ಲಾಹೋರ್(ಜ.08);  ಮುಂಬೈ ದಾಳಿಯನ್ನು ಯಾವೊಬ್ಬ ಭಾರತೀಯನೂ ಮರೆಯಲಾರ. ಇಷ್ಟೇ ಅಲ್ಲ ಈ ಘಟನೆಗೆ ಕಾರಣರಾದವರ ಮೇಲೆ ಭಾರತೀಯರಿಗೆ ಮುಗಿಯದಷ್ಟು ಪ್ರತೀಕಾರವಿದೆ. 166 ಮಂದಿ ಸಾವಿಗೆ ಕಾರಣರಾದ 26/11  ಮುಂಬೈಯ ಮಾಸ್ಟರ್ ಮೈಂಡ್, ಲಷ್ಕರ್ ಇ ತೈಬಾ ಸಂಘಟನೆ ಕಮಾಂಡರ್, ಉಗ್ರ ಝಾಕಿ ಉರ್ ರೆಹಮಾನ್ ಲಖ್ವಿಗೆ ಪಾಕಿಸ್ತಾನ ನ್ಯಾಯಾಲಯ 15 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಉಗ್ರರ ಪೋಷಣೆ ನಿಲ್ಲಿಸಲು ಪಾಕ್ ವಿಫಲ; ಗ್ರೇ ಪಟ್ಟಿಯಲ್ಲಿ ಪಾಕಿಸ್ತಾನ ವಿಲ ವಿಲ!.

ಮುಂಬೈ ದಾಳಿಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ   ಉಗ್ರ ಝಾಕಿ ಉರ್ ರೆಹಮಾನ್ ಲಖ್ವಿಯನ್ನು ಪಾಕಿಸ್ತಾನ ಪೊಲೀಸರು ಬಂಧಿಸಿದ್ದರು. ಸುದೀರ್ಘ ವಿಚಾರಣೆ ಬಳಿಕ ಇದೀಗ ಭಯೋತ್ಪಾದನಾ-ವಿರೋಧಿ ಕಾಯ್ದೆ 1997 ರ ಅಡಿಯಲ್ಲಿ ಲಖ್ವಿಗೆ  ಭಯೋತ್ಪಾದನಾ ವಿರೋಧಿ ನ್ಯಾಯಾಲಯ (ATC) ಲಾಹೋರ್, 15 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಪಾಕ್ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ; ಭಾರತದ ತಿರುಗೇಟಿಗೆ ಐವರ ಸಾವು !..

ಉಗ್ರ ಚಟುವಟಿಕೆಗೆ ಪ್ರೋತ್ಸಾಹ ನೀಡುತ್ತಿರುವ ಪಾಕಿಸ್ತಾವನ್ನು ಫೈನಾನ್ಶಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್ ಈಗಾಗಲೇ ಬೂದು ಪಟ್ಟಿಗೆ ಸೇರಿಸಿದೆ. ಇದೀಗ ಮುಂದಿನ ಫೆಬ್ರವರಿಯಲ್ಲಿ ಮತ್ತೆ ಫೈನಾನ್ಶಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್ ಸಭೆ ಸೇರುತ್ತಿದೆ. ಬೂದು ಪಟ್ಟಿಯಿಂದ ಪಾಕ್ ಹೆಸರನ್ನು ತೆಗೆಸಲು ಇದೀಗ ಪಾಕಿಸ್ತಾನ ಉಗ್ರರ ವಿರುದ್ಧ ಕಠಿಣ ಕ್ರಮ ಜಾರಿಗೊಳಿಸುತ್ತಿದ್ದೇವೆ ಎಂದು ಸಾರಲು ಈ ರೀತಿಯ ಕ್ರಮ ಕೈಗೊಳ್ಳುತ್ತಿದೆ ಅನ್ನೋ ಮಾತುಗಳು ಬಲವಾಗಿ ಕೇಳಿಬರುತ್ತಿದೆ.

ಭಯೋತ್ಪಾದಕ ಕೃತ್ಯಗಳಿಗೆ ಹಣಕಾಸು ನೆರವು ಒದಗಿಸಿದ ಆರೋಪದ ಮೇರೆಗೆ ಜೈಶ್ ಇ ಮೊಹಮ್ಮದ್ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ವಿರುದ್ಧ ಪಾಕಿಸ್ತಾನ ನ್ಯಾಯಾಲಯ ಇತ್ತೀಚೆಗೆ ಬಂಧನ ವಾರೆಂಟ್ ಹೊರಡಿಸಲಾಗಿದೆ. 

ಫೈನಾನ್ಶಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್(FATF)2018ರಲ್ಲಿ ಪಾಕಿಸ್ತಾನವನ್ನು ಗ್ರೇ ಪಟ್ಟಿಗೆ ಸೇರಿಸಲಾಗಿದೆ. ಪಾಕಿಸ್ತಾನ ಭಯೋತ್ಪಾದಕ ಕೃತ್ಯಗಳಿಗೆ ಹಣಕಾಸು ನೆರವು ಹಾಗೂ ಮನಿ ಲಾಂಡರಿಂಗ್ ಪ್ರಕರಣಗಳನ್ನು ತಡೆಯುವಲ್ಲಿ ವಿಫಲವಾಗಿದೆ ಅನ್ನೋ ಕಾರಣಕ್ಕೆ ಪಾಕಿಸ್ತಾನವನ್ನು ಬೂದು ಪಟ್ಟಿಗೆ ಸೇರಿಸಲಾಗಿದೆ. ಭಯೋತ್ಪಾದನೆ ಕೃತ್ಯಗಳಿಗೆ ಹಣದ ದುರುಪಯೋಗವನ್ನು ನಿಯಂತ್ರಿಸುವ ಪ್ರಯತ್ನವನ್ನು  ಪಾಕಿಸ್ತಾನ ಮಾಡಬೇಕಿದೆ ಎಂದು FATF ಸೂಚಿಸಿತ್ತು. ಇದೀಗ ಈ ಎಲ್ಲಾ ಕಸರತ್ತುಗಳು ಬೂದು ಪಟ್ಟಿಯಿಂದ ಹೊರಬರಲು ಪಾಕ್ ಮಾಡುತ್ತಿರುವ ಕಳ್ಳಾಟ ಎಂಬುದು ಗೌಪ್ಯವಾಗಿ ಉಳಿದಿಲ್ಲ.