ಮೋದಿ ಸಮುದಾಯ ಟೀಕಿಸಿ 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇದೀಗ ಗುಜರಾತ್ ಹೈಕೋರ್ಟ್ ಶಾಕ್ ನೀಡಿದೆ. ಈ ಪ್ರಕರಣ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ರಾಹುಲ್ ಗಾಂಧಿಗೆ ಹಿನ್ನಡೆಯಾಗಿದೆ.
ಅಹಮ್ಮದಾಬಾದ್(ಮೇ.02): ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಹಿನ್ನಡೆಯಾಗಿದೆ. ಮೋದಿ ಸಮುದಾಯ ನಿಂದಿಸಿದ ಆರೋಪದಡಿ ಸೂರತ್ ಕೋರ್ಟ್‌ನಿಂದ 2 ವರ್ಷ ಜೈಲು ಶಿಕ್ಷೆಗೆ ಒಳಗಾದ ರಾಹುಲ್ ಗಾಂಧಿ ಸಂಸದ ಸ್ಥಾನದಿಂದಲೂ ಅನರ್ಹರಾಗಿದ್ದಾರೆ. ಈ ಪ್ರಕರಣಕ್ಕೆ ತಡೆ ನೀಡಬೇಕು ಎಂದು ಕೋರಿ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಗುಜರಾತ್ ಹೈಕೋರ್ಟ್ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ಸಾಧ್ಯವಿಲ್ಲ ಎಂದಿದೆ. ಈ ಕುರಿತು ಜೂನ್ 4ರ ಬಳಿಕ ತೀರ್ಪು ನೀಡುವುದಾಗಿ ಗುಜರಾತ್ ಹೈಕೋರ್ಟ್ ಹೇಳಿದೆ. ಇದರಿಂದ ರಾಹುಲ್ ಗಾಂಧಿ ಅನರ್ಹರಾಗಿಯೇ ಮುಂದುವರಿಯಲಿದ್ದಾರೆ.
ಸೂರತ್ ಕೋರ್ಟ್ ನೀಡಿದ ತೀರ್ಪಿನ ವಿರುದ್ದ ಗುಜರಾತ್ ಹೈಕೋರ್ಟ್‌ನಲ್ಲಿ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದಾರೆ. ಇದರ ಜೊತೆಗೆ ಗುಜರಾತ್ ಹೈಕೋರ್ಟ್ ಈ ತೀರ್ಪು ಬರುವವರೆಗೂ ಪ್ರಕರಣಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಗುಜರಾತ್ ಹೈಕೋರ್ಟ್ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ. ಇಷ್ಟೇ ಅಲ್ಲ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯ ತೀರ್ಪು ಜೂನ್ 4ರ ಬಳಿಕ ಪ್ರಕಟಿಸುವುದಾಗಿ ಹೇಳಿದೆ.
ಹೇಳಿಕೆಗಳು ಎಲ್ಲೆ ಮೀರಬಾರದು: ರಾಹುಲ್ ಗಾಂಧಿಗೆ ಹೈಕೋರ್ಟ್ ಸಲಹೆ
ಮಾನನಷ್ಟಪ್ರಕರಣದಲ್ಲಿ ತಮಗೆ ವಿಧಿಸಿರುವ 2 ವರ್ಷ ಜೈಲು ಶಿಕ್ಷೆಗೆ ತಡೆಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸೂರತ್ ಕೋರ್ಚ್ ತಿರಸ್ಕರಿಸಿದ ಕಾರಣ, ಗುಜರಾತ್ ಹೈಕೋರ್ಟ್‌ಗೆ ಮನವಿ ಮಾಡಿದ್ದರು. ರಾಹುಲ್ ತಮ್ಮ ಮನವಿಯಲ್ಲಿ, ಸೂರತ್ ವಿಚಾರಣಾ ನ್ಯಾಯಾಲಯವು ತನ್ನನ್ನು ಕಠೋರವಾಗಿ ನಡೆಸಿಕೊಂಡಿದೆ. ಇದರಿಂದ ನನ್ನ ಸಂಸದ ಸ್ಥಾನದ ಮೇಲೆ ಅಗಾಧ ಪರಿಣಾಮ ಬೀರಿದೆ’ ಎಂದು ರಾಹುಲ್ ದೂರಿದ್ದರು. ಆದರೆ ಈ ಪ್ರಕರಣ ವಿಚಾರಣೆ ತೀರ್ಪು ಜೂನ್ 4ರ ಬಳಿಕ ಪ್ರಕಟವಾಗಲಿದೆ.
2018ರಲ್ಲಿ ಕೋಲಾರದಲ್ಲಿ ಚುನಾವಣಾ ಪ್ರಚಾರದ ವೇಳೆ ‘ಮೋದಿ ಉಪನಾಮ ಹೊಂದಿರುವವರೆಲ್ಲ ಕಳ್ಳರೇ ಆಗಿರುತ್ತಾರೆ’ ಎಂದು ರಾಹುಲ್ ಹೇಳಿದ್ದರು. ಇದರ ವಿರುದ್ಧ ಸಲ್ಲಿಸಲಾಗಿದ್ದ ಮಾನನಷ್ಟಪ್ರಕರಣದಡಿ, ರಾಹುಲ್‌ಗೆ ಸೂರತ್ ಕೋರ್ಟು 2 ವರ್ಷ ಜೈಲು ಶಿಕ್ಷೆ ವಿಧಿಸಿ, ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಿತ್ತು. ಆದರೆ ಸೂರತ್ ಕೋರ್ಟು ರಾಹುಲ್ ಮೇಲ್ಮನವಿ ತಿರಸ್ಕರಿಸಿತ್ತು. ಜೈಲು ಶಿಕ್ಷೆಗೆ ಗುರಿಯಾದ ಹಿನ್ನೆಲೆ ರಾಹುಲ್ ಲೋಕಸಭೆಯಿಂದ ಅನರ್ಹಗೊಂಡರಲ್ಲದೇ ಸಂಸದರಾಗಿದ್ದ ಕಾರಣಕ್ಕೆ ತಮಗೆ ನೀಡಿದ್ದ ಸರ್ಕಾರಿ ಬಂಗಲೆಯನ್ನು ತೆರವು ಮಾಡಿದ್ದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಳ್ಳಾರಿಯನ್ನು ಜೀನ್ಸ್ ಕ್ಯಾಪಿಟಲ್ ಮಾಡುವೆ: ರಾಹುಲ್ ಗಾಂಧಿ
ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆಗೆ ನಿಯೋಜಿಸಲಾಗಿದ್ದ ಗುಜರಾತ್ ಹೈಕೋರ್ಚ್ ನ್ಯಾ ಗೀತಾ ಗೋಪಿ ಅವರು ವಿಚಾರಣೆಯಿಂದ ಹಿಂದೆ ಸರಿದಿದ್ದರು. ಈ ಪ್ರಕರಣವನ್ನು ಬೇರೆ ಪೀಠಕ್ಕೆ ವರ್ಗಾಯಿಸಿದ್ದರು.
