ್ದಾರೆ.

13,197 ಮಂದಿ ಕೋವಿಡ್‌ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ. 2338 ಮಂದಿ ಮೊದಲ ಡೋಸ್‌, 7011 ಮಂದಿ ಎರಡನೇ ಡೋಸ್‌ ಮತ್ತು 3,848 ಮಂದಿ ಮೂರನೇ ಡೋಸ್‌ ಲಸಿಕೆ ಪಡೆದಿದ್ದಾರೆ.​​​ ಒಟ್ಟು 13,751 ಮಂದಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 10,913 ಆರ್‌ಟಿಪಿಸಿಆರ್‌ ಹಾಗೂ 2,838 ರಾರ‍ಯಪಿಡ್‌ ಆ್ಯಂಟಿಜನ್‌ ಪರೀಕ್ಷೆ ನಡೆಸಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.