ಮಧ್ಯಪ್ರದೇಶ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, 11 ಮಂದಿ ಬಲಿ 40 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
ಮಧ್ಯಪ್ರದೇಶದ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟವಾಗಿದ್ದು, ಅವಘಡದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಸುಮಾರು 40 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಮಧ್ಯಪ್ರದೇಶ (ಫೆ.6): ಮಧ್ಯಪ್ರದೇಶದ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟವಾಗಿದ್ದು, ಅರಘಡದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಸುಮಾರು 40 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿರುವ ಅಕ್ರಮ ಪಟಾಕಿ ಕಾರ್ಖಾನೆ ಇದಾಗಿದ್ದು, ಭಾರಿ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಸಾವು ನೋವು ಸಂಭವಿಸಿದೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗಂಡನೇ ಮಾಡಿಸಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣ, ತಲೆಮರೆಸಿಕೊಂಡ ಆರೋಪಿ 3 ವರ್ಷಗಳ ಬಳಿಕ ಬಂಧನ
ಹರ್ದಾ ಜಿಲ್ಲೆಯ ಬೈರಾಗರ್ ಪ್ರದೇಶದಲ್ಲಿ ನಡೆದ ಈ ದುರಂತಕ್ಕೆ ಬೆಂಕಿಯಲ್ಲಿ ಸುಮಾರು 60 ಮನೆಗಳು ಸುಟ್ಟುಹೋಗಿವೆ ಮತ್ತು ಹಲವು ಪ್ರಯಾಣಿಕರು ಸ್ಫೋಟದ ಪ್ರಭಾವಕ್ಕೆ ಒಳಗಾದರು ಎಂದು ತಿಳಿದುಬಂದಿದೆ. ಘಟನೆ ನಡೆದ ಬಳಿಕ 100ಕ್ಕೂ ಹೆಚ್ಚು ಮನೆಗಳನ್ನು ತೆರವು ಮಾಡಲಾಗಿದೆ. ಸ್ಫೋಟದ ತೀವ್ರತೆಗೆ ಹೆಚ್ಚಿನ ಸಂಖ್ಯೆಯ ದ್ವಿಚಕ್ರ ವಾಹನಗಳು ಸಹ ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಅಗ್ನಿ ಶಾಮಕ ದಳ, 50 ಕ್ಕೂ ಹೆಚ್ಚು ಆಂಬ್ಯುಲೆನ್ಸ್ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಮಾಹಿತಿ ನೀಡಿದ್ದು, ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.
ಸುಮಾರು 400 ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ನಡೆಯುತ್ತಿದೆ. ಸ್ಥಳೀಯರ ಮಾಹಿತಿ ಪ್ರಕಾರ ಕಾರ್ಖಾನೆಯಲ್ಲಿ 100 ಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಾರೆ ಎಂದು ತಿಳಿದುಬಂದಿದೆ. ಗಾಯಳುಗಳಿಗೆ ಉಚಿತ ಚಿಕಿತ್ಸೆಯ ಘೋಷಣೆ ಮಾಡಲಾಗಿದೆ.
ಬಾಗಿಲು ತೆರೆದು ಬೆತ್ತಲೆ ಸ್ನಾನ, ಉತ್ತರ ಕನ್ನಡದಲ್ಲಿ ವ್ಯಕ್ತಿ ವಿರುದ್ಧ ಬಿತ್ತು ಕೇಸ್
ಧಾರ್ಮಿಕ ಹಬ್ಬಗಳು ಮತ್ತು ಮದುವೆ ಸಮಾರಂಭಗಳಲ್ಲಿ ಬಳಸುವ ಪಟಾಕಿಗಳಿಗೆ ಭಾರತದಲ್ಲಿ ಭಾರಿ ಬೇಡಿಕೆಯಿದ್ದು. ಜನರು ಸರಿಯಾದ ಸುರಕ್ಷತಾ ಕ್ರಮಗಳಿಲ್ಲದೆ ತಾತ್ಕಾಲಿಕ ಕಾರ್ಖಾನೆಗಳಲ್ಲಿ ಕೆಲಸ ಮಾಡುವುದರಿಂದ ಪ್ರತಿ ವರ್ಷ ಇಂತಹ ಮಾರಣಾಂತಿಕ ಅಪಘಾತಗಳು ಸಂಭವಿಸುತ್ತಲೇ ಇದೆ.