ನವದೆಹಲಿ(ಆ.11): ಬೆಂಗಳೂರು ಮೂಲದ 22 ವರ್ಷದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್‌)ಯ ಹಾಸ್ಟೆಲ್‌ನ 19ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ.

2018ನೇ ಬ್ಯಾಚಿನ ವಿಕಾಸ್‌ ಎಂಬ ಎಂಬಿಬಿಎಸ್‌ ವಿದ್ಯಾರ್ಥಿ ಮಾನಸಿಕ ಸಮಸ್ಯೆ ಎದುರಿಸುತ್ತಿದ್ದ ಹಿನ್ನೆಲೆಯಲ್ಲಿ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದ. ಈ ವೇಳೆ ಆಸ್ಪತ್ರೆಯ ವಾರ್ಡಿನಿಂದ ಅರ್ಧ ಗಂಟೆ ವಿರಾಮ ಬಯಸಿದ್ದ. ಏಮ್ಸ್‌ ಹಾಸ್ಟೆಲ್‌ನ 19ನೇ ಮಹಡಿಗೆ ತೆರಳಿ ಅಲ್ಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಏಮ್ಸ್‌ ಮೂಲಗಳು ತಿಳಿಸಿವೆ.

ವಿದ್ಯಾರ್ಥಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದ ಮೃತಪಟ್ಟಿದ್ದಾನೆ ಪೊಲೀಸ್‌ ಉಪ ಆಯುಕ್ತ ಅತುಲ್‌ ಕುಮಾರ್‌ ಠಾಕೂರ್‌ ತಿಳಿಸಿದ್ದಾರೆ.