ನವದೆಹಲಿ(ಜು.08): ದೇಶದಲ್ಲಿ ಈಗ ಸಾಕಷ್ಟುಪ್ರಮಾಣದಲ್ಲಿ ಫೇಸ್‌ ಮಾಸ್ಕ್‌ ಮತ್ತು ಹ್ಯಾಂಡ್‌ ಸ್ಯಾನಿಟೈಸರ್‌ಗಳು ಉತ್ಪಾದನೆ ಆಗುತ್ತಿರುವುದರಿಂದ ಅವುಗಳನ್ನು ಅಗತ್ಯ ವಸ್ತುಗಳ ಕಾಯ್ದೆಯಿಂದ ಹೊರಗಿಡಲಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ಲೀನಾ ನಂದನ್‌ ಮಂಗಳವಾರ ತಿಳಿಸಿದ್ದಾರೆ.

ಕೊರೋನಾ ತಾಂಡವ: ಯಾವ ಮಾಸ್ಕ್‌ ಎಷ್ಟು ಸೇಫ್‌? ಇಲ್ಲಿದೆ ವಿವರ

ಕೊರೋನಾ ವೈರಸ್‌ನ ಆರಂಭಿಕ ದಿನಗಳಲ್ಲಿ ಮಾಸ್ಕ್‌ ಮತ್ತು ಸ್ಯಾನಿಟೈಸರ್‌ಗಳ ತೀವ್ರ ಕೊರತೆ ಉಂಟಾಗಿತ್ತು. ಹೀಗಾಗಿ ಉತ್ಪಾದನೆ ಹೆಚ್ಚಿಸಲು ಮತ್ತು ದರಕ್ಕೆ ಕಡಿವಾಣ ಹಾಕುವ ನಿಟ್ಟಿನಿಂದ ಮಾ.13ರಂದು ಕೇಂದ್ರ ಸರ್ಕಾರ 100 ದಿನಗಳ ಮಟ್ಟಿಗೆ ಮಾಸ್ಕ್‌ ಮತ್ತು ಸ್ಯಾನಿಟೈಸರ್‌ಗಳನ್ನು ಅಗತ್ಯವಸ್ತುಗಳ ಕಾಯ್ದೆಯಡಿ ಸೇರ್ಪಡೆ ಮಾಡಿ ಆದೇಶ ಹೊರಡಿಸಿತ್ತು.

ಈ ಆದೇಶ ಜೂ.30ರಂದು ಕೊನೆಗೊಂಡಿದೆ. ಈಗ ಅವು ಸಾಕಷ್ಟುಪ್ರಮಾಣದಲ್ಲಿ ಲಭ್ಯವಿರುವುದರಿಂದ ಅಗತ್ಯವಸ್ತುಗಳ ಪಟ್ಟಿಯಿಂದ ಹೊರಗಿಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.