ಒಂದೆಡೆಯಿಂದ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಇದರ ನಡುವೆ ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಕೈಗೊಂಡರೂ ಕೋವಿಡ್ ಪ್ರಕರಣ ತಗ್ಗಿಲ್ಲ. ಇದೀಗ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.
ನವದೆಹಲಿ(ಮಾ.26): ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 59,118 ಹೊಸ ಕೊರೋನಾ ಪ್ರಕರಣ ದಾಖಲಾಗಿದೆ. ದೇಶದಲ್ಲಿ 2ನೇ ಅಲೆ ಆರಂಭವಾಗಿದೆ ಅನ್ನೋ ಭೀತಿ ಇದೀಗ ಅವರಿಸಿದೆ. ಇದರ ನಡುವೆ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಇದೀಗ ರಾಜ್ಯ ಸರ್ಕಾರಗಳಿಗೆ ಕಟ್ಟುು ನಿಟ್ಟಿನ ಕ್ರಮಕ್ಕೆ ಆದೇಶಿಸಿದೆ. ಅದರಲ್ಲೂ ಹೋಳಿ, ಈದ್ ಸೇರಿದಂತೆ ಧಾರ್ಮಿಕ ಕಾರ್ಯಕ್ರಮ, ಜಾತ್ರೆಗಳಲ್ಲಿ ಹೆಚ್ಚಿನ ಮಂದಿ ಸೇರುವುದನ್ನು ನಿರ್ಬಂಧಿಸಲು ವಿಧಿಸಿದೆ.
ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ ಆರ್ಭಟ: ಇಲ್ಲಿದೆ ಮಾ.26ರ ಅಂಕಿ-ಸಂಖ್ಯೆ
ಧಾರ್ಮಿಕ ಕಾರ್ಯಕ್ರಮಗಳು, ಜಾತ್ರೆಗಳಲ್ಲಿ ಹೆಚ್ಚಿನ ಜನ ಸೇರುತ್ತಿರುವುದರಿಂದ ಕೊರೋನಾ ಮತ್ತಷ್ಟು ಹೆಚ್ಚಾಗುವ ಭೀತಿ ಇದೆ. ಹೀಗಾಗಿ ನಿರ್ಬಂಧ ಅಗತ್ಯ ಎಂದು ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಅಜಯ್ ಭಲ್ಲಾ ಹೇಳಿದ್ದಾರೆ. ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಈ ಕುರಿತು ಕಠಿಣ ನಿಲು ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಕಾರ್ಯಕ್ರಮಗಳಿಗೆ ಜನ ಸೇರುವಿಕೆ ಮಿತಿ, ಸಾಮಾಜಿಕ ಅಂತರ, ಮಾಸ್ಕ್ ಧಾರಣೆ ಸೇರಿದಂತೆ ಕೊರೋನಾ ಮಾರ್ಗಸೂಚಿ ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಗೃಹ ಇಲಾಖೆ ಹೇಳಿದೆ. ಹೆಚ್ಚಿನ ಜನಸಂದಣಿ ಪ್ರದೇಶಗಳು ಕೊರೋನಾ ಹಾಟ್‍ಸ್ಪಾಟ್ ಆಗದಂತೆ ತಡೆಯಲು ಎಲ್ಲಾ ಸರ್ಕಾರಗಳು ತಡೆಯಬೇಕು ಎಂದು ಕೇಂದ್ರ ಹೇಳಿದೆ.
