ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ ಮಿಲಿಂದ್ ದಿಯೋರಾ: ಇಂದು ಏಕನಾಥ್ ಶಿಂಧೆ ಬಣ ಶಿವಸೇನೆಗೆ ಸೇರ್ಪಡೆ!
ನಾನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ಪಕ್ಷದೊಂದಿಗೆ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದ್ದೇನೆ ಎಂದು ಮಿಲಿಂದ್ ದಿಯೋರಾ ಹೇಳಿದ್ದಾರೆ.
ನವದೆಹಲಿ (ಜನವರಿ 14, 2024): ಹಿರಿಯ ನಾಯಕ ಮಿಲಿಂದ್ ದಿಯೋರಾ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಇಂದು ಸೇರುವ ನಿರೀಕ್ಷೆಯಿದೆ. ಈ ಮೂಲಕ ಇಂಡಿಯಾ ಮೈತ್ರಿಕೂಟದಿಂದ ಎನ್‌ಡಿಎ ಮೈತ್ರಿಕೂಟಕ್ಕೆ ಕಾಂಗ್ರೆಸ್ ಹಿರಿಯ ನಾಯಕರಾಗಿದ್ದ ಮಿಲಿಂದ್ ದಿಯೋರಾ ಸೇರ್ಪಡೆಯಾಗಲಿದ್ದಾರೆ ಎಂಬುದು ಬಹುತೇಕ ಖಚಿತವಾಗಿದೆ.
ನಾನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ಪಕ್ಷದೊಂದಿಗೆ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದ್ದೇನೆ ಎಂದು ಮಿಲಿಂದ್ ದಿಯೋರಾ ಎಕ್ಸ್ (ಈ ಹಿಂದಿನ ಟ್ವಿಟ್ಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ. ಎಲ್ಲಾ ನಾಯಕರು, ಸಹೋದ್ಯೋಗಿಗಳು ಮತ್ತು ಕಾರ್ಯಕರ್ತರಿಗೆ ವರ್ಷಗಳಲ್ಲಿ ಅವರ ಅಚಲ ಬೆಂಬಲಕ್ಕಾಗಿ ನಾನು ಕೃತಜ್ಞನಾಗಿದ್ದೇನೆ ಎಂದೂ ಅವರು ಹೇಳಿದರು.
ಇದನ್ನು ಓದಿ: ಮೋದಿ ಹೆಸರು ತುಂಬಾ ಪವರ್‌ಫಲ್; ಪ್ರಚಾರದಲ್ಲಿ ಖರ್ಗೆ, ರಾಹುಲ್ ಸಹ ಸಾಟಿಯಲ್ಲ: ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ
2004 ಮತ್ತು 2009 ರಲ್ಲಿ ಮುಂಬೈ ದಕ್ಷಿಣ ಕ್ಷೇತ್ರವನ್ನು ಕಾಂಗ್ರೆಸ್ ಹಿರಿಯ ನಾಯಕ ಮುರಳಿ ದಿಯೋರಾ ಪುತ್ರ ಮಿಲಿಂದ್ ದಿಯೋರಾ ಗೆದ್ದಿದ್ದರು. ಆದರೆ, 2014 ಮತ್ತು 2019 ರ ನಂತರದ ಚುನಾವಣೆಯಲ್ಲಿ ಶಿವಸೇನಾ (ಅವಿಭಜಿತ) ನಾಯಕ ಅರವಿಂದ್ ಸಾವಂತ್ ವಿರುದ್ಧ ಸೋತು 2ನೇ ಸ್ಥಾನ ಪಡೆದುಕೊಂಡಿದ್ದರು.
ಮುಂಬೈ ದಕ್ಷಿಣ ಕ್ಷೇತ್ರವನ್ನು ಉದ್ಧವ್ ಠಾಕ್ರೆ ಬಣ ಗೆದ್ದಿರುವ ಬಗ್ಗೆ ಅವರು ಇತ್ತೀಚೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಉದ್ಧವ್ ಠಾಕ್ರೆ ನೇತೃತ್ವದ ಗುಂಪು ಶಿವಸೇನೆ (ಯುಬಿಟಿ) ವಿರೋಧ ಪಕ್ಷದ ಮೈತ್ರಿಕೂಟದ ಒಂದು ಭಾಗವಾಗಿದೆ.
ರಾಮನಿಗಾಗಿ ಅಳಿಲು ಸೇವೆಯೂ ಮಾಡದ ಕಾಂಗ್ರೆಸ್ ಯಾವ ಮುಖ ಇಟ್ಟುಕೊಂಡು ಬರ್ತಾರೆ? : ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು!
ಇನ್ನು, ಮೈತ್ರಿಕೂಟದ ಪಾಲುದಾರ ಅಂತಹ ಹೇಳಿಕೆಗಳನ್ನು ನಿಲ್ಲಿಸದಿದ್ದರೆ, ಅವರ ಪಕ್ಷವೂ ಸಹ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಬಹುದು ಎಂದು ಮಿಲಿಂದ್ ದಿಯೋರಾ ಕಳೆದ ಭಾನುವಾರ ನೀಡಿದ ವಿಡಿಯೋ ಹೇಳಿಕೆ ನೀಡಿದ್ದರು. ಈಗ ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಿದ ಬಳಿಕ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
News Hour: ನಿಲ್ಲದ 'ರಾಮ' ರಾಜಕೀಯ: ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್! ಬಿಜೆಪಿ ಆಕ್ರೋಶ