ವಕ್ಫ್ ಕಾನೂನು: ಮುರ್ಷಿದಾಬಾದ್‌ನಲ್ಲಿ ವಕ್ಫ್ ಕಾನೂನು ವಿರುದ್ಧ ಪ್ರತಿಭಟನೆ ನಂತರ ಮಮತಾ ಬ್ಯಾನರ್ಜಿ, ಬಂಗಾಳದಲ್ಲಿ ವಕ್ಫ್ ಕಾಯ್ದೆ ಜಾರಿಯಾಗುವುದಿಲ್ಲ ಎಂದಿದ್ದಾರೆ.

Waqf amendment act: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ವಕ್ಫ್ ಕಾನೂನಿನ ವಿರುದ್ಧ ಪ್ರತಿಭಟಿಸುತ್ತಿದ್ದ ಜನರು ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. 

ಕೋಲ್ಕತ್ತಾದಲ್ಲಿ ನಡೆದ ಜೈನ ಸಮುದಾಯದ ಕಾರ್ಯಕ್ರಮವೊಂದರಲ್ಲಿ, ಮಾತನಾಡಿದ ಮಮತಾ ಬ್ಯಾನರ್ಜಿ ಅವರು, ರಾಜ್ಯದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರಲಾಗುವುದಿಲ್ಲ . ಅಲ್ಪಸಂಖ್ಯಾತರು ಮತ್ತು ಅವರ ಆಸ್ತಿಯನ್ನು ರಕ್ಷಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೇಳಿದರು.

ಇದನ್ನೂ ಓದಿ: ಭಾರತದ ವಿರುದ್ಧ ಸೈಲೆಂಟಾಗಿ ಚೀನಾ, ಬಾಂಗ್ಲಾ, ಪಾಕ್ ಸಂಚು! ಏನಿದು 'ಚಿಕನ್‌ ನೆಕ್' ಪ್ಲಾನ್?

ಹಿಂಸಾಚಾರದ ನಂತರ ಮಮತಾ ಬ್ಯಾನರ್ಜಿ ಹೇಳಿದ್ದೇನು?

'ಈ ಕಾನೂನಿನಿಂದ ನೀವು ಅಸಮಾಧಾನಗೊಂಡಿದ್ದೀರಿ ಎಂದು ನನಗೆ ತಿಳಿದಿದೆ. ಆದರೆ ಬಂಗಾಳದಲ್ಲಿ ಸಮಾಜದಲ್ಲಿ ವಿಭಜನೆಯನ್ನು ಉಂಟುಮಾಡುವ ಏನೂ ಸಂಭವಿಸುವುದಿಲ್ಲ' ಎಂದು ಮಮತಾ ಬ್ಯಾನರ್ಜಿ ಜನರಿಗೆ ಭರವಸೆ ನೀಡಿದರು. 'ವಕ್ಫ್ ಕಾನೂನಿನ ಅನುಷ್ಠಾನದ ಬಗ್ಗೆ ನೀವು ಚಿಂತಿತರಾಗಿದ್ದೀರಿ ಎಂದು ನನಗೆ ತಿಳಿದಿದೆ ಆದರೆ ನನ್ನನ್ನು ನಂಬಿರಿ, ಜನರನ್ನು ವಿಭಜಿಸುವ ಮೂಲಕ ಯಾರಿಗೂ ಆಳ್ವಿಕೆ ನಡೆಸಲು ಅವಕಾಶ ನೀಡುವ ಯಾವುದೂ ಬಂಗಾಳದಲ್ಲಿ ಸಂಭವಿಸುವುದಿಲ್ಲ' ಎಂದು ಅವರು ಹೇಳಿದರು. ಬಾಂಗ್ಲಾದೇಶದ ಪರಿಸ್ಥಿತಿಯನ್ನು ಸಹ ನೋಡಬೇಕಿತ್ತು ಮತ್ತು ವಕ್ಫ್ ತಿದ್ದುಪಡಿ ಮಸೂದೆಯನ್ನು ಈಗ ಅಂಗೀಕರಿಸಬಾರದಿತ್ತು ಎಂದು ಅವರು ಹೇಳಿದರು.

ಇದನ್ನೂ ಓದಿ: ಅಕ್ರಮ ಬಾಂಗ್ಲಾದೇಶಿಯರ ಬಳಿ ಬಂಗಾಳದ ಆಧಾರ ಕಾರ್ಡ್ ಪತ್ತೆ! ಮಮತಾ ಬ್ಯಾನರ್ಜಿ ವಿರುದ್ಧ ಅಮಿತ್ ಶಾ ಗಂಭೀರ ಆರೋಪ!

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಪ್ರದೇಶದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಹಿಂಸಾಚಾರ ಭುಗಿಲೆದ್ದಿತು. ಈ ಘಟನೆಯ ನಂತರ ರಾಜ್ಯ ರಾಜಕೀಯ ಬಿಸಿಯಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂದು ಭಾರತೀಯ ಜನತಾ ಪಕ್ಷ ಆರೋಪಿಸಿದೆ.