ಜುಲೈ 21 ರಿಂದ ಆಗಸ್ಟ್ 12 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ ನಡೆಯಲಿದೆ. ಈ ಅವಧಿಯಲ್ಲಿ ಆಪರೇಷನ್ ಸಿಂದೂರ ಸೇರಿದಂತೆ ಎಲ್ಲಾ ಪ್ರಮುಖ ವಿಚಾರಗಳನ್ನು ಚರ್ಚಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. 

ನವದೆಹಲಿ : ಆಪರೇಷನ್ ಸಿಂದೂರದ ಕುರಿತು ಚರ್ಚಿಸಲು ಕೇಂದ್ರ ಸರ್ಕಾರ ವಿಶೇಷ ಅಧಿವೇಶನವನ್ನು ಕರೆಯಬೇಕು ಎಂಬ ವಿಪಕ್ಷಗಳ ತೀವ್ರ ಒತ್ತಾಯದ ನಡುವೆಯೇ, ಕೇಂದ್ರ ಸರ್ಕಾರ ಅವರ ಬೇಡಿಕೆಯನ್ನು ತಿರಸ್ಕರಿಸಿದೆ ಹಾಗೂ ಜುಲೈ 21ರಿಂದ ಆಗಸ್ಟ್‌ 12ರವರೆಗೆ ಮಳೆಗಾಲದ ಅಧಿವೇಶನ ನಡೆಸುವುದಾಗಿ ತಿಳಿಸಿದೆ. ‘ಸಂಸತ್ತಿನ ಮಳೆಗಾಲದ ಅಧಿವೇಶನ ಜು.21ರಿಂದ ಆ.12ರವರೆಗೆ ನಡೆಯಲಿದೆ. ಆಗಲೇ ಎಲ್ಲ ಪ್ರಮುಖ ವಿಚಾರಗಳನ್ನು ಚರ್ಚಿಸಬಹುದು’ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.

‘ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಮಳೆಗಾಲದ ಅಧಿವೇಶನದ ದಿನಾಂಕವನ್ನು ಶಿಫಾರಸು ಮಾಡಿದೆ. ಅಧಿವೇಶನ ಕರೆಯುವ ಶಿಫಾರಸನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗುವುದು. ಎಲ್ಲಾ ಪ್ರಮುಖ ವಿಚಾರಗಳನ್ನೂ ಮಳೆಗಾಲದ ಅಧಿವೇಶನದಲ್ಲೇ ಚರ್ಚಿಸಲಾಗುವುದು. ಚರ್ಚಿಸಬೇಕಾದ ವಿಷಯಗಳ ಕುರಿತು ಉಭಯ ಸದನಗಳ ವ್ಯವಹಾರ ಸಲಹಾ ಸಮಿತಿಯು ನಿರ್ಧಾರ ತೆಗೆದುಕೊಳ್ಳುತ್ತದೆ’ ಎಂದು ಅವರು ತಿಳಿಸಿದರು.

ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆಯಾದ ಬೆನ್ನಲ್ಲೆ ಅಲಹಾಬಾದ್ ಹೈಕೋರ್ಟ್‌ಗೆ ವರ್ಗವಾಗಿದ್ದ ನ್ಯಾ. ಯಶವಂತ್ ವರ್ಮಾ ಅವರ ವಿರುದ್ಧ ಅಧಿವೇಶನದಲ್ಲಿ ವಾಗ್ದಂಡನೆ ಪ್ರಕ್ರಿಯೆ ಗೊತ್ತುವಳಿ ಮಂಡನೆಗೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಮೊನ್ನೆಯಷ್ಟೇ ಆಪರೇಷನ್ ಸಿಂದೂರ ಕುರಿತು ವಿಶೇಷ ಅಧಿವೇಶನ ಕರೆಯುವಂತೆ ಕಾಂಗ್ರೆಸ್ ಸೇರಿದಂತೆ ಇಂಡಿಯಾ ಕೂಟದ ಪಕ್ಷಗಳು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದವು.

ಕಾಂಗ್ರೆಸ್‌ ಕಿಡಿ:

ಇನ್ನು, 47 ದಿನವೇ ಕೇಂದ್ರ ಸರ್ಕಾರ ಮುಂಗಾರು ಅಧಿವೇಶನ ನಿಗದಿಪಡಿಸಿದ್ದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಪಹಲ್ಗಾಂ ಚರ್ಚೆಯಿಂದ ತಪ್ಪಿಸಿಕೊಳ್ಳಲು ಕೇಂದ್ರ ಪಲಾಯನ ಮಾಡುತ್ತಿದೆ ಎಂದಿದೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್, ‘ಕ್ರೂರ ಪಹಲ್ಗಾ ದಾಳಿಯ ಬಗ್ಗೆ ಚರ್ಚಿಸಲು ತಕ್ಷಣದ ವಿಶೇಷ ಅಧಿವೇಶನ ಕರೆಯಬೇಕೆಂಬ ಕಾಂಗ್ರೆಸ್ ಮತ್ತು ಇಂಡಿಯಾ ಕೂಟದ ಪಕ್ಷಗಳು ಪದೇ ಪದೇ ಮಾಡುತ್ತಿರುವ ಬೇಡಿಕೆಯಿಂದ ತಪ್ಪಿಸಿಕೊಳ್ಳಲು ಕೇಂದ್ರ ಸರ್ಕಾರ ಮುಂಗಾರು ಅಧಿವೇಶನ ಕರೆದಿದೆ. ಸಾಮಾನ್ಯವಾಗಿ ಸಂಸತ್ತಿನ ಅಧಿವೇಶನದ ದಿನಾಂಕಗಳನ್ನು ಕೆಲವು ದಿನಗಳ ಮುಂಚಿತವಾಗಿ ಘೋಷಿಸಲಾಗುತ್ತದೆ, ಆದರೆ 47 ದಿನ ಮೊದಲು ಎಂದಿಗೂ ಘೋಷಿಸಿದ್ದಿಲ್ಲ’ ಎಂದಿದ್ದಾರೆ.

ಮೋದಿ ಮಂತ್ರಿ ಪರಿಷತ್ ಸಭೆ

ನರೇಂದ್ರ ಮೋದಿ ಸರ್ಕಾರದ ಮಂತ್ರಿ ಪರಿಷತ್‌ ಸಭೆ ಬುಧವಾರ ಜರುಗಿತು. ಸಂಜೆ 4.30ಕ್ಕೆ ಆರಂಭವಾದ ಸಭೆ ರಾತ್ರಿಯವರೆಗೆ ನಡೆಯಿತು. ಪಾಕಿಸ್ತಾನದ ಮೇಲಿನದ ಭಾರತದ ಆಪರೇಷನ್ ಸಿಂದೂರದ ಬಳಿಕ ಮೊದಲ ಸಭೆ ಇದಾಗಿತ್ತು. ಮೋದಿ ಮಂತ್ರಿಮಂಡಲದ ಎಲ್ಲ ಸದಸ್ಯರು (ಸಂಪುಟ+ರಾಜ್ಯ ಮಂತ್ರಿಗಳು) ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಸಂಪುಟ ಸಹದ್ಯೋಗಿಗಳಿಗೆ ಆಪರೇಷನ್ ಸಿಂದೂರ ಕುರಿತು ಸಭೆಯಲ್ಲಿ ವಿವರಣೆ ನೀಡಿದರು. ಇದೇ ವೇಳೆ, ಮೋದಿ-3 ಸರ್ಕಾರಕ್ಕೆ ಜೂ.9ರಂದು 1 ವರ್ಷವಾಗಲಿರುವ ಕಾರಣ, ವರ್ಷಾಚರಣೆ ಹೇಗಿರಬೇಕು ಎಂಬ ರೂಪರೇಷೆಗಳನ್ನೂ ನಿರ್ಧರಿಸಲಾಯಿತು.

ಶಕ್ತಿ ಮೀರಿ ಕೆಲಸ ಮಾಡಬೇಕು

'ಗುರಿ ಸಾಧಿಸಲು ಶಕ್ತಿ ಮೀರಿ ಕೆಲಸ ಮಾಡಬೇಕು. ಸ್ವದೇಶಿಶಸ್ತ್ರ ಗಳ ಬಲ ಆಪರೇಷನ್ ಸಿಂದೂರ ವೇಳೆ ಸಾಬೀತಾಗಿದ್ದು, ಅವುಗಳ ಉತ್ಪಾದನೆಗೆ ಗಮನ ಹರಿಸಬೇಕು' ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. ಬುಧವಾರ ಸಂಜೆ ಮಂತ್ರಿ ಪರಿಷತ್ ಸಭೆಯಲ್ಲಿ ಅವರು ಮಾತನಾಡಿದರು. ಪಾಕಿಸ್ತಾನದ ಮೇಲಿನ ಭಾರತದ ಆಪರೇಷನ್ ಸಿಂದೂರದ ಬಳಿಕ

ಮೊದಲ ಸಭೆ ಇದಾಗಿತ್ತು. ಈ ವೇಳೆ ರಕ್ಷಣಾ ಸಚಿವ ರಾಜನಾಥ ಸಿಂಗ್ ಸಿಂದೂರ ಕುರಿತು ಹಾಗೂ ಇತರ ಸಚಿ ವರು ತಮ್ಮ ಖಾತೆಗಳ ಸಾಧನೆಯ ವಿವ ರಣೆ ನೀಡಿದರು. ಮೋದಿ -3 ಸರ್ಕಾ ರಕ್ಕೆಜೂ.9 ರಂದು 1 ವರ್ಷ ಸಂದಲಿದ್ದು, ಈ ವೇಳೆ 1 ವರ್ಷದಲ್ಲಿ ಸರ್ಕಾರದ ಮಾಡಿದ 5 ಮುಖ್ಯ ಸಾಧನೆಗಳ ಪ್ರಚಾರಕ್ಕೆ ನಿರ್ಧರಿಸಲಾಯಿತು. ಸಭೆ ಯಲ್ಲಿ ಸಂಪುಟ/ರಾಜ್ಯ ಸಚಿವರಿದ್ದರು.