ಅಪಾಯಿಂಟ್‌ಮೆಂಟ್‌ ತೆಗೆದುಕೊಳ್ಳಲು ಹೇಳಿದ್ದಕ್ಕೆ  ಮಿಜೋರಾಂ ಸಿಎಂ ಝೋರಮ್ತಂಗಾ ಅವರ ಪುತ್ರಿ ವೈದ್ಯರ ಮೇಲೆ ಹಲ್ಲೆ ಮಾಡಿದ ಘಟನೆ ಇಂಪಾಲದಲ್ಲಿ ನಡೆದಿದ್ದು, ಘಟನೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಅಪಾಯಿಂಟ್‌ಮೆಂಟ್‌ ತೆಗೆದುಕೊಳ್ಳಲು ಹೇಳಿದ್ದಕ್ಕೆ ಮಿಜೋರಾಂ ಸಿಎಂ ಝೋರಮ್ತಂಗಾ ಅವರ ಪುತ್ರಿ ವೈದ್ಯರ ಮೇಲೆ ಹಲ್ಲೆ ಮಾಡಿದ ಘಟನೆ ಇಂಪಾಲದಲ್ಲಿ ನಡೆದಿದ್ದು, ಘಟನೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ದೇಶಾದ್ಯಂತ ವೈದ್ಯರು ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಸಿಎಂ ಝೋರಮ್ತಂಗಾ

ವೈದ್ಯರನ್ನು ಭೇಟಿ ಮಾಡುವುದಕ್ಕೆ ಮೊದಲೇ ಅವಧಿ ನಿಗದಿ ಮಾಡಿಕೊಳ್ಳಬೇಕು ಎಂದು ಹೇಳಿದ್ದಕ್ಕೆ ವೈದ್ಯನ ಮೇಲೆ ಮಿಜೋರಾಂ ಮುಖ್ಯಮಂತ್ರಿ ಝೋರಮ್ತಂಗಾ ಅವರ ಪುತ್ರಿ ಹಲ್ಲೆ ನಡೆಸಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದಂತೆ ಸ್ವತಃ ಮುಖ್ಯಮಂತ್ರಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.

Scroll to load tweet…

ಸಿಎಮ ಪುತ್ರಿ ಮಿಲಾರಿ ಚಂಗ್ತೆ ಕಳೆದ ಬುಧವಾರ ಚರ್ಮ ವೈದ್ಯರನ್ನು ಭೇಟಿ ಮಾಡಲು ಹೋಗಿದ್ದಾರೆ. ಆದರೆ ಮೊದಲೇ ಅವಧಿ ನಿಗದಿ ಮಾಡಿಕೊಂಡು ಬರಬೇಕು ಎಂದು ಹೇಳಿದ್ದಕ್ಕೆ ಕೋಪಗೊಂಡು ವೈದ್ಯನ ಮೇಲೇ ಹಲ್ಲೆ ನಡೆಸಿದ್ದಾರೆ. ಈ ವಿಡಿಯೋ ಶನಿವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಬಳಿಕ ರಾಜ್ಯಾದ್ಯಂತ ವೈದ್ಯರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಕಪ್ಪು ಪಟ್ಟಿಧರಿಸಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿರುವ ಮುಖ್ಯಮಂತ್ರಿ ಝೋರಮ್ತಂಗಾ, ತನ್ನ ಮಗಳು ಹಲ್ಲೆ ಮಾಡಿದ ವೈದ್ಯರನ್ನು ಭೇಟಿಯಾಗಿ ಕ್ಷಮೆ ಕೇಳಿದ್ದಾಗಿ ಹೇಳಿದ್ದಾರೆ. ಇದಕ್ಕೂ ಮೊದಲು ಮುಖ್ಯಮಂತ್ರಿ ಸೋದರನೂ ಸಹ ಸಾರ್ವಜನಿಕವಾಗಿ ಕ್ಷಮಾಪಣಾ ಪತ್ರ ಬರೆದಿದ್ದರು.