ಭಾರತದ ಪ್ರಭಾವಿ ವ್ಯಕ್ತಿ ಪಟ್ಟಿ ಪ್ರಕಟ, ಮೋದಿ ನಂ.1, ಟಾಪ್ 10 ಪಟ್ಟಿಯಲ್ಲಿ CJI ಚಂದ್ರಚೂಡ್!

ಭಾರತದ ಅತೀ ಪ್ರಭಾವಿ ವ್ಯಕ್ತಿಗಳ ಪಟ್ಟಿ ಪ್ರಕಟಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತೆ ನಂಬರ್ 1 ಸ್ಥಾನ ಉಳಿಸಿಕೊಂಡಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯನ್ಯಾಮೂರ್ತಿ ಚಂದ್ರಚೂಡ್ ಟಾಪ್ 5 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.  ವಿಶೇಷ ಅಂದರೆ ಟಾಪ್ 10 ಪಟ್ಟಿಯಲ್ಲಿ ಬಿಜೆಪಿ ಹಾಗೂ ಆರ್‌ಎಸ್‍ಎಸ್ ನಾಯಕರೇ ಸ್ಥಾನ ಪಡೆದಿದ್ದಾರೆ.
 

Most Powerful Indian list out PM Modi continues to be number 1 CJI DY Chandrachud 4th ckm

ನವದೆಹಲಿ(ಫೆ.29)ಜಾಗತಿಕ ಮಟ್ಟದಲ್ಲೂ ಅತ್ಯಂತ ಪ್ರಭಾವಿ ನಾಯಕರಾಗಿ ಗುರಿತಿಸಿಕೊಂಡಿರುವ  ಪ್ರಧಾನಿ ನರೇಂದ್ರ ಮೋದಿ ಭಾರತದ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲೂ ಮೊದಲ ಸ್ಥಾನದಲ್ಲಿದ್ದಾರೆ. ಸತತವಾಗಿ ನಂಬರ್ 1 ಸ್ಥಾನ ಉಳಿಸಿಕೊಂಡ ಹೆಗ್ಗಳಿಕಗೆ ಮೋದಿ ಪಾತ್ರರಾಗಿದ್ದಾರೆ. ಭಾರತದ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್ 4ನೇ ಸ್ಥಾನದಲ್ಲಿದ್ದಾರೆ. ಇನ್ನು ಟಾಪ್ 10 ಪಟ್ಟಿಯಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್ ನಾಯಕರೇ ಸ್ಥಾನ ಪಡೆದಿದ್ದಾರೆ. ದಕ್ಷಿಣ ಭಾರತದ ಪ್ರಭಾವಿ ನಾಯಕರ ಪಟ್ಟಿಯಲ್ಲಿ ಸಿದ್ದರಾಮಯ್ಯ ಅಗ್ರಸ್ಥಾನದಲ್ಲಿದ್ದರೆ, ತಮಿಳುನಾಡು ಮುಖ್ಯಮಂತ್ರಿ 2 ಸ್ಥಾನ ಕೆಳಗಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಟಿಸಿದ ಪ್ರಭಾವಿ ಭಾರತೀಯ ವ್ಯಕ್ತಿಗಳ ಪಟ್ಟಿ ಇದೀಗ ಭಾರಿ ಸಂಚಲನ ಸೃಷ್ಟಿಸಿದೆ. ಮೋದಿ ಮೊದಲ ಸ್ಥಾನದಲ್ಲಿದ್ದರೆ, ಅಮಿತ್ ಶಾ 2ನೇ ಸ್ಥಾನ ಅಲಂಕರಿಸಿದ್ದಾರೆ. ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ 3ನೇ ಸ್ಥಾನದಲ್ಲಿದ್ದರೆ, ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್ 4ನೇ ಸ್ಥಾನದಲ್ಲಿದ್ದಾರೆ. ಇನ್ನು ವಿದೇಶಾಂಗ ಸಚಿವ ಎಸ್ ಜೈಶಂಕರ್ 5ನೇ ಸ್ಥಾನದಲ್ಲಿದ್ದಾರೆ.

ಪ್ರಧಾನಿ ಮೋದಿ ಮತ್ತೆ ವಿಶ್ವದ ನಂ.1 ಜನಪ್ರಿಯ ನಾಯಕ, ಜಾಗತಿಕ ಅಪ್ರೂವಲ್ ರೇಟಿಂಗ್ ಬಿಡುಗಡೆ!

ಭಾರತದ ಪ್ರಭಾವಿ ವ್ಯಕ್ತಿಗಳ ಪಟ್ಟಿ
1)ನರೇಂದ್ರ ಮೋದಿ, ಭಾರತದ ಪ್ರಧಾನ ಮಂತ್ರಿ
2)ಅಮಿತ್ ಶಾ, ಗೃಹ ಸಚಿವರು
3)ಮೋಹನ್ ಭಾಗವತ್, ಆರ್‌ಎಸ್‌ಎಸ್ ಮುಖ್ಯಸ್ಥರು
4)ಡಿವೈ ಚಂದ್ರಚೂಡ್, ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ
5)ಎಸ್ ಜೈಶಂಕರ್, ವಿದೇಶಾಂಗ ಸಚಿವ
6)ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶ ಮುಖ್ಯಮಂತ್ರಿ
7)ರಾಜನಾಥ್ ಸಿಂಗ್, ರಕ್ಷಣಾ ಮಂತ್ರಿ
8)ನಿರ್ಮಲಾ ಸೀತಾರಾಮನ್, ಹಣಕಾಸು ಸಚಿವೆ
9)ಜೆಪಿ ನಡ್ಡಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ
10) ಗೌತಮ್ ಅದಾನಿ, ಅದಾನಿ ಗ್ರೂಪ್ ಚೇರ್ಮೆನ್(ಉದ್ಯಮಿ)

ದೇಶದ 2ನೇ ಹೆಚ್ಚು ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮೊದಲ ಸ್ಥಾನದಲ್ಲಿರೋದು ಯಾರು?
 
ಉದ್ಯಮಿ ಮುಕೇಶ್ ಅಂಬಾನಿ ಪ್ರಭಾವಿ ವ್ಯಕ್ತಿ ಪಟ್ಟಿಯಲ್ಲಿ 11ನೇ ಸ್ಥಾನದಲ್ಲಿದ್ದಾರೆ. ಇನ್ನು  ಕೇಂದ್ರ ಸಚಿವ ಪಿಯೂಷ್ ಗೋಯೆಲ್, ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಆರ್‌ಬಿಐ ಗವರ್ನರ್ ಶ್ರೀಕಾಂತ್ ದಾಸ್, ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಸುಪ್ರೀಂ ಕೋರ್ಟ್ ಜಡ್ಜ್ ಸಂಜೀವ್ ಖನ್ನ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಸಚಿವ ಮಾನ್ಸುಕ್ ಮಾಂಡವಿಯಾ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ರಿಲಯನ್ಸ್ ಫೌಂಡೇಶನ್ ಮುಖ್ಯಸ್ಥೆ ನೀತಾ ಅಂಬಾನಿ, ನಟ ಶಾರುಖ್ ಖಾನ್, ಟಾಟಾ ಗ್ರೂಪ್ ಚೇರ್ಮೆನ್ ನಟರಾಜನ್ ಚಂದ್ರಶೇಕರ್, ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಇಡಿ ನಿರ್ದೇಶಕ ರಾಹುಲ್ ನವೀನ್ ನಂತರದ ಸ್ಥಾನ ಪಡೆದಿದ್ದಾರೆ.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ 35ನೇ ಸ್ಥಾನ ಪಡೆದಿದ್ದಾರೆ. ಇನ್ನು ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ 38ನೇ ಸ್ಥಾನ ಪಡೆದಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ 40ನೇ ದೇಶದ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ 40ನೇ ಸ್ಥಾನದಲ್ಲಿದ್ದಾರೆ.
 

Latest Videos
Follow Us:
Download App:
  • android
  • ios