Asianet Suvarna News Asianet Suvarna News

ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

38 ವರ್ಷದ ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. 

men jumped into sea from atal setu cctv video goes viral akb
Author
First Published Jul 25, 2024, 3:15 PM IST | Last Updated Jul 25, 2024, 3:15 PM IST

ನವೀ ಮುಂಬೈ: 38 ವರ್ಷದ ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.  ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ. ಸೇತುವೆಯಿಂದ ಕೆಳಗೆ ಹಾರಿದವರನ್ನು ಡೊಂಬಿವಿಲಿಯ ಪಲ್ಲವ ನಗರದ ನಿವಾಸಿ  ಕರ್ತುರಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದರು.

ಮಧ್ಯಾಹ್ನ 12.35ರ ಸುಮಾರಿಗೆ ಇವರು ತಮ್ಮ ಕಾರಿನಲ್ಲಿ ಆಟಲ್ ಸೇತು ಬ್ರಿಡ್ಜ್ ಮೇಲೆ ಬಂದಿದ್ದು, ಸೇತುವೆ ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ.  ಇದು  ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಟೋಲ್ ಕಂಟ್ರೋಲ್‌ ರೂಮ್‌ನವರ ಗಮನಕ್ಕೆ ಬಂದಿದೆ. ಕೂಡಲೇ ಅವರು ನವಶೇವ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ. 

ಕೂಡಲೇ ಎಂಟಿಹೆಚ್‌ಎಲ್‌ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ತೊಂದರೆಯಿಂದಲೇ ಶ್ರೀನಿವಾಸ್ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಾರಿನಲ್ಲಿ ಕೇವಲ ತನ್ನ ಪರ್ಸ್ ಮಾತ್ರ ಬಿಟ್ಟು ಶ್ರೀನಿವಾಸ್ ಸಮುದ್ರಕ್ಕೆ ಹಾರಿದ್ದಾರೆ. ಈ ಪರ್ಸ್‌ನಲ್ಲಿ ಆಧಾರ್ ಕಾರ್ಡ್‌, ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಐಡಿ ಕಾರ್ಡ್ ಇತ್ತು.  ಡೆತ್‌ನೋಟ್ ಆಗಲಿ, ಫೋನ್ ಆಗಲಿ ಕಾರಿನಲ್ಲಿ ಪತ್ತೆಯಾಗಿಲ್ಲ ಎಂದ ಪೊಲೀಸ್ ಇನ್ಸ್‌ಪೆಕ್ಟರ್ ಅಂಜುಮನ್ ಬಾಗ್ವಾನ್ ಹೇಳಿದ್ದಾರೆ.

ಅಟಲ್ ಸೇತುಗೆ ನಟಿ ರಶ್ಮಿಕಾ ಮೆಚ್ಚುಗೆಗೆ ಮೋದಿ ಕೃತಜ್ಞತೆ: ನ್ಯಾಷನಲ್ ಕ್ರಶ್ ಈಗ ನ್ಯಾಷನಲಿಸ್ಟ್‌ ಎಂದು ಕಾಮೆಂಟ್

ಬಿಟೆಕ್ ಮಾಡಿದ್ದ ಶ್ರೀನಿವಾಸ್ ಮುಂಬೈನ ಲೋಧಾದಲ್ಲಿ 2023ರಲ್ಲಿ ಕೆಲ ಕಾಲ ಕೆಲಸ ಮಾಡಿದ್ದರು. ಇದಕ್ಕೂ ಮೊದಲು ಅರಬ್ ರಾಷ್ಟ್ರ ಕುವೈತ್‌ನಲ್ಲಿ ಕೆಲಸ ಮಾಡಿದ್ದರು. 2023ರಲ್ಲಿ ಮುಂಬೈಗೆ ವಾಪಸಾದ ಅವರು ಲೋಧಾ ಗ್ರೂಪ್‌ಗೆ ಕೆಲಸಕ್ಕೆ ಸೇರಿದ್ದರು. ಇದಾದ ನಂತರ ಇವರು ತಮ್ಮ ಪಾಲುದಾರರ ಜೊತೆಗೂಡಿ ಇಲೆಕ್ಟ್ರಿಕ್ ಕಂಟ್ರಾಕ್ಟ್ ಕೆಲಸ ಶುರು ಮಾಡಿದ್ದರು. ಶ್ರೀನಿವಾಸ್ ಪತ್ನಿಯಿಂದಲೂ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದು, ಶ್ರೀನಿವಾಸ್ ಈ ಹಿಂದೆಯೂ ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಜೀವ ಕಳೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಸಮಯಕ್ಕೆ ಸರಿಯಾಗಿ ಯಾರೋ ಪಾರು ಮಾಡಿದ್ದರಿಂದ ಅವರ ಜೀವ ಉಳಿದಿತ್ತು ಎಂದು ಪತ್ನಿ ಹೇಳಿದ್ದಾರೆ. 

ಶ್ರೀನಿವಾಸ್ ಕಡೆಯದಾಗಿ ಸಂಬಂಧಿಕರೊಬ್ಬರ ಜೊತೆ ಮಾತನಾಡಿದ್ದು, ಈ ವೇಳೆ ಅವರು ಸಹಜವಾಗಿ ಮಾತನಾಡಿದ್ದರು ಎಂದು  ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಇದುವರೆಗೂ ನೀರಿಗೆ ಹಾರಿದ ಶ್ರೀನಿವಾಸ್ ಅವರನ್ನು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಇದು ಮೊದಲ ಪ್ರಕರಣ ಅಲ್ಲ ಈ ಹಿಂದೆ ಮಹಿಳಾ ವೈದ್ಯರೊಬ್ಬರು ಅಟಲ್ ಸೇತುವಿನಿಂದ ಕೆಳಗೆ ಹಾರಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದರು. 

 

ಆಟಲ್ ಸೇತು ಬಗ್ಗೆ

ಈ ಆಟಲ್ ಸೇತುವನ್ನು ಆರು ತಿಂಗಳ ಹಿಂದಷ್ಟೇ ಪ್ರಧಾನಿ ಮೋದಿ ಉದ್ಘಾಟಿಸಿದ್ದರು.  ದೇಶದ ಅತೀ ಉದ್ದದ ಸೀ ಬ್ರಿಡ್ಜ್‌ ಎಂದು ಖ್ಯಾತಿ ಗಳಿಸಿರುವ ಈ ಆಟಲ್ ಸೇತು ಸೀ ಬ್ರಿಡ್ಜ್, ಮುಂಬೈನ ಸೆವ್ರಿ ಮತ್ತು ರಾಯಗಡ ಜಿಲ್ಲೆಯ ನ್ಹವಾ ಶೇವಾ ಪ್ರದೇಶದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ. ಎಂಟಿಎಚ್‌ಎಲ್ ಎಂದು ಕರೆಯಲಾಗುವ ಈ ಸೇತುವೆ ಯೋಜನೆ 21.8 ಕಿಲೋಮೀಟರ್‌ ಉದ್ದದ  ಸಮುದ್ರ ಸೇತುವೆಯಾಗಿದ್ದು, ಅಂದಾಜು 17, 843 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಸಮುದ್ರದ ಮೇಲೆ 16.5 ಕಿಲೋಮೀಟರ್‌ ಹಾಗೂ ಉಳಿದ 5.5 ಕಿಲೋಮೀಟರ್‌ ಮಾರ್ಗ ಭೂಮಿಯ ಮೇಲಿದೆ. ಅಟಲ್‌ ಸೇತು ಎಂದು ಕರೆಸಿಕೊಳ್ಳುವ ಈ ಸೇತುವೆಯು ನವಿ ಮುಂಬೈ ತುದಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 4B ಯಲ್ಲಿ ಸೆವ್ರಿ, ಶಿವಾಜಿ ನಗರ, ಜಸ್ಸಿ ಮತ್ತು ಚಿರ್ಲೆಯಲ್ಲಿ ಇಂಟರ್‌ಚೇಂಜ್‌ಗಳನ್ನು ಹೊಂದಿರುತ್ತದೆ. ಇದು ರಾಜ್ಯದ ಎರಡು ದೊಡ್ಡ ನಗರಗಳಾದ ಮುಂಬೈ ಹಾಗೂ ಪುಣೆಗೆ ಸಂಪರ್ಕಿಸುವ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಗೆ ಲಿಂಕ್‌ ಆಗಿಯೂ ಸಂಪರ್ಕ ಕಲ್ಪಿಸುತ್ತದೆ.

ಅಟಲ್ ಸೇತುಯಿಂದ ಕೆಳಗೆ ಹಾರಿದ ಮಹಿಳಾ ಡಾಕ್ಟರ್; ಸೂಸೈಡ್ ನೋಟ್‌ನಲ್ಲೇನಿತ್ತು?

Latest Videos
Follow Us:
Download App:
  • android
  • ios