ಮಹಿಳೆ ನಗ್ನ ಮೆರವಣಿಗೆ ಪ್ರಕರಣ ಆರೋಪಿ ಮನೆಗೆ ಬೆಂಕಿ, ಮಣಿಪುರದಲ್ಲಿ ಮತ್ತೆ ಹಿಂಸಾಚಾರ!
ಕಳೆದ ಕೆಲ ತಿಂಗಳಿನಿಂದ ಮಣಿಪುರ ಹೊತ್ತಿ ಉರಿಯುತ್ತಿದೆ. ಇದೀಗ ಇಬ್ಬರ ಮಹಿಳೆಯರನ್ನು ನಗ್ನವಾಗಿ ಮೆರವಣಿಗೆ ಮಾಡಿದ ವಿಡಿಯೋ ಭಾರಿ ಕೋಲಾಹಲ ಸೃಷ್ಟಿಸಿದೆ. ಇಷ್ಟಾದರೂ ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಇದೀಗ ನಗ್ನ ಮೆರವಣಿಗೆ ಪ್ರಮುಖ ಆರೋಪಿ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ.
ಇಂಫಾಲ್(ಜು.21) ಮಹಿಳೆಯ ಬೆತ್ತಲೆ ಮೆರವಣಿಗೆ ಪೈಶಾಚಿಕ ಪ್ರಕರಣ ಬೆಳಕಿಗೆ ಬಂದ 48 ಗಂಟೆಗಳಲ್ಲಿ ಮತ್ತೆ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಈಶಾನ್ಯ ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ರಾಜ್ಯ ಸರ್ಕಾರ ಕೈಚೆಲ್ಲಿ ಕೂತಿದ್ದರೆ, ಕೇಂದ್ರ ಸರ್ಕಾರ ತ್ವರಿತ ಕ್ರಮ ಕೈಗೊಳ್ಳದೆ ಟೀಕೆ ಎದುರಿಸುತ್ತಿದೆ. ಮಹಿಳೆ ನಗ್ನ ಮೆರವಣಿ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕೆಲ ಆರೋಪಿಗಳನ್ನು ಬಂಧಿಸಲಾಗಿದೆ. ಈ ಪೈಕಿ ಪ್ರಮುಖ ಆರೋಪಿ ಹುರಿಯಮ್ ಹೆರೋದಾಸ್ ಮೈತಿ ಮನೆಗ ಬೆಂಕಿ ಹಚ್ಚಲಾಗಿದೆ. ಮಹಿಳೆ ನಗ್ನ ಮೆರವಣಿ ಪ್ರಕರಣದ ಪ್ರಮುಖ ಆರೋಪಿಗಳ ಮನೆಗೆ ಬೆಂಕಿ ಹಚ್ಚಲಾಗಿದ್ದ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಕೆಲ ಕಿಡಿಗೇಡಿಗಳು ರಾತ್ರೋ ರಾತ್ರಿ ಹುರಿಯಮ್ ಹೆರೋದಾಸ್ ಮೈತಿ ಮನೆಗೆ ದಾಳಿ ಮಾಡಿ ಬೆಂಕಿ ಹಚ್ಚಿದ್ದಾರೆ. ಈ ವಿಡಿಯೋ ವೈರಲ್ ಆದ ಬಳಿಕ ದೇಶದಲ್ಲೇ ಆಕ್ರೋಶ ಹೆಚ್ಚಾಗಿದೆ. ಇದೇ ಸಂದರ್ಭ ಬಳಸಿಕೊಂಡ ಕಿಡಿಗೇಡಿಗಳು ಮತ್ತೆ ಮಣಿಪುರದಲ್ಲಿ ಹಿಂಸಾಚಾರ ಆರಂಭಿಸಿದ್ದಾರೆ. ಮಹಿಳೆ ನಗ್ನ ಮೆರವಣಿಗೆ ಪ್ರಕರಣದಲ್ಲಿ ಇದುವರೆಗೆ ನಾಲ್ವರನ್ನು ಅರೆಸ್ಟ್ ಮಾಡಲಾಗಿದೆ. ಈ ಪೈಕಿ ಓರ್ವ ಆರೋಪಿ ಮನೆ ಸುಟ್ಟು ಭಸ್ಮವಾಗಿದೆ. ಇನ್ನು ವಿಡಿಯೋದಲ್ಲಿ ಕಾಣುವ ಹಲವು ಆರೋಪಿಗಳ ಮನೆ ಮೇಲೂ ದಾಳಿಯಾಗಿದೆ.
ಮಣಿಪುರಕ್ಕೆ ಮರುಗಿದ ಮಮತಾಗೆ ಬಂಗಾಳದ ನಗ್ನ ಮೆರವಣಿಗೆ ಕಾಣಿಸ್ಲೇ ಇಲ್ಲ; ಕಹಿ ಘಟನೆ ಬಿಚ್ಚಿಟ್ಟ ಬಿಜೆಪಿ!
ವಿಡಿಯೋ ವೈರಲ್ ಬಳಿಕ ಮಣಿಪುರದಲ್ಲಿ ಹಿಂಸಾಚಾರ ಆರಂಭಗೊಂಡಿದೆ. ಮೈತಿ ಹಾಗೂ ಕುಕಿ ಸಮುದಾಯದ ನಡುವಿನ ದ್ವೇಷ ಮತ್ತಷ್ಟು ಹೆಚ್ಚಾಗಿದೆ. ಗುರುವಾರ ರಾತ್ರಿ ಮಣಿಪುರದ ಹಲವು ಭಾಗದಲ್ಲಿ ಹಿಂಸಾಚಾರ ನಡೆದಿದೆ. ಇದೀಗ ಮಣಿಪುರದಲ್ಲಿ ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂತಿದೆ.
ಮಹಿಳೆಯರನ್ನು ನಗ್ನ ಮೆರವಣಿಗೆ ಮಾಡಿದ ಘಟನೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಆ ಘಟನೆ ಹೇಗೆ ನಡೆಯಿತು ಎಂಬುದನ್ನು ದೌರ್ಜನ್ಯಕ್ಕೊಳಗಾದ ಮಹಿಳೆಯರು ಪೊಲೀಸರಿಗೆ ಸಲ್ಲಿಸಿದ ತಮ್ಮ ದೂರಿನಲ್ಲಿ ಬಿಚ್ಚಿಟ್ಟಿದ್ದಾಳೆ. ‘ಕುಕಿ ಸಮುದಾಯದ ಪುರುಷರು, ಮೈತೇಯಿ ಸಮುದಾಯದ ಮಹಿಳೆಯರ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿ, ಆಕೆಯ ದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿದ್ದಾರೆ ಎಂಬ ವಿಡಿಯೋವೊಂದು ಎಲ್ಲೆಡೆ ಹರಿದಾಡಿತ್ತು’. ಇದರಿಂದ ಕೆರಳಿದ ಗುಂಪು, ಕುಕಿ ಸಮುದಾಯದ ಮೇಲೆ ದಾಳಿ ಮಾಡಿ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಗ್ನವಾಗಿ ಪರೇಡ ಮಾಡಿದ್ದಾರೆ ಎಂದು ಮಹಿಳೆಯರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
2004ರಲ್ಲೂ ಮಣಿಪುರದಲ್ಲಿ ನಡೆದಿತ್ತು 12 ಸ್ತ್ರೀಯರ ನಗ್ನ ಪೆರೇಡ್
ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಗಲಭೆ ವೇಳೆ ಇಬ್ಬರು ಮಹಿಳೆಯರ ನಗ್ನ ಮೆರವಣಿಗೆ ಮಾಡಿರುವುದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ಮಣಿಪುರದ ಹೆಣ್ಣುಮಕ್ಕಳಿಗೆ ಆಗಿರುವ ಅನ್ಯಾಯಕ್ಕೆ ಕ್ಷಮೆಯಿಲ್ಲ’ ಎಂದು ಹೇಳಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನದ ಆರಂಭಕ್ಕೂ ಮುನ್ನ ಸಂಸತ್ ಭವನದ ಹೊರಗೆ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಮೋದಿ, ‘ನಾನು ಇಂದು ಪ್ರಜಾಪ್ರಭುತ್ವದ ದೇಗುಲದಲ್ಲಿ ತೀವ್ರ ನೋವು ಹಾಗೂ ಸಿಟ್ಟಿನಿಂದ ನಿಂತಿದ್ದೇನೆ. ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ಶಿಕ್ಷಿಸದೆ ಬಿಡುವುದಿಲ್ಲ ಎಂದು ದೇಶಕ್ಕೆ ಭರವಸೆ ನೀಡುತ್ತೇನೆ. ಕಾನೂನು ತನ್ನೆಲ್ಲಾ ಕಾಠಿಣ್ಯದೊಂದಿಗೆ ಕೆಲಸ ಮಾಡಲಿದೆ. ಮಣಿಪುರದ ಹೆಣ್ಣುಮಕ್ಕಳಿಗಾದ ಅನ್ಯಾಯವನ್ನು ಯಾವತ್ತೂ ಕ್ಷಮಿಸಲು ಸಾಧ್ಯವಿಲ್ಲ’ ಎಂದು ಹೇಳಿದರು.