ಉತ್ತರ ಪ್ರದೇಶದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ಭರ್ಜರಿ ಗೆಲುವು ಸಾಧಿಸಿದೆ. ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ನಿರ್ಣಾಯಕ ಗೆಲುವು ಪಡೆದುಕೊಂಡಿದೆ.

ವಾರಣಾಸಿ: ದೇಶದಲ್ಲಿ ನಾಲ್ಕು ರಾಜ್ಯಗಳ 28 ಮೇಲ್ಮನೆ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟ ಬರೋಬ್ಬರಿ 16 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ಪಡೆದುಕೊಂಡಿದೆ. ಆದರೆ ಉತ್ತರ ಪ್ರದೇಶದಲ್ಲಿ ಮಾತ್ರ ಬಿಜೆಪಿಗೆ ಯಾರು ಊಹೆ ಮಾಡದ ಬಿಗ್ ಶಾಕ್ ಎದುರಾಗಿದೆ. ಹೌದು, ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿನಿಧಿಸಿವು ವಾರಣಾಸಿ ಕ್ಷೇತ್ರದಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ಅಭ್ಯರ್ಥಿ ಗೆದ್ದು ಬೀಗಿದ್ದಾರೆ.

ಸಮಾಜವಾದಿ ಪಕ್ಷಕ್ಕೆ ಬಿಗ್ ಬೂಸ್ಟ್

ವಾರಾಣಸಿ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪ್ರಮೋದ್ ಮಿಶ್ರಾ ಕಣಕ್ಕೆ ಇಳಿದಿದ್ದರು. ಸಮಾಜವಾದಿ ಪಕ್ಷದಿಂದ ಲಾಲ್ ಬಿಹಾರಿ ಯಾದವ್ ಸ್ಪರ್ಧೆ ಮಾಡಿದ್ದರು. ಚುನಾವಣೆಯಲ್ಲಿ ಎಸ್ಪಿ ಅಭ್ಯರ್ಥಿ ಗೆಲುವು ಪಡೆದುಕೊಂಡಿದ್ದಾರೆ. ವಿಶೇಷ ಎಂದರೆ ವಾರಣಾಸಿ ಪದವೀಧರರ ಕ್ಷೇತ್ರದಲ್ಲೂ ಸಮಾಜವಾದಿ ಪಕ್ಷದ ಅಭ್ಯರ್ಥಿ ಗೆಲುವು ಪಡೆದುಕೊಂದಿದ್ದು, ಇದರೊಂದಿಗೆ ಉತ್ತರ ಪ್ರದೇಶ ಬಿಜೆಪಿಗೆ ಡಬಲ್ ಶಾಕ್ ಎದುರಾಗಿದೆ.

ಹೌದು, ಪದವೀಧರ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದಿಂದ ಕಣಕ್ಕೆ ಇಳಿದಿದ್ದ ಆಕಾಶ್ ಅಗರ್ವಾಲ್ ಗೆಲುವು ಪಡೆದುಕೊಂಡಿದ್ದಾರೆ. ಗೆಲುವು ಪಡೆದ ಪಕ್ಷದ ನಾಯಕರಿಗೆ ಅಖಿಲೇಶ್ ಯಾದವ್ ಶುಭಾಶಯಗಳನ್ನು ತಿಳಿಸಿದ್ದು, 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಮಾಜವಾದಿ ಪಕ್ಷಕ್ಕೆ ಇದರಿಂದ ಬಿಗ್ ಬೂಸ್ಟ್ ಸಿಕ್ಕಿದೆ.

ಉತ್ತರ ಪ್ರದೇಶದ 11 ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಆರು ಸ್ಥಾನಗಳಲ್ಲಿ ಗೆಲುವು ಪಡೆದುಕೊಂಡಿದೆ. ಉಳಿದಂತೆ 5 ಸ್ಥಾನಗಳಲ್ಲಿ ಸಮಾಜವಾದಿ ಪಕ್ಷ ಗೆಲುವು ಪಡೆದುಕೊಂಡಿದೆ. ಕಳೆದ ಚುನಾವಣೆಗೆ ಹೋಲಿಕೆ ಮಾಡಿದರೆ ಎಸ್ಪಿಗೆ ಈ ಬಾರಿ ಹೆಚ್ಚುವರಿಯಾಗಿ ಎರಡು ಸ್ಥಾನಗಳು ಸಿಕ್ಕಿದೆ. ಸಮಾಜವಾದಿ ಪಕ್ಷ ಗೆದ್ದಿರುವ ಐದು ಕ್ಷೇತ್ರಗಳಲ್ಲಿ ಎರಡು ಕ್ಷೇತ್ರಗಳು ವಾರಣಾಸಿಯ ಎರಡು ಸ್ಥಾನಗಳಲ್ಲಿ ಗೆಲುವು ಪಡೆದುಕೊಂಡಿರುವುದು ವಿಶೇಷ ಸಾಧನೆಯಾಗಿದೆ.

ಕಾಂಗ್ರೆಸ್ ಧೂಳಿಪಟ

ಇನ್ನು, ಮೇಲ್ಮನೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಗಮನಾರ್ಹ ಸಾಧನೆ ಮಾಡಿದ್ದರೆ, ಕಾಂಗ್ರೆಸ್ ಪಕ್ಷಕ್ಕೆ ಹೀನಾಯ ಸೋಲಾಗಿದೆ. 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಒಂದು ಸ್ಥಾನವನ್ನು ಗೆಲ್ಲಲು ವಿಫಲವಾಗಿದೆ. ಆದರೆ ಬಿಹಾರದಲ್ಲಿ ಹೊಸ ಪಕ್ಷ ಸ್ಥಾಪನೆ ಮಾಡಿ ಚುನಾವಣೆ ಎದುರಿಸಿದ್ದ ಪ್ರಶಾಂತ್ ಕಿಶೋಕ್ ಪಕ್ಷ ಒಂದು ಸ್ಥಾನದಲ್ಲಿ ಗೆಲುವು ಪಡೆದುಕೊಂಡಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಪರ್ಧಿಸಿದ್ದ ನಾಲ್ಕು ಸ್ಥಾನಗಳ ಪೈಕಿ ನಾಲ್ಕರಲ್ಲೂ ಸೋಲಾಗಿದ್ದು, ಬಿಹಾರದಲ್ಲಿಯೂ ಇದೇ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ನಡೆದ ಎಂಟು ಸ್ಥಾನಗಳ ಪೈಕಿ ಐದು ಸ್ಥಾನಗಳಿಗೆ ಸ್ಪರ್ಧೆ ಮಾಡಿದ್ದ ಕಾಂಗ್ರೆಸ್, ಐದರಲ್ಲೂ ಸೋಲುಂಡಿದೆ. ಮಹಾರಾಷ್ಟ್ರದಲ್ಲಿಯೂ ಪರಿಸ್ಥಿತಿ ಭಿನ್ನವಾಗಿಲ್ಲ. ಮಹಾರಾಷ್ಟ್ರದ ಐದು ಸ್ಥಾನಗಳ ಪೈಕಿ ಮೂರು ಸ್ಥಾನಗಳಿಗೆ ಸ್ಪರ್ಧೆ ಮಾಡಿದ್ದ ಕಾಂಗ್ರೆಸ್, ಅಲ್ಲಿಯೂ ಎರಡು ಸ್ಥಾನಗಳಲ್ಲಿ ಸೋಲುಂಡು ಒಂದು ಸ್ಥಾನದಲ್ಲಿ ಗೆಲುವು ಪಡೆದುಕೊಂಡಿದೆ. ಇದರೊಂದಿಗೆ 11 ಸ್ಥಾನಗಳಿಗೆ ಸ್ಪರ್ಧೆ ಮಾಡಿದ್ದರೆ ಇದರಲ್ಲಿ 11ರಲ್ಲಿ ಸೋಲುಂಡು, ಕೇವಲ ಒಂದು ಸ್ಥಾನದಲ್ಲಿ ಗೆಲುವು ಪಡೆದುಕೊಂಡಿದೆ.