ಕೋಲ್ಕತ್ತಾ(ಡಿ.16): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕೋಲ್ಕತ್ತಾದಲ್ಲಿ ಭಾರೀ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ.

"

ಸಾವಿರಾರು CAA ವಿರೋಧಿ ಪ್ರತಿಭಟನಾಕಾರರು ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಪೌರತ್ವ ಕಾಯ್ದೆಯಲ್ಲಿ ಬದಲಾವಣೆ?: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸುಳಿವು!

ಈ ವೇಳೆ ಮಾತನಾಡಿದ ಮಮತಾ ಬ್ಯಾನರ್ಜಿ, ದೇಶವನ್ನು ಧರ್ಮದ ಆಧಾರದ ಮೇಲೆ ವಿಭಜಿಸಲು ಹೊರಟಿರುವ ಬಿಜೆಪಿಯ ಕುತಂತ್ರಗಳನ್ನು ಸೋಲಿಸುವಂತೆ ಜನತೆಗೆ ಕರೆ ನೀಡಿದರು.

CAA ಸಂವಿಧಾನದ ಆಶೋತ್ತರಗಳಿಗೆ ವಿರುದ್ಧವಾಗಿದ್ದು, ಈ ಕಾಯ್ದೆಯ ಜಾರಿಯಿಂದ ಸಮಾಜದಲ್ಲಿ ಧಾರ್ಮಿಕ ಅಂತರ ಮತ್ತಷ್ಟು ಹೆಚ್ಚಾಗಲಿದೆ ಎಂದು ಮಮತಾ ಬ್ಯಾನರ್ಜಿ ಅಭಿಪ್ರಾಯಪಟ್ಟರು.

ಇನ್ನು ರಾಜ್ಯದ ಮುಖ್ಯಮಂತ್ರಿಯೇ ಪ್ರತಿಭಟನೆಯ ನೇತೃತ್ವ ವಹಿಸಿದ್ದಕ್ಕೆ ರಾಜ್ಯಪಾಲ ಜಗದೀಪ್ ಧನ್ಕರ್, ಮುಖ್ಯಮಂತ್ರಿ ಹಾಗೂ ಅವರ ಸಚಿವ ಸಂಪುಟ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ಅಸಾಂವಿಧಾನಿಕ ಎಂದು ಧನ್ಕರ್ ಟ್ವಿಟ್ ಮಾಡಿದ್ದಾರೆ.

CAB ಪ್ರತಿಭಟನೆಗೆ ಕಾಂಗ್ರೆಸ್ ಕಾರಣ: ಮೋದಿ ಆರೋಪ!