2024ರ ಲೋಕಸಭೆ ಚುನಾವಣೆಯಲ್ಲಿ ಎಲ್ಲ ಪ್ರತಿಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಿ ಬಿಜೆಪಿಯನ್ನು ಸೋಲಿಸಬೇಕೆಂಬ ಪ್ರಯತ್ನಗಳು ಆರಂಭವಾಗಿರುವ ಬೆನ್ನಲ್ಲೇ ರಾಹುಲ್ ಗಾಂಧಿಯವರನ್ನು ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ ಎಂದು ಕಾಂಗ್ರೆಸ್ ಸಂಸದ ಮಾಣಿಕ್ಯಂ ಟ್ಯಾಗೋರ್ ಆಗ್ರಹಿಸಿದ್ದಾರೆ.
ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಎಲ್ಲ ಪ್ರತಿಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಿ ಬಿಜೆಪಿಯನ್ನು ಸೋಲಿಸಬೇಕೆಂಬ ಪ್ರಯತ್ನಗಳು ಆರಂಭವಾಗಿರುವ ಬೆನ್ನಲ್ಲೇ ರಾಹುಲ್ ಗಾಂಧಿಯವರನ್ನು ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ ಎಂದು ಕಾಂಗ್ರೆಸ್ ಸಂಸದ ಮಾಣಿಕ್ಯಂ ಟ್ಯಾಗೋರ್ ಆಗ್ರಹಿಸಿದ್ದಾರೆ.
ಪ್ರಧಾನಿ ಹುದ್ದೆಗೆ ರಾಹುಲ್ ಗಾಂಧಿಗೆ ಶೇ.27, ನರೇಂದ್ರ ಮೋದಿಗೆ ಶೇ.43ರಷ್ಟು ಜನರು ಬೆಂಬಲ ಸೂಚಿಸಿರುವ ಮಾಧ್ಯಮದ ಸಮೀಕ್ಷೆಯ ಪೋಸ್ಟ್‌ವೊಂದನ್ನು ಟ್ವೀಟರ್‌ನಲ್ಲಿ ಅಪ್ಲೋಡ್ ಮಾಡಿರುವ ಅವರು, ನಾವು ಘೋಷಿಸದೆಯೇ ಶೇ.27 ರಷ್ಟು ಜನರು ರಾಹುಲ್ ಗಾಂಧಿಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬೆಂಬಲಿಸಿದ್ದಾರೆ. ಅವರನ್ನು ಅಭ್ಯರ್ಥಿಯಾಗಿ ಘೋಷಿಸಿ, ನಂತರ ಬೆಂಬಲವನ್ನು ನೋಡಿ ಎಂದು ಸಮೀಕ್ಷೆಯೊಂದನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ.
ಅಲ್ಲದೇ ಪ್ರಧಾನಿ ಅಭ್ಯರ್ಥಿ ಘೋಷಿಸಿ ನಮ್ಮಲ್ಲಿ ಪ್ರಧಾನಿ ಅಭ್ಯರ್ಥಿ ಇದ್ದಾರೆ ಎಂಬುದನ್ನು ನಾವು ಸ್ಪಷ್ಟಪಡಿಸಬೇಕು ಎಂದಿದ್ದಾರೆ. ಈಗಾಗಲೇ ಹಲವು ಪಕ್ಷಗಳ ನಾಯಕರು ಪ್ರಧಾನಿ ರೇಸ್‌ನಲ್ಲಿದ್ದು, ಮಾನನಷ್ಟ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ರಾಹುಲ್ ಸದ್ಯ ಸಂಸದ ಸ್ಥಾನದಿಂದ ವಜಾಗೊಂಡಿದ್ದಾರೆ.
ಸಂಸತ್ ಸ್ಥಾನ ಕಳ್ಕೊಂಡ ರಾಹುಲ್ ಗಾಂಧಿಗೆ ಈಗ ಹೊಸ ಪಾಸ್‌ಪೋರ್ಟ್ ಪಡೆಯಲೂ ಸಂಕಷ್ಟ!
ಈ ಮಧ್ಯೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೊಸ ಪಾಸ್‌ಪೋರ್ಟ್ ಪಡೆಯಲು ಅರ್ಜಿ ಸಲ್ಲಿಸಲು ನಿರಾಕ್ಷೇಪಣಾ ಪತ್ರ ಪಡೆಯಲು ಮಂಗಳವಾರ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯದ ಮೊರೆ ಹೋಗಿದ್ದರು. ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆಗೊಳಗಾಗಿದ್ದ ರಾಹುಲ್ ಗಾಂಧಿ ಸದ್ಯ ಜಾಮೀನಿನ ಮೇಲೆ ಇದ್ದಾರೆ. ಶಿಕ್ಷೆ ಬಳಿಕ ಸಂಸತ್ ಸ್ಥಾನವನ್ನು ಕಳೆದುಕೊಂಡಿದ್ರು. ಈ ಹಿನ್ನೆಲೆ ಸಾಮಾನ್ಯ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ಆದರೆ, ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಇದಕ್ಕೆ ವಿರೋಧಿಸಿದ್ದಾರೆ.
ಅಮೇಥಿಗೆ ಆದ ಗತಿಯೇ ವಯನಾಡ್‌ಗೆ ಆಗಲಿದೆ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಎಚ್ಚರಿಕೆ
ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವೈಭವ್ ಮೆಹ್ತಾ ಅವರ ಮುಂದೆ ಹಾಜರಾದ ರಾಹುಲ್ ಗಾಂಧಿ ಪರ ವಕೀಲರು, ಅವರ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿಲ್ಲ ಮತ್ತು ಆದ್ದರಿಂದ ಅವರಿಗೆ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡಬಹುದು ಎಂದು ಹೇಳಿದರು. ಆದರೆ, ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿರೋ ಅರ್ಜಿಯನ್ನು ಪರಿಗಣಿಸಿದ ಕೋರ್ಟ್ ರಾಹುಲ್ ಗಾಂಧಿಯವರ ಮನವಿಗೆ ಉತ್ತರವನ್ನು ಸಲ್ಲಿಸುವ ಹಕ್ಕು ಅವರಿಗೆ ಇದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಹೀಗಾಗಿ ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 26ಕ್ಕೆ ಪಟ್ಟಿ ಮಾಡಲಾಗಿದೆ.
ರಾಹುಲ್ ಗಾಂಧಿಗೆ ವಿದೇಶ ಪ್ರವಾಸಕ್ಕೆ ಅನುಮತಿ ನೀಡಿದರೆ ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಗೆ ಅಡ್ಡಿಯಾಗಬಹುದು ಎಂದು ಸುಬ್ರಮಣಿಯನ್ ಸ್ವಾಮಿ ಅರ್ಜಿ ಸಲ್ಲಿಸಿದ್ದಾರೆ. ಸುಬ್ರಮಣಿಯನ್ ಸ್ವಾಮಿ ಅವರು ತಮ್ಮ ಖಾಸಗಿ ದೂರಿನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್, ಸುಮನ್ ದುಬೆ, ಸ್ಯಾಮ್ ಪಿತ್ರೋಡಾ ಮತ್ತು ಗಾಂಧಿ ಕುಟುಂಬ ನಿಯಂತ್ರಿತ ಯಂಗ್ ಇಂಡಿಯನ್ ವಿರುದ್ಧ ವಂಚನೆ, ಕ್ರಿಮಿನಲ್ ಪಿತೂರಿ, ಕ್ರಿಮಿನಲ್ ನಂಬಿಕೆ ಉಲ್ಲಂಘನೆ ಮತ್ತು ಆಸ್ತಿ ದುರುಪಯೋಗದ ಆರೋಪ ಮಾಡಿದ್ದಾರೆ.
ಕರ್ನಾಟಕ ಗೆಲುವಿನ ಬಳಿಕ ಮಧ್ಯಪ್ರದೇಶದಲ್ಲೂ ಕಾಂಗ್ರೆಸ್ ಪಂಚ ಗ್ಯಾರಂಟಿ ಪಾಲಿಟಿಕ್ಸ್!
