Asianet Suvarna News Asianet Suvarna News

ಭದ್ರತೆ ನೆಪವೊಡ್ಡಿ ಮಣಿಪುರದಲ್ಲಿ ರಾಹುಲ್ ಗಾಂಧಿ ತಡೆದ ಪೊಲೀಸರು: ಹೆಲಿಕಾಪ್ಟರ್‌ನಲ್ಲಿ ಪ್ರಯಾಣ!

ಭದ್ರತೆಯ ಆತಂಕ ಹಿನ್ನೆಲೆ ರಾಹುಲ್ ಗಾಂಧಿ ಅವರ ಬೆಂಗಾವಲು ವಾಹನವನ್ನು ತಡೆದಿದ್ದಾಗಿ ಮಣಿಪುರ ಪೊಲೀಸರು ತಿಳಿಸಿದ್ದಾರೆ. ಹಾಗೂ, ರಾಹುಲ್‌ ಗಾಂಧಿ ಬೆಂಗಾವಲು ಪಡೆಯನ್ನು "ದಾಳಿಕೋರರ" ತಂಡ ಎಂದು ತಪ್ಪಾಗಿ ಭಾವಿಸಬಹುದು ಎಂದು ಬಿಷ್ಣುಪುರದ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

manipur police stop rahul gandhi s convoy fear it might be mistaken for group of attackers ash
Author
First Published Jun 29, 2023, 3:39 PM IST

ಇಂಫಾಲ (ಜೂನ್ 29, 2023): ಹಿಂಸಾಚಾರ ಪೀಡಿತ ರಾಜ್ಯಕ್ಕೆ 2 ದಿನಗಳ ಭೇಟಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಮಣಿಪುರ ತಲುಪಿದ್ದಾರೆ. ರಾಜ್ಯದ ರಾಜಧಾನಿ ಇಂಫಾಲ್‌ನಿಂದ ಚುರಚಂದಪುರಕ್ಕೆ ತೆರಳುತ್ತಿದ್ದ ರಾಹುಲ್ ಗಾಂಧಿ ಅವರ ಬೆಂಗಾವಲು ಪಡೆಯನ್ನು ಮಣಿಪುರ ಪೊಲೀಸರು ಭದ್ರತಾ ಆತಂಕದಿಂದ ತಡೆದರು. ಆದರೂ, ರಾಹುಲ್‌ ಗಾಂಧಿ ತಮ್ಮ ಭೇಟಿಯನ್ನು ನಿಲ್ಲಿಸದಿರಲು ತೀರ್ಮಾನಿಸಿದ್ದು, ಹೆಲಿಕಾಪ್ಟರ್‌ನಲ್ಲಿ ಪ್ರಯಾಣ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಮಣಿಪುರ ರಾಜಧಾನಿ ಇಂಫಾಲದಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ಬಿಷ್ಣುಪುರದಲ್ಲಿ ರಾಹುಲ್‌ ಗಾಂಧಿ ಬೆಂಗಾವಲು ಪಡೆಯನ್ನು ನಿಲ್ಲಿಸಲಾಯಿತು. ರಾಹುಲ್ ಗಾಂಧಿಯವರು ಚುರಾಚಂದ್‌ಪುರಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಹಲವಾರು ವಾರಗಳಿಂದ ರಾಜ್ಯವನ್ನು ಬೆಚ್ಚಿಬೀಳಿಸಿದ ಜನಾಂಗೀಯ ಹಿಂಸಾಚಾರದ ಕೆಲವು ಕೆಟ್ಟ ಪ್ರಕರಣಗಳಿಗೆ ಈ ನಗರ ಸಾಕ್ಷಿಯಾಗಿದೆ.

ಇದನ್ನು ಓದಿ: ಮಣಿಪುರ ಹಿಂಸೆಗೆ ವಿದೇಶಿ ಕುಮ್ಮಕ್ಕು; ಮ್ಯಾನ್ಮಾರ್‌ ಶಸ್ತ್ರಾಸ್ತ್ರ ಬಳಕೆ: ಹಿಂಸಾಪೀಡಿತ ರಾಜ್ಯಕ್ಕೆ ರಾಹುಲ್‌ ಗಾಂಧಿ ಭೇಟಿ

ಭದ್ರತೆಯ ಆತಂಕ ಹಿನ್ನೆಲೆ ರಾಹುಲ್ ಗಾಂಧಿ ಅವರ ಬೆಂಗಾವಲು ವಾಹನವನ್ನು ತಡೆದಿದ್ದಾಗಿ ಮಣಿಪುರ ಪೊಲೀಸರು ತಿಳಿಸಿದ್ದಾರೆ. ಹಾಗೂ, ರಾಹುಲ್‌ ಗಾಂಧಿ ಬೆಂಗಾವಲು ಪಡೆಯನ್ನು "ದಾಳಿಕೋರರ" ತಂಡ ಎಂದು ತಪ್ಪಾಗಿ ಭಾವಿಸಬಹುದು ಎಂದು ಬಿಷ್ಣುಪುರದ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

"ರಾಹುಲ್ ಗಾಂಧಿ ಅವರನ್ನು ಮುಂದೆ ಹೋಗಲು ಬಿಡಲಾಗುವುದಿಲ್ಲ. ಅವರ ಭದ್ರತೆಯ ಬಗ್ಗೆ ನಾವು ಚಿಂತಿಸುತ್ತಿದ್ದೇವೆ" ಎಂದು ಬಿಷ್ಣುಪುರದ ಎಸ್ಪಿ ಹೇಳಿದ್ದಾರೆ. "ನಿನ್ನೆ ರಾತ್ರಿಯೂ ಬೆಂಕಿ ಹಚ್ಚಲಾಗಿದೆ ಮತ್ತು ಪರಿಸ್ಥಿತಿ ಹದಗೆಟ್ಟಿದೆ. ರಾಹುಲ್ ಗಾಂಧಿ ಅವರ  ಬೆಂಗಾವಲು ಪಡೆಯನ್ನು ಚುರಾಚಂದ್‌ಪುರದಲ್ಲಿ ದಾಳಿಕೋರರದ್ದು ಎಂದು ತಪ್ಪಾಗಿ ಗ್ರಹಿಸಬಹುದು" ಎಂದೂ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಸೇನೆಗೇ ಸಡ್ಡು ಹೊಡೆದು 12 ಉಗ್ರರ ಬಿಡಿಸಿದ ಸ್ತ್ರೀಯರು: ಯೋಧರಿಗೆ ದಿಗ್ಬಂಧನ; ಉಗ್ರರ ರಕ್ಷಣೆಗೆ ನಿಂತ ಸಾವಿರಾರು ಗ್ರಾಮಸ್ಥರು

ಇಂಫಾಲದಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ಬಿಷ್ಣುಪುರದಲ್ಲಿ ಬೆಂಗಾವಲು ಪಡೆಯನ್ನು ನಿಲ್ಲಿಸಲಾಗಿದೆ. ಅವರು ಈಗ ರಸ್ತೆ ಮೂಲಕ ಚುರಚಂದಪುರಕ್ಕೆ ಪ್ರಯಾಣಿಸಲು ಹೆಲಿಕಾಪ್ಟರ್ ನೆರವು ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು, ಈ ಬಗ್ಗೆ ಮಣಿಪುರ ಪೊಲೀಸರ ವಿರುದ್ಧ ಕಿಡಿ ಕಾರಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ‘’ಬಿಷ್ಣುಪುರ ಬಳಿ ರಾಹುಲ್ ಗಾಂಧಿ ಬೆಂಗಾವಲು ವಾಹನವನ್ನು ಪೊಲೀಸರು ತಡೆದಿದ್ದಾರೆ. ನಮಗೆ ಅವಕಾಶ ನೀಡುವ ಸ್ಥಿತಿಯಲ್ಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಜನರು ರಾಹುಲ್ ಗಾಂಧಿಗೆ ಕೈ ಬೀಸಲು ರಸ್ತೆಯ ಎರಡೂ ಬದಿಗಳಲ್ಲಿ ನಿಂತಿದ್ದಾರೆ, ಅವರು ಏಕೆ ನಿಲ್ಲಿಸಿದ್ದಾರೆ ಎಂದು ನಮಗೆ ಅರ್ಥವಾಗುತ್ತಿಲ್ಲ." ಎಂದು ಸುದ್ದಿಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಚುರಚಂದಪುರದಲ್ಲಿ ಅವರು ಪರಿಹಾರ ಶಿಬಿರಗಳಲ್ಲಿ ನರಳುತ್ತಿರುವ ಜನರನ್ನು ಭೇಟಿಯಾಗಬೇಕಿತ್ತು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಈ ಕ್ರಮವು ಎಲ್ಲಾ "ಸಾಂವಿಧಾನಿಕ ಮತ್ತು ಪ್ರಜಾಸತ್ತಾತ್ಮಕ ಮಾನದಂಡಗಳನ್ನು" ಉಲ್ಲಂಘಿಸುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ಕೇಂದ್ರ ಸಚಿವರ ಮನೆಗೆ ಬೆಂಕಿ; 1200 ಜನರ ಗುಂಪಿನಿಂದ ದುಷ್ಕೃತ್ಯ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ತಮ್ಮ ವಾಸ್ತವ್ಯದ ಅವಧಿಯಲ್ಲಿ ರಾಹುಲ್ ಗಾಂಧಿ ಅವರು ನಾಗರಿಕ ಸಮಾಜದ ಪ್ರತಿನಿಧಿಗಳೊಂದಿಗೆ ತೊಡಗಿಸಿಕೊಳ್ಳಲಿದ್ದಾರೆ ಮತ್ತು ಇಂಫಾಲ್ ಹಾಗೂ ಚುರಚಂದಪುರದ ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ ಎಂದು ಖಚಿತಪಡಿಸಿದ್ದಾರೆ. ಮೇ 3 ರಂದು ಹಿಂಸಾಚಾರ ನಡೆದ ನಂತರ ಈಶಾನ್ಯ ರಾಜ್ಯಕ್ಕೆ ಕಾಂಗ್ರೆಸ್ ನಾಯಕರ ಮೊದಲ ಭೇಟಿ ಇದಾಗಿದೆ.

ಇದನ್ನೂ ಓದಿ: ಮಣಿಪುರದಲ್ಲಿ ಅಮಿತ್‌ ಶಾ ಶಾಂತಿ ಮಂತ್ರ: ಮೀಟಿ, ಕುಕಿ ಸಮುದಾಯದ ನಾಯಕರ ಜತೆ ಶಾಂತಿ ಸಭೆ

Follow Us:
Download App:
  • android
  • ios