ಕೊರೋನಾ ಹಾವಳಿ ಮಧ್ಯೆ ನಡೆದಿದ್ದ ಪಶ್ಚಿಮ ಬಂಗಾಳ ಚುನಾವಣೆ| ಸತತ ಮೂರನೇ ಬಾರಿ ಪಶ್ಚಿಮ ಬಂಗಾಳದಲ್ಲಿ ದೀದೀ ರಾಜ್ಯಭಾರ| ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ(ಮೇ.05): ಕೊರೋನಾತಂಕ ನಡುವೆಯೂ ಇಡೀ ದೇಶದ ಚಿತ್ತ ಸೆಳೆದಿದ್ದ ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶ ಘೋಷಣೆಯಾಘಿದೆ. ಮೋದಿ ವರ್ಸಸ್‌ ದೀದೀ ಪೈಪೋಟಿಯಲ್ಲಿ, ಕೇಸರಿ ಪಾಳಯವನ್ನು ಸೋಲಿಸಿ ಟಿಎಂಸಿ ಬಹುಮತ ಪಡೆದಿದೆ. ಅತ್ತ ಮಮತಾ ಬ್ಯಾನರ್ಜಿ ಸ್ವಕ್ಷೇತ್ರ ನಂದಿಗ್ದರಾಮದಲ್ಲಿ ಸೋಲನುಭವಿಸಿದ್ದರೂ ತಮ್ಮ ಪಕ್ಷವನ್ನು ಗೆಲುವಿನ ದಡ ತಲುಪಸಿಇದ್ದಾರೆ. ಇವೆಲ್ಲದರ ಬರೆನ್ನಲ್ಲೇ ಇಂದು ಮಮತಾ ಬ್ಯಾನರ್ಜಿ ಸತತ ಮೂರನೇ ಬಾರಿಗೆ ಪಶ್ಚಿಮ ಬಂಗಾಳ ಸಿಎಮಾ ಆಗಿ ಪ್ರಮಾಣ ವಚನ ಸ್ವೀಕರಿಸುಇದ್ದಾರೆ.

ಬೆಂಗಾಲಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ದೀದಿ, ಪಶ್ಚಿಮ ಬಂಗಾಳದಲ್ಲಿ ಕೊರೋನಾ ಬಿಕ್ಕಟ್ಟು ನಿಯಂತ್ರಣವೇ ತನ್ನ ಮೊದಲ ಆದ್ಯತೆ ಎಂದು ಶಪಥ ಮಾಡಿದ್ದಾರೆ. ಪ್ರಮಾಣ ವಚನದ ಬೆನ್ನಲ್ಲೇ ರಾಜ್ಯದಲ್ಲಿ ಕೊರೋನಾ ಬಿಕ್ಕಟ್ಟನ್ನು ಬಗೆಹರಿಸುವ ಬಗ್ಗೆ ಯಾವ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸುತ್ತೇನೆ ಎಂದಿದ್ದಾರೆ. ಕೈಗೊಳ್ಳಲಿರುವ ಕ್ರಮಗಳ ಬಗ್ಗೆ ಇಂದು ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ಕರೆದು, ಮಾಹಿತಿ ನೀಡುತ್ತೇವೆ ಎಂದಿದ್ದಾರೆ.

Scroll to load tweet…

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶದ ಬಳಿಕ ಗಲಭೆಗಳು ಹೆಚ್ಚಾಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ನನ್ನ ಎರಡನೇ ಗುರಿಯಾಗಿದೆ. ಇಲ್ಲಿನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ವಿಶೇಷ ಅಧಿಕಾರಿಗಳನ್ನು ನೇಮಕ ಮಾಡುತ್ತೇನೆ. ಬಂಗಾಳದ ಹಿಂಸಾಚಾರದಲ್ಲಿ ಅನೇಕ ಅಮಾಯಕ ಜೀವಗಳು ಬಲಿಯಾಗಿವೆ. ಇದು ಬೇಸರದ ಸಂಗತಿ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಷಆದ ವ್ಯಕ್ತಪಡಿಸಿದ್ದಾರೆ.

Scroll to load tweet…

ಕೊರೋನಾ ಅಟ್ಟಹಾಸ ಹೆಚ್ಚಾಗುತ್ತಿರುವುದರಿಂದ ಕೋವಿಡ್ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ಸರಳವಾಗಿ ಮಮತಾ ಬ್ಯಾನರ್ಜಿ ರಾಜಭವನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಜಗದೀಪ್ ಧನಕರ್ ಪ್ರಮಾಣವಚನ ಬೋಧಿಸಿದ್ದಾರೆ.