ಕೌಟುಂಬಿಕ ದೌರ್ಜನ್ಯ ಪ್ರಕರಣವೊಂದರಲ್ಲಿ ಆರೋಪಿ ಪತಿಗೆ ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪತ್ನಿಯನ್ನು ಪ್ರಾಣಿಯಂತೆ ನಡೆಸಿಕೊಳ್ಳಬಾರದು, ಮಹಿಳೆಯರಿಗೂ ಘನತೆಯಿಂದ ಬದುಕುವ ಹಕ್ಕಿದೆ ಎಂದು ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಪಿ.ಬಿ. ವರಾಳೆ ಅವರ ಪೀಠ ಸ್ಪಷ್ಟಪಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೆಹಲಿ (ಮೇ.12): ಪತ್ನಿಯನ್ನು ಗಂಡ ಪ್ರಾಣಿಯಂತೆ ನಡೆಸಿಕೊಳ್ಳಬಾರದು. ಮಹಿಳೆಯರಿಗೂ ಘನತೆಯಿಂದ ಬದುಕುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಖಡಕ್ಕಾಗಿ ಹೇಳಿದೆ. ಕೌಟುಂಬಿಕ ದೌರ್ಜನ್ಯ ಪ್ರಕರಣದ ಆರೋಪಿಯೊಬ್ಬ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ಈ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಪಿ.ಬಿ. ವರಾಳೆ ಅವರಿದ್ದ ಪೀಠ ಈ ಅರ್ಜಿಯ ವಿಚಾರಣೆ ನಡೆಸಿತು.

ಪ್ರಕರಣದ ಹಿನ್ನೆಲೆ, ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮಹಿಳೆಯರ ಘನತೆಗೆ ಧಕ್ಕೆ ತರುವಂತಹ ಯಾವುದೇ ನಡವಳಿಕೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಈ ಹಿಂದೆ ಪಾಟ್ನಾ ಹೈಕೋರ್ಟ್ ಕೂಡಾ ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಆರೋಪಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದ. ಆದರೆ, ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತು.

ಕೌಟುಂಬಿಕ ದೌರ್ಜನ್ಯದ ದೂರಿನಲ್ಲಿ ಆರೋಪಿಯ ನಡವಳಿಕೆ ಅತ್ಯಂತ ಗಂಭೀರ ಸ್ವರೂಪದ್ದಾಗಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿತು. ಅಲ್ಲದೆ, ಮಹಿಳೆಯ ಘನತೆಯನ್ನು ಕಾಪಾಡುವುದರ ಮಹತ್ವವನ್ನು ಮತ್ತೊಮ್ಮೆ ಒತ್ತಿ ಹೇಳಿತು.

ಏಷ್ಯಾನೆಟ್ ನ್ಯೂಸ್ ಸುದ್ದಿಗಳನ್ನು ಲೈವ್ ಆಗಿ ವೀಕ್ಷಿಸಿ

YouTube video player