ಕೋಲ್ಕತ್ತಾ(ಡಿ.19): ಪೌರತ್ವ ತಿದ್ದುಪಡಿ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಪ.ಬಂಗಾಳ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರಕ್ಕೆ ತಾಕತ್ತಿದ್ದರೆ ವಿಶ್ವಸಂಸ್ಥೆಯ ನೇತೃತ್ವದಲ್ಲಿ ಜನಾಭಿಪ್ರಾಯ ಸಂಗ್ರಹ ನಡೆಸಲಿ ಎಂದು ಸವಾಲು ಎಸೆದಿದ್ದಾರೆ.

ಅಷ್ಟಕ್ಕೂ ಹಿಂದೂ ಶರಣಾರ್ಥಿಗಳಿಗೆ ಎಲ್ಲಿ ಜಾಗ ಕೊಡ್ತಿರಿ?: ಉದ್ಧವ್!

ನನ್ನ ಸಾವಿನ ಬಳಿಕವಷ್ಟೇ ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿಗೆ ಅವಕಾಶ ಎಂದು ಹೇಳಿರುವ ಮಮತಾ, ವಿಶ್ವಸಂಸ್ಥೆ ಜನಾಭಿಪ್ರಾಯ ಸಂಗ್ರಹಕ್ಕೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

CAB ಬೆಂಬಲಿಸಿದ್ದ ಡಾ. ಸಿಂಗ್ ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ!

ಒಂದು ವೇಳೆ ವಿಶ್ವಸಂಸ್ಥೆಯ ಜನಾಭಿಪ್ರಾಯ ಸಂಗ್ರಹದಲ್ಲಿ ಪೌರತ್ವ ಕಾಯ್ದೆ ವಿರೋಧಿ ಫಲಿತಾಂಶ ಬಂದರೆ ಬಿಜೆಪಿ ಅಧಿಕಾರದಿಂದ ಕೆಳಗಿಳಿಯಬೇಕು ಎಂದೂ ಮಮತಾ ಒತ್ತಾಯಿಸಿದ್ದಾರೆ.

ನಿಮಗೆ ಬಹುಮತ ಇದೆ ಎಂಬ ಕಾರಣಕ್ಕೆ ಮನಬಂದಂತೆ ವರ್ತಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಮಮತಾ ಬ್ಯಾನರ್ಜಿ  ಹರಿಹಾಯ್ದಿದ್ದಾರೆ.

ಪೌರತ್ವ ಕಿಚ್ಚು: ಅಮಿತ್ ಶಾ ಎಮರ್ಜೆನ್ಸಿ ಭದ್ರತಾ ಸಭೆ!