ಅತ್ಯಾಚಾರಕ್ಕೊಳಗಾಗಿ ಕೊಲ್ಲಲ್ಪಟ್ಟ ಬಾಲಕಿಯ ತಾಯಿ ಸಿಎಂ ವಿರುದ್ಧ ಸ್ಪರ್ಧೆ | ಕೇರಳದ ವಾಳಯಾರ್‌ನಲ್ಲಿ ಕ್ರೂರವಾಗಿ ಅತ್ಯಾಚಾರಕ್ಕೊಳಗಾದ ದಲಿತ ಹೆಣ್ಮಕ್ಕಳು

ತಿರುವನಂತಪುರಂ(ಮಾ.16): ದೇಶಾದ್ಯಂತ ಸುದ್ದಿಯಾಗಿದ್ದ ದಲಿತ ಅಪ್ರಾಪ್ತ ಬಾಲಕಿಯರ ಅತ್ಯಾಚಾರ ಮತ್ತು ಕೊಲೆ ಬಗ್ಗೆ ತೀವ್ರ ಆಕ್ರೋಶ ಎದುರಾಗಿತ್ತು.

ತನ್ನಿಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ ದಯಾನೀಯ ಸಾವನ್ನು ನೋಡಿದ ತಾಯಿ ಇದೀಗ ಕೇರಳ ಸಿಎಂ ಪಿಣರಾಯ್ ವಿಜಯನ್ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

ಬಿಜೆಪಿ ಸಂಸದ ರಾಮ್‌ ಸ್ವರೂಪ್ ಶರ್ಮಾ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

2017 ರಲ್ಲಿ ವಲಾಯರ್‌ನಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ ಇಬ್ಬರು ಅಪ್ರಾಪ್ತ ದಲಿತ ಸಹೋದರಿಯರ ತಾಯಿ ಸ್ವತಂತ್ರ ಅಭ್ಯರ್ಥಿಯಾಗಿ ಕಣ್ಣೂರಿನ ಧರ್ಮದೋಮ್ ಕ್ಷೇತ್ರದಿಂದ ಕೇರಳ ಸಿಎಂ ಪಿನರಾಯ್ ವಿಜಯನ್ ವಿರುದ್ಧ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಪ್ರಕರಣದ ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳನ್ನು ರಕ್ಷಿಸಿದ ಆರೋಪದ ಮೇಲೆ ಎಲ್ಡಿಎಫ್ ಸರ್ಕಾರದ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಸ್ಪರ್ಧಿಸುತ್ತಿರುವುದಾಗಿ ಅವರು ಹೇಳಿದ್ದಾರೆ.

13 ಮತ್ತು ಒಂಬತ್ತು ವರ್ಷ ವಯಸ್ಸಿನ ಇಬ್ಬರು ದಲಿತ ಬಾಲಕಿಯರು ತಮ್ಮ ಒಂದು ಕೋಣೆಯ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ಅಪ್ರಾಪ್ತ ಬಾಲಕಿಯರು ತಮ್ಮ ಸಾವಿಗೆ ಮುನ್ನ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದರು ಎಂದು ಖಚಿತವಾಗಿತ್ತು.