ನವದೆಲಿ(ಮೇ.13): ದೇಶದ ಎಲ್ಲಾ ನಾಗರಿಕರಿಗೂ ಉಚಿತವಾಗಿ ಲಸಿಕೆ ನೀಡಬೇಕು ಮತ್ತು ಕೊರೋನಾ ವಿರುದ್ಧದ ಹೋರಾಟಕ್ಕೆ ತುರ್ತು ಹಣಕಾಸು ನೆರವಿನ ಅಗತ್ಯವಿರುವ ಹಿನ್ನಲೆಯಲ್ಲಿ 13 ಸಾವಿರ ಕೋಟಿ ರು. ವೆಚ್ಚದ ಸೆಂಟ್ರಲ್‌ ವಿಸ್ತಾ ಯೋಜನೆಯನ್ನು ಕೈಬಿಡಬೇಕು ಎಂದು 12 ವಿಪಕ್ಷಗಳ ಮುಖಂಡರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಂಟಿ ಪತ್ರವೊಂದನ್ನು ಬರೆದಿದ್ದಾರೆ.

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಎನ್‌ಸಿಪಿ ಮುಖಂಡ ಶರದ್‌ ಪವಾರ್‌ ಸೇರಿದಂತೆ ಪ್ರಮುಖ ಮುಖಂಡರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ. ಮಹಾರಾಷ್ಟ್ರ, ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ಈ ಬೇಡಿಕೆ ಇಟ್ಟಿದ್ದಾರೆ.

"

ಇದೇ ವೇಳೆ ಬಡವರಿಗೆ ಉಚಿತವಾಗಿ ಆಹಾಧಾನ್ಯಗಳನ್ನು ಒದಗಿಸಬೇಕು. ನಿರುದ್ಯೋಗಿಗಳಿಗೆ ತಿಂಗಳಿಗೆ 6000 ರು. ಭತ್ಯೆಯನ್ನು ನೀಡಬೇಕು. ನೂತನ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ಇದರಿಂದ ರೈತರನ್ನು ಲಾಕ್‌ಡೌನ್‌ನಿಂದ ಸಂಕಷ್ಟದಿಂದ ಪಾರು ಮಾಡಬಹುದು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona