ಕಾಂಗ್ರೆಸ್‌ಗೆ ಡಬಲ್ ಶಾಕ್, ಮಿಲಿಂದ್ ಬೆನ್ನಲ್ಲೇ ಮತ್ತೊರ್ವ ಹಿರಿಯ ನಾಯಕ ರಾಜೀನಾಮೆ!
ಮಿಲಿಂದ್ ದಿಯೋರಾ ರಾಜೀನಾಮೆ ಶಾಕ್‌ನಲ್ಲಿರುವ ಕಾಂಗ್ರೆಸ್‌ಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ಹಿರಿಯ ನಾಯಕ, ಪ್ರಧಾನ ಕಾರ್ಯದರ್ಶಿ ಅಸ್ಸಾಂನ ಅಪುರ್ಬಾ ಕುಮಾರ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ.
ಗುವ್ಹಾಟಿ(ಜ.14) ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಆರಂಭಗೊಂಡ ಬೆನ್ನಲ್ಲೇ ಪಕ್ಷದ ಒಂದೊಂದೇ ವಿಕೆಟ್ ಪತನಗೊಳ್ಳುತ್ತಿದೆ. ಇಂದು ಕಾಂಗ್ರೆಸ್ ಹಿರಿಯ ನಾಯಕ ಮಿಲಿಂದ್ ದಿಯೋರಾ ರಾಜೀನಾಮೆ ಭಾರಿ ಸಂಚಲನ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಇದೀಗ ಅಸ್ಸಾಂನ ಹಿರಿಯ ಕಾಂಗ್ರೆಸ್ ನಾಯಕ, ಅಸ್ಸಾಂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಮುಖ್ಯ ವಕ್ತಾರರಾಗಿದ್ದ ಅಪುರ್ಬ ಕುಮಾರ್ ಭಟ್ಟಾಚಾರ್ಜಿ ರಾಜೀನಾಮೆ ನೀಡಿದ್ದಾರೆ.
ಅಸ್ಸಾಂ NCHAC ಚುನಾವಣೆಯಲ್ಲಿ 30 ಸ್ಥಾನಗಳ ಪೈಕಿ 25 ಸ್ಥಾನವನ್ನು ಬಿಜೆಪಿ ಗೆದ್ದುಕೊಂಡಿದೆ. ಕಾಂಗ್ರೆಸ್ ಒಂದು ಸ್ಥಾನ ಗೆಲ್ಲಲು ಸಾಧ್ಯವಾಗಿಲ್ಲ. ಈ ಫಲಿತಾಂಶ ಬಂದ 48 ಗಂಟೆಯಲ್ಲಿ ಅಸ್ಸಾಂ ಕಾಂಗ್ರೆಸ್ ಹಾಗೂ ರಾಷ್ಟ್ರೀಯ ಕಾಂಗ್ರೆಸ್‌ಗೆ ಬಹುದೊಡ್ಡ ಆಘಾತ ಎದುರಾಗಿದೆ. ಅಪುರ್ಬ ಕುಮಾರ್ ರಾಜೀನಾಮೆ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆ ತಂದಿದೆ. ಮಣಿಪುರದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಚಾಲನೆ ಸಿಕ್ಕಿದೆ. ಆದರೆ ಚಾಲನೆ ಸಿಕ್ಕಿದ ಬೆನ್ನಲ್ಲೇ ಅಸ್ಸಾಂನಲ್ಲಿ ಕಾಂಗ್ರೆಸ್ ಅಲ್ಲೋಲಕಲ್ಲೋಲವಾಗಿದೆ.
ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ ಮಿಲಿಂದ್ ದಿಯೋರಾ: ಇಂದು ಏಕನಾಥ್ ಶಿಂಧೆ ಬಣ ಶಿವಸೇನೆಗೆ ಸೇರ್ಪಡೆ!
ಕಾಂಗ್ರೆಸ್ ಪಕ್ಷದಲ್ಲಿ ದೂರದೃಷ್ಟಿ ಕೊರತೆ ಕಾಣಿಸುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು ಕಠಿಣ ಪರಿಶ್ರಮ ಪಡುತ್ತಿದ್ದಾರೆ. ಆದರೆ ಅವರನ್ನು ಗುರುತಿಸಿವು ಕೆಲಸವಾಗುತ್ತಿಲ್ಲ. ಒಡೆದು ಆಳುವ ನೀತಿಯಲ್ಲೇ ರಾಜಕಾರಣ ಮಾಡುತ್ತಿದೆ. ಜನಸಾಮಾನ್ಯರ ಪರ ಧ್ವನಿ ಎತ್ತಿ ಅವರಿಗಾಗಿ ನೀತಿಗಳನ್ನು ರಚಿಸುವ ಕಾರ್ಯದಲ್ಲಿ ಕಾಂಗ್ರೆಸ್ ಕೆಲಸ ಮಾಡುತ್ತಿಲ್ಲ. ಪಕ್ಷದ ಏಳಿಗೆ ಒಗ್ಗಟ್ಟಾದ ಪರಿಶ್ರಮವಿಲ್ಲ. ಕಾಂಗ್ರೆಸ್ ಪ್ರತಿ ಕ್ಷೇತ್ರದಲ್ಲಿ ಗಂಭೀರವಾಗಿ ಆಲೋಚಿಸುವಲ್ಲಿ ಹಿಂದೆ ಬಿದ್ದಿದೆ ಎಂದು ಅಪುರ್ಬ ಕುಮಾರ್ ಬಟ್ಟಾಚಾರ್ಜಿ ಹೇಳಿದ್ದಾರೆ.
ಅಸ್ಸೊಮ್ ಘನ ಪರಿಷದ್ ಪಕ್ಷದಲ್ಲಿದ್ದ ಅಪುರ್ಬ ಕುಮಾರ್ 2013ರಲ್ಲಿ ಕಾಂಗ್ರೆಸ್ ಸೇರಿಕೊಂಡರು. ಸುದೀರ್ಘ ವರ್ಷಗಳ ಕಾಲ ಕಾಂಗ್ರೆಸ್‌ನಲ್ಲಿ ಹಲವು ಜವಾಬ್ದಾರಿ ನಿರ್ವಹಿಸಿದ್ದಾರೆ. ಇದೀಗ ಅಪುರ್ಬ ಕುಮಾರ್ ಮತ್ತೆ ಅಸ್ಸೊಮ್ ಘನ ಪರಿಷದ್ ಪಕ್ಷಕ್ಕೆ ಮರಳು ಸಾಧ್ಯತೆ ಇದೆ. ವಿಶೇಷ ಅಂದರೆ ಅಸ್ಸೋಮ್ ಘನ ಪರಿಷದ್ ಪಕ್ಷ, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಪಕ್ಷವಾಗಿದೆ.
ನಾವು ರಾಮಭಕ್ತರೇ ಆದರೆ ರಾಮಮಂದಿರ ಉದ್ಘಾಟನೆಗೆ ಯಾಕೆ ಹೋಗೊಲ್ಲಂದ್ರೆ..; ಮಾಜಿ ಸಚಿವ ಎಚ್ ಆಂಜನೇಯ ಹೇಳಿದ್ದೇನು?